Friday, April 19, 2024
spot_img
More

    Latest Posts

    ಖ್ಯಾತ ಇತಿಹಾಸಕಾರ, ಪದ್ಮವಿಭೂಷಣ ಪುರಸ್ಕೃತ ಬಾಬಾಸಾಹೇಬ್ ಪುರಂದರೆ ವಿಧಿವಶ

    ಮುಂಬೈ: ಖ್ಯಾತ ಇತಿಹಾಸಕಾರ-ಲೇಖಕ, ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತ ಬಾಬಾಸಾಹೇಬ್ ಪುರಂದರೆ(99) ಅವರು ಇಂದು ವಿಧಿವಶರಾಗಿದ್ದಾರೆ.

    ಕೆಲವು ದಿನಗಳಿಂದ ನ್ಯುಮೋನಿಯಾಗೆ ಒಳಗಾಗಿದ್ದ ಬಾಬಾಸಾಹೇಬ್ ಅವರು ಪುಣೆಯ ದೀನಾನಾಥ್ ಮಂಗೇಶ್ಕರ್ ಆಸ್ಪತ್ರೆಯ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಸದ್ಯ ಇಂದು ಬೆಳಗ್ಗೆ 10.30ರ ಸುಮಾರಿಗೆ ಪುಣೆಯ ವೈಕುಂಠ ಚಿತಾಗಾರದಲ್ಲಿ ಬಾಬಾಸಾಹೇಬ್ ಅಂತ್ಯಕ್ರಿಯೆ ನೆರವೇರಿಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.

    ಬಾಬಾಸಾಹೇಬ್ ಪುರಂದರೆ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ. ಬಾಬಾಸಾಹೇಬ್ ಪುರಂದರೆ ಅವರೊಂದಿಗೆ ಮೋದಿ ಅವರು ಕುಳಿತುಕೊಂಡು ಮಾತನಾಡುತ್ತಿರುವ ಫೋಟೋವೊಂದನ್ನು ಶೇರ್ ಮಾಡಿಕೊಂಡಿದ್ದು, ಆಗುತ್ತಿರುವ ನೋವನ್ನು ಪದಗಳಲ್ಲಿ ಹೇಳಲಾಗುತ್ತಿಲ್ಲ. ಶಿವಶಾಹಿರ್ ಬಾಬಾಸಾಹೇಬ್ ಪುರಂದರೆಯವರ ನಿಧನವು ಇತಿಹಾಸ ಮತ್ತು ಸಂಸ್ಕೃತಿಕ ಜಗತ್ತಿನಲ್ಲಿ ದೊಡ್ಡ ಶೂನ್ಯವನ್ನು ಉಂಟುಮಾಡಿದೆ. ಮುಂಬರುವ ಪೀಳಿಗೆಯವರು ಛತ್ರಪತಿ ಶಿವಾಜಿ ಮಹಾರಾಜರ ಬಗ್ಗೆ ತಿಳಿಸಿದಕ್ಕೆ ಅವರಿಗೆ ಧನ್ಯವಾದಗಳು. ಅವರ ಇತರ ಕೃತಿಗಳು ಸಹ ನೆನಪಿನಲ್ಲಿ ಉಳಿಯುತ್ತವೆ.

    “ಶಿವಶಾಹಿರ್ ಬಾಬಾಸಾಹೇಬ್ ಪುರಂದರೆ ಅವರು ಪ್ರಜ್ಞಾವಂತರು ಮತ್ತು ಭಾರತೀಯ ಇತಿಹಾಸದ ಶ್ರೀಮಂತ ಜ್ಞಾನವನ್ನು ಹೊಂದಿದ್ದರು”. ಅವರ ವ್ಯಾಪಕ ಕಾರ್ಯಗಳು ಸದಾ ನೆನಪಿನಲ್ಲಿ ಉಳಿಯುತ್ತದೆ. ಈ ಸಂದರ್ಭದಲ್ಲಿ ಅವರ ಕುಟುಂಬ ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ಸಂತಾಪಗಳು ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ.

    ಮರಾಠಿಯಲ್ಲಿ ಶಿವಾಜಿ ಮಹಾರಾಜ್ ಕುರಿತಂತೆ ಪುರಂದರೆ ಅವರು ಎರಡು ಭಾಗಗಳಲ್ಲಿ ರಚಿಸಿರುವ 900 ಪುಟಗಳ ಕೃತಿ ರಾಜಾ ಶಿವಛತ್ರಪತಿ ಜನಪ್ರಿಯತೆ ಪಡೆದಿತ್ತು. ಮೊದಲ ಬಾರಿಗೆ 1950ರಲ್ಲಿ ಪ್ರಕಟಗೊಂಡ ಕೃತಿಯು ಈವರೆಗೂ ಹಲವು ಬಾರಿ ಮರುಮುದ್ರಣ ಕಂಡಿದೆ ಹಾಗೂ ಮರಾಠಿಗರ ಪ್ರತಿ ಮನೆಯಲ್ಲಿ ಸ್ಥಾನ ಪಡೆದಿದೆ. ಅಲ್ಲದೇ 1980ರಲ್ಲಿ ಶಿವಾಜಿ ಮಹಾರಾಜ್ ಅವರ ಜೀವನ ಆಧರಿಸಿ ಜಾಣತಾ ರಾಜ ನಾಟಕವನ್ನು ರಚಿಸಿ ನಿರ್ದೇಶಿಸಿದ್ದರು.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss