ಪುತ್ತೂರು, ಜುಲೈ 12: ಜನತಾದಳ (ಜಾತ್ಯತೀತ) ಪಕ್ಷದ ಪುತ್ತೂರು ವಿಧಾನಸಭಾ ಕ್ಷೇತ್ರ ಮಹಿಳಾ ಘಟಕದ ಸಭೆಯು ಭಾನುವಾರ ಸಂಜೆ 3.00 ರಿಂದ ನಡೆಯಿತು. ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಆಯೋಜಿಸಲಾದ ಈ ಸಭೆಯಲ್ಲಿ ಸಂಘಟನೆ ವಿಸ್ತರಣೆ, ಮಹಿಳೆಯರ ಸಕ್ರಿಯ ಭಾಗವಹಿಸುವಿಕೆ ಹಾಗೂ ಸದಸ್ಯತ್ವ ಅಭಿಯಾನದ ಕುರಿತು ಸಮಗ್ರ ಚರ್ಚೆ ನಡೆಯಿತು.
ಸಭೆಯಲ್ಲಿ ಪಕ್ಷದ ಬಲವರ್ಧನೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಪ್ರಥಮ ಹಂತದ ಮಹಿಳಾ ಸಂಘಟನಾ ಸಭೆಯನ್ನು ಯಶಸ್ವಿಯಾಗಿ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಹಲವು ಮಹಿಳೆಯರನ್ನು ಜೆಡಿಎಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಳಿಸಲಾಯಿತು.
ಪುತ್ತೂರು ತಾಲೂಕು ಅಧ್ಯಕ್ಷ ಪ್ರಭಾಕರ್ ಸಾಲಿಯಾನ್ ಪಕ್ಷ ಸಂಘಟನೆ ಕುರಿತು ಮಾತನಾಡಿದರು
ಸಭೆಯಲ್ಲಿ ಜೆಡಿಎಸ್ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ರಮೀಜಾ ಭಾನು ಅವರು ಮಾತನಾಡಿ, ಮಹಿಳೆಯರು ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಾಗ ಮಾತ್ರ ಪಕ್ಷ ಮತ್ತಷ್ಟು ಸದೃಢವಾಗಲಿದೆ ಎಂದು ಹೇಳಿದರು. ಗ್ರಾಮ ಮಟ್ಟದಿಂದ ಮಹಿಳಾ ಸಂಘಟನೆಯನ್ನು ವಿಸ್ತರಿಸಿ ಪಕ್ಷವನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ನಿರಂತರ ಕಾರ್ಯನಿರ್ವಹಿಸುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಮಹಿಳಾ ಘಟಕದ ಕಾರ್ಯದ್ಯಕ್ಷೆ ಪ್ರಿಯಾ ಸಾಲಿಯಾನ್,ಹಿರಿಯ ಉಪಾಧ್ಯಕ್ಷೆ ಚೂಡಾಮಣಿ,ಪ್ರಧಾನ ಕಾರ್ಯದರ್ಶಿ ಜ್ಯೋತಿಕಾ ಜೈನ್,ಉಪಾದ್ಯಕ್ಷೆ ಶಾರದಾ ಶೆಟ್ಟಿ, ಪುತ್ತೂರು ವಿಧಾನಸಭಾ ಕ್ಷೇತ್ರ ಮಹಿಳಾ ಘಟಕದ ಅಧ್ಯಕ್ಷೆ ಮೀನಾಕ್ಷಿ ಮಂಜುನಾಥ್,

ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ ಜಪ್ಪು, ಮೀನುಗಾರರ ಘಟಕದ ರಾಜ್ಯಾದ್ಯಕ್ಷ ರತ್ನಾಕರ ಸುವರ್ಣ, ಪುತ್ತೂರು ಯುವ ಘಟಕದ ಅಧ್ಯಕ್ಷ ಶಿವ ಸಾಲಿಯಾನ್ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಮಹಿಳಾ ಸದಸ್ಯರು ಉಪಸ್ಥಿತರಿದ್ದರು.

