ನವದೆಹಲಿ: ವಿದೇಶಗಳಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನಲೆ ಪ್ರಯಾಣಿಕರಿಗೆ ವಿಮಾನ ನಿಲ್ದಾಣಗಳಲ್ಲಿ ಕೋವಿಡ್ ನ ರ್ಯಾಂಡಮ್ ಪರೀಕ್ಷೆಗೆ ಸೂಚನೆ ನೀಡಲಾಗಿದೆ. ಅಂತಾರರಾಷ್ಟ್ರೀಯ ಪ್ರಯಾಣಿಕರಿಗೆ ರ್ಯಾಂಡಮ್ ಮಾದರಿ ಪರೀಕ್ಷೆಯನ್ನು ವಿಮಾನ ನಿಲ್ದಾಣಗಳಲ್ಲಿ ನಡೆಸಲಾಗುವುದು ಎಂದು ಹೇಳಲಾಗಿದೆ.
ಕೇಂದ್ರ ಆರೋಗ್ಯ ಸಚಿವ ಮನ್ಮುಖ್ ಮಾಂಡವಿಯಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಪ್ರಸುತ್ತ ದೇಶದಲ್ಲಿ ಒಮಿಕಾನ್ ಪ್ರಕರಣಗಳು ಪತ್ತೆಯಾಗಿದೆ. ಎಲ್ಲರಿಗೂ ಎಚ್ಚರಿಕೆ ವಹಿಸುವಂತೆ ಮತ್ತು ಕಣ್ಣಾವಲು ಬಲಪಡಿಸಲು ನಾನು ನಿರ್ದೇಶನ ನೀಡಿದ್ದೇನೆ ಎಂದು ಮಾಂಡವಿಯಾ ಹೇಳಿದ್ದಾರೆ.
