ರಾಜ್ ಬಿ ಶೆಟ್ಟಿ ನಾಯಕರಾಗಿ ನಟಿಸಿರುವ ‘ಟೋಬಿ’ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ವಿಭಿನ್ನ ಕಥೆಯ ಈ ಚಿತ್ರ ಆಗಸ್ಟ್ 25 ರಂದು ಬಿಡುಗಡೆಯಾಗಲಿದೆ. ಪ್ರತಿಷ್ಠಿತ ಕೆ.ವಿ.ಎನ್ ಪ್ರೊಡಕ್ಷನ್ಸ್ ಈ ಚಿತ್ರದ ವಿತರಣೆ ಹಕ್ಕು ಪಡೆದುಕೊಂಡಿದೆ. ಟೋಬಿ ಚಿತ್ರಕ್ಕೆ ‘ಮಾರಿ ಮಾರಿ ..ಮಾರಿಗೆ ದಾರಿ’ ಎಂಬ ಅಡಿಬರಹವಿದೆ.
ಸಿನಿಮಾ ತಂಡ ಅಧಿಕೃತವಾಗಿಯೇ ಟೋಬಿ ಚಿತ್ರದ ಮಾಹಿತಿಯನ್ನ ಕೊಟ್ಟಿದೆ. ನಮ್ಮ ಸಿನಿಮಾದ ಟೈಟಲ್ ಟೋಬಿ ಅನ್ನೋದೇ ಆಗಿದೆ. ಮೋಷನ್ ಪೋಸ್ಟರ್ ಮೂಲಕವೇ ಈ ಒಂದು ಮಾಹಿತಿಯನ್ನ ಕೊಟ್ಟಿದೆ.
ರಾಜ್ ಬಿ ಶೆಟ್ಟಿ ಈವರೆಗಿನ ಚಿತ್ರಗಳ ಪೈಕಿ ಟೋಬಿ ಬಿಗ್ ಬಜೆಟ್ ನ ಚಿತ್ರವಾಗಿದೆ. ಲೈಟರ್ ಬುದ್ಧ ಫಿಲಂಸ್, ಅಗಸ್ತ್ಯ ಫಿಲ್ಮ್ಸ್ ಹಾಗೂ ಕಾಫಿ ಗ್ಯಾಂಗ್ ಸ್ಟುಡಿಯೋ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ನಿರ್ಮಾಪಕರು ರವಿ ರೈ ಕಳಸ ಈ ಚಿತ್ರದ ನಿರ್ಮಾಪಕರು ಹಾಗೂ ಶಾಮಿಲ್ ಬಂಗೇರ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.ಮೋಷನ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಈ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದ್ದು, ಮೋಷನ್ ಪೋಸ್ಟರ್ ಸಾಕಷ್ಟು ಕುತೂಹಲ ಮೂಡಿಸಿದೆ. ಸಂಭಾಷಣೆಗಾರರಾಗಿ, ನಿರ್ದೇಶಕರಾಗಿಯೂ ಗುರುತಿಸಿಕೊಂಡಿರುವ ಟಿ.ಕೆ ದಯಾನಂದ್, ಬೆಲ್ ಬಾಟಮ್, ಅಶೋಕ ಬ್ಲೇಡ್ ಸೇರಿದಂತೆ ಅನೇಕ ಸಿನಿಮಾಗಳಿಗೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಟೋಬಿಗೂ ಕೂಡ ಕಥೆಬರೆದಿದ್ದಾರೆ.