ಬಂಟ್ವಾಳ: ಅಕ್ಕಿ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳೂರು ಕಡೂರು 73 ರ ರಾಜ್ಯ ಹೆದ್ದಾರಿಯ ಬಂಟ್ವಾಳ ಸಮೀಪದ ಅಂಚಿಕಟ್ಟೆ ಎಂಬಲ್ಲಿ ಮಧ್ಯಾಹ್ನ ವೇಳೆ ನಡೆದಿದೆ.
ಘಟನೆಯಲ್ಲಿ ಚಾಲಕ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾನೆ. ಮಂಗಳೂರಿನಿಂದ ಬೆಳ್ತಂಗಡಿಗೆ ಅಕ್ಕಿ ಸಾಗಾಟದ ಲಾರಿಯಾಗಿದ್ದು, ಬಡಗುಂಡಿ ಅಂಚಿಕಟ್ಟೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆ ನಡೆದ ಕೂಡಲೇ ಚಾಲಕನನ್ನು ಲಾರಿಯ ಗಾಜು ಪುಡಿ ಮಾಡಿ ಹೊರಕ್ಕೆ ತರಲಾಗಿದೆ.ಲಾರಿ ಪಲ್ಟಿಯಾಗುವ ವೇಳೆ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ, ವಿದ್ಯುತ್ ಕಂಬ ತುಂಡಾಗಿ ಬಿದ್ದಿದೆ. ಅಲ್ಲೇ ಸಮೀಪದಲ್ಲಿ ಹೈ ಟೆನ್ಸನ್ ವಿದ್ಯುತ್ ವಯರ್ ಗಳಿದ್ದು,ಸ್ವಲ್ಪದರಲ್ಲೇ ದೊಡ್ಡ ಅನಾಹುತ ತಪ್ಪಿದೆ.ಘಟನೆಯ ವೇಳೆ ವಿದ್ಯುತ್ ತಂತಿಗೆ ತಾಗಿದ್ದರೆ,ಅನೇಕ ಜೀವಹಾನಿಯಾಗುವ ಬೀಕರ ದುರಂತಕ್ಕೆ ಕಾರಣವಾಗುತ್ತಿತ್ತು ಎಂದು ಸಾರ್ವಜನಿಕರು ತಿಳಿಸಿದ್ದಾರೆ. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಬೇಟಿ ನೀಡಿ,ಪರಿಶೀಲನೆ ನಡೆಸಿದ್ದಾರೆ