Saturday, April 20, 2024
spot_img
More

    Latest Posts

    ರಿಯಲ್​ ಸ್ಟಾರ್ ಉಪೇಂದ್ರ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು

    ಬೆಂಗಳೂರು: ಸ್ಯಾಂಡಲ್​ವುಡ್​ ನಟ ರಿಯಲ್ ಸ್ಟಾರ್​ ಉಪೇಂದ್ರ ಆರೋಗ್ಯದಲ್ಲಿ ಏರುಪೇರಾಗಿದ್ದು ನೆಲಮಂಗಲದಲ್ಲಿರುವ ಹರ್ಷ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಇಂದು ಏಕಾಏಕಿ ಮೂಗು ಬ್ಲಾಕ್​ ಆಗಿ, ಉಸಿರಾಟಕ್ಕೆ ತೊಂದರೆಯಾಗಿತ್ತು. ಹೀಗಾಗಿ ಆಸ್ಪತ್ರೆಗೆ ಅಡ್ಮಿಟ್ ಮಾಡಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಅವರು ಸುಧಾರಿಸಿಕೊಂಡಿದ್ದಾರೆ ಎಂದು ಆಸ್ಪತ್ರೆ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

    ರಿಯಲ್​ಸ್ಟಾರ್​ ಉಪೇಂದ್ರ ಅವರು ಸದ್ಯ ಕಬ್ಜ ಮತ್ತು ಯು ಆ್ಯಂಡ್ ಐ ಸಿನಿಮಾ ಶೂಟಿಂಗ್​​ನಲ್ಲಿ ತೊಡಗಿಸಿಕೊಂಡಿದ್ದಾರೆ. ಅವರು ಕಬ್ಜ ಸಿನಿಮಾದಲ್ಲಿ ಸುದೀಪ್​ ಜತೆ ನಟಿಸುತ್ತಿದ್ದು ಈ ಸಿನಿಮಾ ಬಿಡುಗಡೆ ದಿನಾಂಕ ಇನ್ನೂ ಘೋಷಣೆಯಾಗಿಲ್ಲ. ಈ ಮಧ್ಯೆ ಇಂದು ಉಪೇಂದ್ರ ಆಸ್ಪತ್ರೆಗೆ ದಾಖಲಾಗಿದ್ದಾಗಿ ವರದಿಯಾಗಿದೆ. ಇನ್ನೊಂದು ಮೂಲಗಳ ಪ್ರಕಾರ ಅವರು ನಾರ್ಮಲ್​ ಚೆಕಪ್​ಗಾಗಿ ಆಸ್ಪತ್ರೆಗೆ ಹೋಗಿದ್ದರು ಎಂಬ ಮಾಹಿತಿಯೂ ಇದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss