Friday, April 19, 2024
spot_img
More

    Latest Posts

    ಬೆಂಗಳೂರು: ಮಳೆಗೆ ಪೂರ್ಣ ಮನೆ ಹಾನಿಯಾಗಿದ್ದರೆ 1 ಲಕ್ಷ ಪರಿಹಾರ – ಸಿಎಂ

    ಬೆಂಗಳೂರು: ರಾಜ್ಯದಲ್ಲಿ ಸುರಿದ ನಿರಂತರ ಮಳೆಯಿಂದ ಆದ ನಷ್ಟ ಅಷ್ಟಿಷ್ಟಲ್ಲ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹಾನಿಯಾದ ರಸ್ತೆ ದುರಸ್ತಿಗೆ 500 ಕೋಟಿ ರೂ. ನೀಡಲಾಗಿದೆ. ಮನೆ ಸಂಪೂರ್ಣ ಹಾನಿಯಾಗಿದ್ದರೆ 1 ಲಕ್ಷ ರೂ ಪರಿಹಾರ ನೀಡಲಾಗುತ್ತದೆ. ತಕ್ಷಣವೇ 1 ಲಕ್ಷ ರೂ. ಬಿಡುಗಡೆ ಮಾಡಲು ಸೂಚಿಸಿದ್ದೇವೆ. ಭಾಗಶಃ ಮನೆ ಹಾನಿಗೆ ಹಣ ಬಿಡುಗಡೆಗೆ ಆದೇಶಿಸಿದ್ದೇನೆ ಅಂತ ತಿಳಿಸಿದ್ದಾರೆ.

    ಬೆಳೆ ಸಮೀಕ್ಷೆ ಪರಿಹಾರ ಆ್ಯಪ್ನಲ್ಲಿ ಎಂಟ್ರಿಯಾಗಬೇಕು . ಅದರಂತೆ ಪರಿಹಾರ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.

    ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ ಜಿಲ್ಲೆಯಲ್ಲಿ ಹೆಚ್ಚು ಹಾನಿಯಾಗಿದೆ. ರಾಜ್ಯದಲ್ಲಿ ಡಿಸಿಗಳ ಖಾತೆಯಲ್ಲಿ 689 ಕೋಟಿ ರೂ. ಇದೆ. ಅಗತ್ಯವಿದ್ದಲ್ಲಿ ಹೆಚ್ಚುವರಿ ಪರಿಹಾರ ಬಿಡುಗಡೆ ಮಾಡಲು ಆರ್ಥಿಕ ಇಲಾಖೆ ಅಧಿಕಾರಿಗಳಿಗೆ ಬೊಮ್ಮಾಯಿ ಸೂಚಿಸಿದ್ದಾರೆ. ಕೃಷಿ, ಕಂದಾಯ, ತೋಟಗಾರಿಕೆ ಅಧಿಕಾರಿಗಳಿಂದ ಜಂಟಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಿರುವ ಸಿಎಂ, ಬೆಳೆ ನಷ್ಟ ಪರಿಹಾರ ವಿತರಣೆಯೂ ತ್ವರಿತವಾಗಿ ಆಗಬೇಕು. 15ರಿಂದ 20 ದಿನ ಬೆಳೆ ಹಾನಿ ಸಮೀಕ್ಷೆ ನಡೆಸಲು ತಿಳಿಸಿದ್ದಾರೆ.

    ಆಗಸ್ಟ್, ಸೆಪ್ಟೆಂಬರ್ ನಲ್ಲಾದ ಬೆಳೆ ಹಾನಿಗೆ 1.5 ಲಕ್ಷ ರೈತರಿಗೆ 130 ಕೋಟಿ ರೂ. ಬಿಡುಗಡೆಯಾಗಿದೆ. ಉಳಿದ 79,000 ರೈತರಿಗೆ 52 ಕೋಟಿ ಕೂಡಲೇ ಬಿಡುಗಡೆ ಮಾಡಲಾಗುವುದು ಎಂದು ಬೊಮ್ಮಾಯಿ ಹೇಳಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss