ಕರ್ನಾಟಕ ರಾಜ್ಯ ಕಾಫಿ ಬೆಳೆಗಾರರ ಒಕ್ಕೂಟದಿಂದ ಸಕಲೇಶಪುರದಲ್ಲಿ ನಡೆದ ಕಾಫಿ ಟೆಕ್ ಎಕ್ಸ್ಪೋ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕಲ್ಲು ಗಣಿ ಮಾಲಕರ ಸಂಘದ ಅಧ್ಯಕ್ಷರಾದ ರವೀಂದ್ರ ಶೆಟ್ಟಿ ಬಜಗೋಳಿಯವರನ್ನು ಲೋಕ ಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಹಾಗೂ ಎಂ ಎಲ್ ಸಿ ನಿಂಗಯ್ಯ, ಮಾಜಿ ಮಂತ್ರಿ ಮೋಟಮ್ಮ, ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಡಾ. ಹೆಚ್ ಟಿ ಮೋಹನ್ ಕುಮಾರ್, ಕಾರ್ಯದರ್ಶಿ ಕೃಷ್ಣಪ್ಪ, ಮಾಜಿ ಅಧ್ಯಕ್ಷ ಜಯರಾಮ್, ಮತ್ತಿತರರು ಉಪಸ್ಥಿತರಿದ್ದರು.
ಈ ಸಂಧರ್ಭ ರಾಜ್ಯದ ಕಲ್ಲು ಗಣಿಯ ಸಮಸ್ಯೆಗಳ ಬಗ್ಗೆ ಸಭೆ ಕರೆದು ಸಮಸ್ಯೆ ಪರಿಹಾರ ಮಾಡಲು ಆದ್ಯತೆ ನೀಡುವುದಾಗಿ ಪ್ರಜ್ವಲ್ ರೇವಣ್ಣರವರು ರವೀಂದ್ರ ಶೆಟ್ಟಿಯವರಲ್ಲಿ ತಿಳಿಸಿ ಸಭೆಯ ದಿನಾಂಕ ನಿಗದಿ ಮಾಡುವಂತೆ ತಿಳಿಸಿದರು.

