ನವದೆಹಲಿ: ಭಾರತದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಭ್ ಪಂತ್ ಶುಕ್ರವಾರ ಬೆಳಿಗ್ಗೆ ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ಹಿಂತಿರುಗುವಾಗ ಅಪಘಾತಕ್ಕೀಡಾಗಿದ್ದು, ಪ್ರಧಾನಿ ನರೇಂದ್ರ ಮೋದಿ ದುಃಖ ವ್ಯಕ್ತಪಡಿಸಿದ್ದಾರೆ. ‘ಖ್ಯಾತ ಕ್ರಿಕೆಟಿಗ ರಿಷಭ್ ಪಂತ್ ಅವರ ಅಪಘಾತದಿಂದ ದುಃಖಿತನಾಗಿದ್ದೇನೆ.
ಅವರ ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಪಂತ್ ಅವ್ರ ಐಷಾರಾಮಿ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ನಂತರ ಅವರ ಬಲ ಮಣಿಕಟ್ಟು, ಪಾದ, ಕಾಲ್ಬೆರಳು ಮತ್ತು ಬೆನ್ನಿನ ಮೇಲೆ ಗಾಯವಾಗಿದೆ ಎಂದು ಹರಿದ್ವಾರದ ಹಿರಿಯ ಪೊಲೀಸ್ ಅಧೀಕ್ಷಕ ಅಜಯ್ ಸಿಂಗ್ ತಿಳಿಸಿದ್ದಾರೆ.
