ಉಡುಪಿ: ವಿಧಾನಸಭಾ ಚುನಾವಣೆ ಪ್ರಚಾರಕ್ಕೆಂದು ಈ ವಾರ ಗಣ್ಯಾತಿಗಣ್ಯರು ಜಿಲ್ಲೆಗೆ ಆಗಮಿಸಲಿದ್ದಾರೆ. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಮುಖಂಡ ರಾಹುಲ್ ಗಾಂಧಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಹಿನ್ನೆಲೆಯಲ್ಲಿ ಜಿಲ್ಲೆಯ ಕೆಲವೆಡೆ ಬಿಗಿ ಭದ್ರತೆ ವ್ಯವಸ್ಥೆ ಮಾಡಲಾಗುತ್ತಿದೆ. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಮುಖಂಡರಾದ ರಾಹುಲ್ ಗಾಂಧಿಯವರು ಎಪ್ರಿಲ್ 27ರಂದು ಉಚ್ಚಿಲದಲ್ಲಿ ಮೀನುಗಾರರೊಂದಿಗೆ ಸಂವಾದ ನಡೆಸಲಿದ್ದಾರೆ. ಆದಿ ಉಡುಪಿಯಿಂದ ಉಚ್ಚಿಲಕ್ಕೆ ಝೀರೋ ಟ್ರಾಫಿಕ್‌ನಲ್ಲಿ ಹೋಗುವುದರಿಂದ ಅಗತ್ಯ ಭದ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಎಪ್ರಿಲ್ 29ರಂದು ಶನಿವಾರ ಕಟಪಾಡಿಯ ಗ್ರೀನ್ ವ್ಯಾಲಿ ಮೈದಾನದಲ್ಲಿ ಹಾಗೂ ಸಿದ್ದಾಪುರದಲ್ಲಿ ನಡೆಯುವ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಆದಿಉಡುಪಿ ಹಾಗೂ ಬೈಂದೂರಿನ ಅರೆಶಿರೂರಿನ ಹೆಲಿಪ್ಯಾಡ್ ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ.
©2021 Tulunada Surya | Developed by CuriousLabs