ಬೆಂಗಳೂರು : ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಿಂದಾಗಿ ಜುಲೈ 12 ರಂದು ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯೊಬ್ಬರು 14 ದಿನಗಳ ಬಳಿಕ ಪ್ರತ್ಯಕ್ಷವಾಗಿದ್ದಾರೆ.
ಹೌದು, ಜುಲೈ 12 ರಂದು ಚಿಕ್ಕಮಗಳೂರಿನ ಉಂಡೇ ದಾಸರಹಳ್ಳಿ ರಾಜಕಾಲುವೆಯಲ್ಲಿ ಸುರೇಶ್ ಎಂಬ ಕೊಚ್ಚಿ ಹೋಗಿದ್ದರು. ಸುರೇಶ್ಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ಸತತ 7 ದಿನಗಳ ನಡೆಸಿದ್ದರು. ಶೋಧ ಕಾರ್ಯ ನಡೆಸಿ ಸುಸ್ತಾಗಿ ಸಿಬ್ಬಂದಿ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದರು. ಇದೀಗ ಘಟನೆ ನಡೆದು 14 ದಿನಗಳ ಬಳಿಕ ಸುರೇಶ್ ದಿಢೀರ್ ಪ್ರತ್ಯಕ್ಷವಾಗಿ ಎಲ್ಲರನ್ನೂ ಹುಬ್ಬೇರಿಸುವಂತೆ ಮಾಡಿದ್ದಾರೆ.
ಚಿಕ್ಕಮಗಳೂರಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಗಾಗಿ ಎಸ್ ಡಿಆರ್ ಎಫ್ ಸಿಬ್ಬಂದಿ ಸತತ 7 ದಿನಗಳ ಕಾಲ ಶೋಧ ಕಾರ್ಯ ನಡೆಸಿದ್ದರು. 14 ದಿನಗಳ ಬಳಿಕ ಇದೀಗ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ಸುರೇಶ್ ಎಂಬಾತ ಚಿಕ್ಕಮಗಳೂರಿನಲ್ಲಿ ಪ್ರತ್ಯಕ್ಷನಾಗಿದ್ದಾನೆ.
