ದಕ್ಷಿಣ ಕನ್ನಡ : ಸುಡು ಬಿಸಿಲಿನಿಂದ ತತ್ತರಿಸಿದ ಜನರಿಗೆ ಸಂತಸದ ಸುದ್ದಿಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆಯಾಗಲಿದ್ದು, ಬಿಸಿಲಿನ ಬೇಗೆಯಿಂದ ತತ್ತರಿಸಿದ ಜನರಿಗೆ ತಂಪೆರೆಯಲಿದೆ.
ಬೆಂಗಳೂರು, ಉಡುಪಿ, ರಾಯಚೂರು, ಯಾದಗಿರಿ, ಕಲಬುರಗಿ, ವಿಜಯಪುರ, ಬೀದರ್, ಕೊಪ್ಪಳ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹುಣಸೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ, ರಾಮನಗರ, ಮಾಲೂರು, ಹೊಸಕೋಟೆ, ಕನಕಪುರ, ರಾಯಚೂರು, ಸರಗೂರು, ಪರಶುರಾಂಪುರ, ಕೃಷ್ಣರಾಜಸಾಗರ, ಸೈದಾಪುರ, ಹಾಸನ, ಕುಣಿಗಲ್, ಕೆಐಎಎಲ್, ಖಜೂರಿ, ತಿರುಮಲ, ಚಾಮರಾಜನಗರ, ಕೃಷ್ಣರಾಜಪೇಟೆ, ಬೀದರ್, ಗೋಣಿಕೊಪ್ಪಲು, ಹರದನಹಳ್ಳಿ, ಶ್ರೀರಂಗಪಟ್ಟಣ, ಚಿಕ್ಕನಹಳ್ಳಿ, ಬೆಳ್ಳೂರು, ಮೈಸೂರಿನಲ್ಲಿ ಮಳೆಯಾಗಲಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸುತ್ತಮುತ್ತ ಮೋಡಕವಿದ ವಾತಾವರಣವಿರಲಿದ್ದು ಮಳೆ ಬರುವ ಎಲ್ಲಾ ಸಾಧ್ಯತೆಗಳಿವೆ ಎಂದು ಈಗಾಗಲೇ ಹವಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ನೀಡಿದೆ.