ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿದಂತೆ 16 ಕಡೆ ಹಲವರ ಮನೆ, ಕಚೇರಿಗಳ ಮೇಲೆ ದಾಳಿಮಾಡಿ ಪರಿಶೀಲನೆ ನಡೆಸಲಾಗುತ್ತಿದೆ. ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದರು ಎಂಬ ಆರೋಪದ ಮೇಲೆ NIA ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಹವಾಲಾ ಫಂಡಿಂಗ್, ಭಯೋತ್ಪಾದಕ ಕೃತ್ಯಕ್ಕೆ ಗಲ್ಪ್ ರಾಷ್ಟ್ರಗಳಿಂದ ಹವಾಲಾ ಹಣ ಬಳಕೆ ಹಿನ್ನಲೆಯಲ್ಲಿ ದಾಳಿ ನಡೆಸಲಾಗಿದೆ ಎನ್ನಲಾಗಿದೆ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.ಇತ್ತೀಚಗೆ ಹವಾಲಾ ವಿಚಾರದಲ್ಲಿ ಹಲವರ ಬಂಧನ ನಡೆದಿತ್ತು
©2021 Tulunada Surya | Developed by CuriousLabs