Monday, November 29, 2021

ಮಂಗಳೂರು: ನಾಗಬನ ಧ್ವಂಸ ಪ್ರಕರಣ; 8 ಆರೋಪಿಗಳ ಬಂಧನ

ಮಂಗಳೂರು: ನಗರದ ಕೂಳೂರು ಹಾಗೂ ಕೋಡಿಕಲ್ ನಲ್ಲಿ ನಾಗಬನಕ್ಕೆ ನುಗ್ಗಿ ನಾಗದೇವರ ಬಿಂಬದ ಕಲ್ಲಿಗೆ ಹಾನಿ ಮಾಡಿದ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ‌. ಸಫ್ವಾನ್, ಪ್ರವೀಣ್...
More

    Latest Posts

    ಸದ್ಯಕ್ಕೆ ಶಾಲಾ ಕಾಲೇಜುಗಳಿಗೆ ರಜೆ ಕೊಡುವ ಚಿಂತನೆ ಇಲ್ಲ – ಬಿ.ಸಿ ನಾಗೇಶ್

    ತುಮಕೂರು: ರಾಜ್ಯದ ಎರಡು ಮೂರು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.ಧಾರವಾಡದ ಎಸ್ ಡಿ ಎಂ ಕಾಲೇಜು,ಬೆಂಗಳೂರಿನ ಒಂದು ಶಾಲೆ,ಮೈಸೂರಿನಲ್ಲಿ ಪಿಯು ಕಾಲೇಜಿನ 5 ಮಕ್ಕಳಿಗೆ ಪಾಸಿಟಿವ್ ಬಂದಿದೆ....

    ವಿದೇಶಿ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಸವರಾಜ ಬೊಮ್ಮಾಯಿ

    ತುಮಕೂರು : ರಾಜ್ಯದಲ್ಲಿ ಹೊಸ ಒಮಿಕ್ರಾನ್ ವೈರಸ್ (Omicron Variant ) ಆತಂಕದ ಹಿನ್ನೆಲೆಯಲ್ಲಿ ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಕಡ್ಡಾಯ (Corona Test mandatory) ಮಾಡಲಾಗಿದೆ...

    ಉಡುಪಿ ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ ಮಾಡುತ್ತಿರುವ ಯಕ್ಷಗಾನ ವೇಷಧಾರಿಗಳು -ಯಕ್ಷಗಾನ ಪ್ರಿಯರಿಂದ ಆಕ್ರೋಶ

    ಉಡುಪಿ: ಯಕ್ಷಗಾನ‌ ಕಲೆ ಎಲ್ಲೆಡೆ ಮನೆಮಾತು.ಹೀಗಾಗಿ ಪ್ರತೀ ಘಟನೆ ,ಪ್ರಸಂಗ,ಹಾಸ್ಯ,ವಿಡಂಬನೆ ,ರಾಜಕೀಯ ಕಾಲೆಳೆಯುವಿಕೆಗೂ ಪಾತ್ರಧಾರಿಗಳು ಯಕ್ಷಗಾನ ಕಲೆಯನ್ನು ಬಳಸುವುದುಂಟು.ಆದರೆ ಇಲ್ಲಿ ಇಬ್ಬರು ಯಕ್ಷಗಾನ ವೇಷಧಾರಿಗಳು, ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ...

    ಸುರತ್ಕಲ್: ದುಷ್ಕರ್ಮಿಯಿಂದ ATMಗೆ ಹಾನಿ

    ಸುರತ್ಕಲ್: ಸುರತ್ಕಲ್ ಸಮೀಪದ ಎಂಆರ್ ಪಿಎಲ್ ರಸ್ತೆಯ ಕಟ್ಲ ತಿರುವು ಬಳಿಯ ಎಸ್ ಬಿ ಐ ಬ್ಯಾಂಕಿನ ATM ನ್ನು ವ್ಯಕ್ತಿ ಯೋರ್ವ ಹಾನಿ ಮಾಡಿದ ಘಟನೆ ನಡೆದಿದೆ.ಕಳೆದ ಸೆ.9...

    ಎಲ್ ಜೆಪಿ ಸಂಸದ ಪ್ರಿನ್ಸ್ ರಾಜ್ ಪಾಸ್ವಾನ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು!

    ನವದೆಹಲಿ: ಎಲ್‌ಜೆಪಿ ಮುಖ್ಯಸ್ಥ ಚಿರಾಗ್ ಪಾಸ್ವಾನ್ ಅವರ ಸೋದರ ಸಂಬಂಧಿ ಮತ್ತು ಬಿಹಾರದ ಸಮಸ್ತಿಪುರದ ಸಂಸದ ಪ್ರಿನ್ಸ್​ ರಾಜ್ ಪಾಸ್ವಾನ್ ವಿರುದ್ಧ ದೆಹಲಿ ಪೊಲೀಸರು ಅತ್ಯಾಚಾರ, ಕ್ರಿಮಿನಲ್ ಸಂಚು ಮತ್ತು ಸಾಕ್ಷ್ಯ ನಾಶದ ಪ್ರಕರಣವನ್ನು ದಾಖಲಿಸಿದ್ದಾರೆ.

    ಇವರ ವಿರುದ್ದ ಮೂರು ತಿಂಗಳ ಹಿಂದೆಯೇ ಯುವತಿಯೊಬ್ಬಳು ದೆಹಲಿಯ ಕನಾಟ್​​​ ಪ್ರದೇಶದಲ್ಲಿರುವ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದಳು. ಈ ಕೇಸ್​ ದೆಹಲಿ ಕೋರ್ಟ್ ಮೆಟ್ಟಿಲೇರಿತ್ತು. ಇದೀಗ ನ್ಯಾಯಾಲಯದ ನಿರ್ದೇಶನದ ಮೇರೆಗೆ ಪೊಲೀಸರು ಪ್ರಿನ್ಸ್ ರಾಜ್ ಪಾಸ್ವಾನ್ ವಿರುದ್ಧ ಸೆಪ್ಟೆಂಬರ್ 9 ರಂದು ಎಫ್ಐಆರ್ ದಾಖಲಿಸಿದೆ.ಸಂತ್ರಸ್ತೆ ಯುವತಿಯೂ ತಾನು ಎಲ್ ಜೆಪಿ ಕಾರ್ಯಕರ್ತೆ ಎಂದು ಹೇಳಿಕೊಂಡಿದ್ದು, ತಾನು ಪ್ರಜ್ಞಾಹೀನ ಸ್ಥಿತಿಯಲ್ಲಿರುವಾಗ ತನಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾಳೆ.

    ಯುವತಿಯ ದೂರಿನಲ್ಲಿ ಏನಿದೆ?
    ಯುವತಿ ಮೂರು ತಿಂಗಳ ಹಿಂದೆಯೇ ದೂರು ನೀಡಿದ್ದಾಳೆ. ‘ನಾನು ಎಲ್​ಜೆಪಿ ಕಾರ್ಯಕರ್ತೆ. ಮೊದಲು ಪ್ರಿನ್ಸ್​ ರಾಜ್​ರನ್ನು ಕಳೆದ ವರ್ಷ ಪಕ್ಷದ ಕಚೇರಿಯಲ್ಲಿ ಭೇಟಿಯಾಗಿದ್ದೆ. ಅದಾದ ಮೇಲೆ ನಾವು ಸಂಪರ್ಕದಲ್ಲಿ ಇದ್ದೆವು. ಅದಾದ ಬಳಿಕ ಹಲವು ಸಭೆಗಳಲ್ಲಿ ಭೇಟಿಯಾದೆವು. ಅಂಥದ್ದೇ ಒಂದು ಸಭೆಯಲ್ಲಿ ಇಬ್ಬರೂ ಭೇಟಿಯಾದಾಗ, ನಾನು ಒಂದು ಟೇಬಲ್​ ಮೇಲಿದ್ದ ನೀರಿನ ಬಾಟಲ್​ ತೆಗೆದುಕೊಂಡೆ. ಅಲ್ಲೇ ಇದ್ದ, ಪ್ರಿನ್ಸ್​ ರಾಜ್​ ಪಾಸ್ವಾನ್​..ಆ ನೀರು ಬೇಡ. ನಾನು ಕೊಡುತ್ತೇನೆ ಎಂದು ಹೇಳಿ ಗ್ಲಾಸ್​​ನಲ್ಲಿ ನೀರು ಕೊಟ್ಟರು. ಅದನ್ನು ಅದನ್ನು ಸೇವಿಸಿದ ನಂತರ, ನಾನು ಪ್ರಜ್ಞಾಹೀನನಾಗಿದ್ದೆ.ನನಗೆ ಮರಳಿ ಎಚ್ಚರ ಆಗುವಷ್ಟರಲ್ಲಿ ನನ್ನ ತಲೆ ಪ್ರಿನ್ಸ್​ ರಾಜ್​ ಭುಜದ ಮೇಲೆ ಇತ್ತು. ನೀನೀಗ ಅಸ್ವಸ್ಥಳಾಗಿರುವೆ, ಮನೆಗೆ ಹೋಗು ಎಂದರು. ನನಗೆ ಅನಾರೋಗ್ಯವಿದೆ ಎಂದು ಅವರು ನನಗೆ ಹೇಳಿದರು ಇದಾದ ಬಳಿಕ ನಾನು ಮನೆಗೆ ಮರಳಿದೆ. ನನ್ನೊಂದಿಗೆ ಏನಾಯಿತು ಎಂದು ನಾನು ಅವರನ್ನು ಮತ್ತೊಮ್ಮೆ ಪ್ರಶ್ನಿಸಿದೆ, ನಂತರ ಅವರು ರೆಕಾರ್ಡ್ ಮಾಡಿದ ವಿಡಿಯೋವನ್ನುತೋರಿಸಿದರು. ನನಗೆ ಪ್ರಜ್ಞೆ ಇಲ್ಲದಾಗ ಅವರು ನನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ. ವಿಡಿಯೋದಲ್ಲಿ ಅವರ ಮುಖ ಕಾಣಿಸುತ್ತಿಲ್ಲ. ಅದೇ ವಿಡಿಯೋ ಇಟ್ಟುಕೊಂಡು, ತನ್ನನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದಾರೆ, ವಿಡಿಯೋ ಲೀಕ್ ಮಾಡುವ ಬೆದರಿಕೆ ಹಾಕುತ್ತಿದ್ದಾರೆ’ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.ಇನ್ನು ಈ ಎಲ್ಲಾ ಆರೋಪಗಳನ್ನು ಅಲ್ಲಗಳೆದಿರುವ ಸಂಸದ ಪಾಸ್ವಾನ್ ” ನನ್ನ ವಿರುದ್ಧ ಮಾಡಿದ ಯಾವುದೇ ಹಕ್ಕು ಅಥವಾ ಪ್ರತಿಪಾದನೆಯನ್ನು ನಾನು ಸ್ಪಷ್ಟವಾಗಿ ನಿರಾಕರಿಸುತ್ತೇನೆ. ಅಂತಹ ಎಲ್ಲಾ ಹಕ್ಕುಗಳು ಅಸ್ಪಷ್ಟವಾಗಿ ಸುಳ್ಳು, ಕಪೋಲಕಲ್ಪಿತವಾಗಿದ್ದು, ನನ್ನ ಪ್ರತಿಷ್ಠೆಗೆ ಧಕ್ಕೆ ತರುವ ಮೂಲಕ ವೃತ್ತಿಪರವಾಗಿ ಮತ್ತು ವೈಯಕ್ತಿಕವಾಗಿ ನನ್ನ ಮೇಲೆ ಒತ್ತಡ ಹೇರುವ ದೊಡ್ಡ ಕ್ರಿಮಿನಲ್ ಪಿತೂರಿಯ ಭಾಗವಾಗಿದೆ “ಎಂದು ಪತ್ರಿಕಾ ಪ್ರಕಟಣೆಯಲ್ಲಿ ಬರೆದಿದ್ದಾರೆ. 

    Latest Posts

    ಸದ್ಯಕ್ಕೆ ಶಾಲಾ ಕಾಲೇಜುಗಳಿಗೆ ರಜೆ ಕೊಡುವ ಚಿಂತನೆ ಇಲ್ಲ – ಬಿ.ಸಿ ನಾಗೇಶ್

    ತುಮಕೂರು: ರಾಜ್ಯದ ಎರಡು ಮೂರು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.ಧಾರವಾಡದ ಎಸ್ ಡಿ ಎಂ ಕಾಲೇಜು,ಬೆಂಗಳೂರಿನ ಒಂದು ಶಾಲೆ,ಮೈಸೂರಿನಲ್ಲಿ ಪಿಯು ಕಾಲೇಜಿನ 5 ಮಕ್ಕಳಿಗೆ ಪಾಸಿಟಿವ್ ಬಂದಿದೆ....

    ವಿದೇಶಿ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಸವರಾಜ ಬೊಮ್ಮಾಯಿ

    ತುಮಕೂರು : ರಾಜ್ಯದಲ್ಲಿ ಹೊಸ ಒಮಿಕ್ರಾನ್ ವೈರಸ್ (Omicron Variant ) ಆತಂಕದ ಹಿನ್ನೆಲೆಯಲ್ಲಿ ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಕಡ್ಡಾಯ (Corona Test mandatory) ಮಾಡಲಾಗಿದೆ...

    ಉಡುಪಿ ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ ಮಾಡುತ್ತಿರುವ ಯಕ್ಷಗಾನ ವೇಷಧಾರಿಗಳು -ಯಕ್ಷಗಾನ ಪ್ರಿಯರಿಂದ ಆಕ್ರೋಶ

    ಉಡುಪಿ: ಯಕ್ಷಗಾನ‌ ಕಲೆ ಎಲ್ಲೆಡೆ ಮನೆಮಾತು.ಹೀಗಾಗಿ ಪ್ರತೀ ಘಟನೆ ,ಪ್ರಸಂಗ,ಹಾಸ್ಯ,ವಿಡಂಬನೆ ,ರಾಜಕೀಯ ಕಾಲೆಳೆಯುವಿಕೆಗೂ ಪಾತ್ರಧಾರಿಗಳು ಯಕ್ಷಗಾನ ಕಲೆಯನ್ನು ಬಳಸುವುದುಂಟು.ಆದರೆ ಇಲ್ಲಿ ಇಬ್ಬರು ಯಕ್ಷಗಾನ ವೇಷಧಾರಿಗಳು, ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ...

    ಸುರತ್ಕಲ್: ದುಷ್ಕರ್ಮಿಯಿಂದ ATMಗೆ ಹಾನಿ

    ಸುರತ್ಕಲ್: ಸುರತ್ಕಲ್ ಸಮೀಪದ ಎಂಆರ್ ಪಿಎಲ್ ರಸ್ತೆಯ ಕಟ್ಲ ತಿರುವು ಬಳಿಯ ಎಸ್ ಬಿ ಐ ಬ್ಯಾಂಕಿನ ATM ನ್ನು ವ್ಯಕ್ತಿ ಯೋರ್ವ ಹಾನಿ ಮಾಡಿದ ಘಟನೆ ನಡೆದಿದೆ.ಕಳೆದ ಸೆ.9...

    Don't Miss

    ಬಂಟ್ವಾಳ: ಕಾಲು ಜಾರಿ ಕೆರೆಗೆ ಬಿದ್ದು ಯುವತಿ ಸಾವು

    ಬಂಟ್ವಾಳ: ಯುವತಿಯೋರ್ವಳು ಅಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕಾರಾಜೆ ಎಂಬಲ್ಲಿ ನಡೆದಿದೆ. ಸಜೀಪ ಮೂಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರಾಜೆ ನಿವಾಸಿ...

    ಪಾಣೆಮಂಗಳೂರು ನೇತ್ರಾವತಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ!

    ಬಂಟ್ವಾಳ: ಟೈಲರ್ ವೃತ್ತಿಗೆಂದು ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವನ ಮೃತದೇಹ ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಪೊಡಿಕ್ಕಳ ಬೆಂಜನಪದವು ನಿವಾಸಿ ನಾರಾಯಣ ಮೂಲ್ಯ (62) ಮೃತಪಟ್ಟ ವ್ಯಕ್ತಿ....

    ಕಾಪು: ರೈಲು ಢಿಕ್ಕಿ ಹೊಡೆದು ಅಪರಿಚಿತ ವ್ಯಕ್ತಿ ಸಾವು

    ಕಾಪು: ರೈಲು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನ.26ರ ಶುಕ್ರವಾರ ಮುಂಜಾನೆ ನಡೆದಿದೆ. ಮೃತರನ್ನು ಮಲ್ಲಾರು ಪಕೀರಣಕಟ್ಟೆ ಎಂ.ಜೆ.ಎಂ ಮಸೀದಿ ಬಳಿಯ ನಿವಾಸಿ ಅಬ್ದುಲ್ ರಜಾಕ್ (48)...

    ಮಂಗಳೂರು: ದೋಣಿಯಿಂದ ಬಿದ್ದು ಮೀನುಗಾರ ಸಾವು

    ಮಂಗಳೂರು: ಇಲ್ಲಿನ ಹಳೆ ಬಂದರು ದಕ್ಕೆಯಿಂದ ಮೀನುಗಾರಿಕೆಗೆಂದು ಬೋಟ್‌ನಲ್ಲಿ ಹೊರಟಿದ್ದ ಮೀನುಗಾರರ ಪೈಕಿ ಮನೋಜ್ ಎಂಬವರು ಸಮುದ್ರಕ್ಕೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಆದರೆ, ಇವರ ವಿಳಾಸ ಹಾಗೂ ಇತರೆ ವಿವರಗಳು ಲಭ್ಯವಾಗಿಲ್ಲ....

    ಬೆಳ್ತಂಗಡಿ: ಪಿಯುಸಿ ವಿದ್ಯಾರ್ಥಿನಿ ನಾಪತ್ತೆ- ದೂರು ದಾಖಲು !

    ಬೆಳ್ತಂಗಡಿ: ಕಸಬಾ ಗ್ರಾಮದ ಮೆಟ್ರಿಕ್ ನಂತರದ ವಿದ್ಯಾರ್ಥಿನಿ ನಿಲಯದಲ್ಲಿದ್ದ ವಿದ್ಯಾರ್ಥಿ ನಿಯೋರ್ವರು ನ.24 ರಂದು ನಾಪತ್ತೆಯಾಗಿದ್ದಾರೆ. ಬೆಳ್ತಂಗಡಿಯ ಜೂನಿಯರ್ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ...