ಬಂಟ್ವಾಳ: ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಕಾನೂನಿನ ಸಂಘರ್ಷಕ್ಕೊಳಗಾದ ಬಾಲಕನೋರ್ವ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ.
ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಅಪ್ರಾಪ್ತ ಬಾಲಕಿ ನೀಡಿದ ದೂರಿನ ಮೇರೆಗೆ ಕಾನೂನಿನ ಸಂಘರ್ಷಕ್ಕೊಳಗಾದ ಬಾಲಕನೋರ್ವನನ್ನು ಫೋಕ್ಸೋ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ.
ಸರಕಾರಿ ಪ್ರೌಢ ಶಾಲೆವೊಂದರಲ್ಲಿ 10 ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದ, ಅಪ್ರಾಪ್ತ ಬಾಲಕಿಗೆ ಇನ್ಸ್ಟಾಗ್ರಾಮ್ ಮೂಲಕ ಬಾಲಕನ ಪರಿಚಯವಾಗಿದ್ದು, ನಂತರ ಕಾನೂನಿನ ಸಂಘರ್ಷಕ್ಕೊಳಗಾದ ಬಾಲಕ ಆಗಾಗ ಬಾಲಕಿಯ ಮನೆಗೆ ಬಂದು ಹೋಗುತ್ತಿದ್ದನು. ಡಿ.2 ರಂದು ಬಾಲಕಿ ಮನೆಯಲ್ಲಿದ್ದ ಸಮಯ ಬಾಲಕ ಕರೆ ಮಾಡಿ ರಾತ್ರಿ 8:30 ಗಂಟೆಗೆ ಬಾಲಕಿಯ ಮನೆಗೆ ಬಂದಿದ್ದು, ಬಾಲಕಿಯು ತಾಯಿಯ ಜೊತೆ ಬಾಲಕ ಮನೆಗೆ ಹೋಗಿ ಬರುವುದಾಗಿ ಹೇಳಿ ಆತನ ಜೊತೆ ಸ್ಕೂಟರಿನಲ್ಲಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ವೆಸಗಿ ಮನೆಗೆ ಬಿಟ್ಟು ಹೋಗಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಬಾಲಕಿಯ ದೂರಿನಂತೆ ಠಾಣೆಯಲ್ಲಿ ಅ.ಕ್ರ 91/2022 ಅ.ಕ್ರ 91/2022 ಕಲಂ 366(A), 376 IPC ಮತ್ತು ಕಲಂ 4 POCSO ಆಕ್ಟ್ ರಂತೆ ಪ್ರಕರಣ ದಾಖಲಾಗಿದ್ದು, ಸಂಘರ್ಷಕ್ಕೊಳಗಾದ ಬಾಲಕನನ್ನು ಬಾಲನ್ಯಾಯ ಮಂಡಳಿಯ ಎದುರು ಹಾಜರುಪಡಿಸಿದ್ದು, ಬಾಲಕನನ್ನು ರಿಮಾಂಡ್ ಹೋಂ ಗೆ ಆದೇಶಿಸಲಾಗಿರುತ್ತದೆ ಎಂದು ತಿಳಿದು ಬಂದಿದೆ.
