ಮಂಗಳೂರು : ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ದೇರಳಕಟ್ಟೆಯ ಗ್ರೀನ್ ಗ್ರೌಂಡ್ ನಲ್ಲಿ ಕರಾವಳಿ ಕರ್ನಾಟಕದ ಸಾಹಿತ್ಯ -ಸಾಂಸ್ಕೃತಿಕ ಸಮ್ಮೇಳನ ನಾಡು ನುಡಿ ವೈಭವದ ರತ್ನೋತ್ಸವ ದಶಮ ಸಂಭ್ರಮ ಡಿಸೆಂಬರ್ 18ರಂದು ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ತಿಳಿಸಿದರು.
ಡಿಸೆಂಬರ್ 18ರಂದು ಬೆಳಗ್ಗೆ 9.30ಕ್ಕೆ ದೇರಳಕಟ್ಟೆ ಬೆಳ್ಮ ಪಂಚಾಯತ್ ವಠಾರದಿಂದ ಸಮ್ಮೇಳನಾಧ್ಯಕ್ಷರನ್ನು ಪೂರ್ಣ ಕುಂಭ ಸ್ವಾಗತದೊಂದಿಗೆ ಸಾಂಸ್ಕೃತಿಕ ಮೆರವಣಿಗೆಯಲ್ಲಿ ವೇದಿಕೆಗೆ ಕರೆ ತರಲಾಗುವುದು. ಸಿ.ಎಂ.ಅಬ್ದುಲ್ ಸತ್ತಾರ್ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ರತ್ನ ಎಜ್ಯುಕೇಶನ್ನ ಟ್ರಸ್ಟಿ ರತ್ನಾವತಿ ಕೆ. ಶೆಟ್ಟಿ ಅವರು ಧ್ವಜಾರೋಹಣ ಮಾಡಲಿರುವರು.

ರತ್ನೋತ್ಸವ -2022 ನ್ನು ಧರ್ಮದರ್ಶಿ ಹರಿಕೃಷ್ಣ ಪುನರೂರು ಉದ್ಘಾಟಿಸಲಿದ್ದಾರೆ . ಬೆಳಗ್ಗಿನಿಂದ ಸಂಜೆಯವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿಚಾರಗೋಷ್ಠಿ,ಬಹುಭಾಷಾ ಕವಿಗೋಷ್ಠಿ,ಯಕ್ಷನಾಟ್ಯ ವೈಭವ,ಪ್ರಶಸ್ತಿ ಪ್ರಧಾನ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
