Friday, March 29, 2024
spot_img
More

    Latest Posts

    ರಾಜ್ಯ ಸರ್ಕಾರದಿಂದ ಪಡಿತರ ಚೀಟಿದಾರರಿಗೆ ಸಿಹಿಸುದ್ದಿ : ಅಕ್ಕಿ ಜೊತೆಗೆ ಸಿರಿಧಾನ್ಯ ವಿತರಣೆ!

    ಬೆಂಗಳೂರು : ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಮತ್ತೊಂದು ಸಿಹಿಸುದ್ದಿ ನೀಡಲು ಮುಂದಾಗಿದ್ದು, ಪಡಿತರ ವ್ಯವಸ್ಥೆಯಡಿ ಅಕ್ಕಿ ಜೊತೆ ಸಿರಿಧಾನ್ಯ, ಜೋಳ ಮತ್ತು ರಾಗಿಯನ್ನು ಸಮಪ್ರಮಾಣದಲ್ಲಿ ವಿತರಿಸಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.

    ಪಡಿತರ ಚೀಟಿದಾರರಿಗೆ ಅಕ್ಕಿಯ ಜೊತೆಗೆ ರಾಗಿ,ಜೋಳ ಮತ್ತು ಸಿರಿಧಾನ್ಯಗಳನ್ನು ಸಮಪ್ರಮಾಣದಲ್ಲಿ ನೀಡಲು ತಜ್ಞರು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ ಎನ್ನಲಾಗಿದ್ದು, ರಾಜ್ಯ ಸರ್ಕಾರ ಪಡಿತರ ಚೀಟಿದಾರರಿಗೆ ಅಕ್ಕಿ, ಗೋಧಿ ಅಥವಾ ರಾಗಿ ನೀಡುತ್ತಿದೆ. ಪ್ರಧಾನಮಂತ್ರಿಗಳ ಗರೀಬ್ ಕಲ್ಯಾಣ್ ಯೋಜನೆಯಡಿ 5 ಕೆಜಿ ಅಕ್ಕಿಯನ್ನೂ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಕ್ಕಿಯ ಜೊತೆಗೆ ರಾಗಿ, ಜೋಳ ಮತ್ತು ಸಿರಿಧಾನ್ಯಗಳನ್ನು ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಮೈಸೂರು ಭಾಗದಲ್ಲಿ ಅಕ್ಕಿಯ ಜೊತೆಗೆ ರಾಗಿ, ಸಜ್ಜೆ, ನವಣೆ ಸೇರಿದಂತೆ ಸಿರಿಧಾನ್ಯಗಳನ್ನು ನೀಡುವುದು ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ಅಕ್ಕಿ, ಗೋಧಿ ಜೊತೆಗೆ ಜೋಳ ಒದಗಿಸಲು ತಜ್ಞರು ವರದಿ ನೀಡಿದ್ದು, ಈ ವರದಿಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಹೇಳಲಾಗುತ್ತಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss