ಬೆಂಗಳೂರು : ಮಾರ್ಚ್ 2023 ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಪಡೆಯಲು ಹಾಗೂ ಮರುಮೌಲ್ಯಮಾಪನ ಮತ್ತು ಮರುಎಣಿಕೆಗಾಗಿ ಅರ್ಜಿ ಸಲ್ಲಿಸುವ ಕುರಿತಂತೆ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಹತ್ವದ ಮಾಹಿತಿಯೊಂದನ್ನು ನೀಡಿದೆ.
ಮಾರ್ಚ್ 2023 ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಪಡೆಯಲು ಹಾಗೂ ಮರುಮೌಲ್ಯಮಾಪನ ಮತ್ತು ಮರುಎಣಿಕೆಗಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ವಿದ್ಯಾರ್ಥಿಗಳು ಉತ್ತರ ಪತ್ರಿಕೆಯ ಸ್ಕ್ಯಾನ್ ಪ್ರತಿಗಳಿಗೆ ಅರ್ಜಿ ಸಲ್ಲಿಸಿ ಪಡೆದ ವಿಷಯಗಳಿಗೆ ಮಾತ್ರ ಮರುಮೌಲ್ಯಮಾಪನ/ಮರುಎಣಿಕೆಗಾಗಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಸ್ಕ್ಯಾನ್ ಪ್ರತಿಗಾಗಿ ಅರ್ಜಿ ಸಲ್ಲಿಸಲು ಪ್ರತಿ ವಿಷಯಕ್ಕೆ 530 ರೂ. ಮರುಮೌಲ್ಯಮಾಪನಕ್ಕಾಗಿ ಅರ್ಜಿ ಸಲ್ಲಿಸಲು ಪ್ರತಿ ವಿಷಯಕ್ಕೆ 1,670 ರೂ. ಅಂಕಗಳ ಮರುಎಣಿಕೆಗಾಗಿ ಯಾವುದೇ ಶುಲ್ಕವಿರುವುದಿಲ್ಲ.
