ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ , ಪುತ್ತೂರು, ಬಂಟ್ವಾಳ ಸುಳ್ಯ ತಾಲೂಕುಗಳಲ್ಲಿ ತಹಸೀಲ್ದಾ ಹಂತದಲ್ಲಿ ಮಳೆಯ ಪರಿಸ್ಥಿತಿಯನ್ನು ಅವಲೋಕಿಸಿ ಆಯ್ದ ಶಾಲೆಗಳಿಗೆ ಸ್ಥಳೀಯವಾಗಿ ರಜೆ ಘೋಷಿಸಲು ಆಯಾ ತಾಲೂಕಿನ ತಹಸೀಲ್ದಾರ್ ಗಳಿಗೆ ಜಿಲ್ಲಾಧಿಕಾರಿಯವರು ನಿರ್ದೇಶನ ನೀಡಿದ್ದಾರೆ.
ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸುವ ಅನಿವಾರ್ಯತೆ ಕಂಡು ಬಂದಿರುವುದಿಲ್ಲ ಎಂದು ಡಿಸಿ ತಿಳಿಸಿದ್ದಾರೆ.
ಕಡಬ ತಾಲೂಕಿನಾದ್ಯಂತ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ನೀಡಲಾಗಿದೆ ಎಂದು ಕಡಬ ತಹಶೀಲ್ದಾರ್ ತಿಳಿಸಿದ್ದಾರೆ.