Friday, March 29, 2024
spot_img
More

    Latest Posts

    ಅನಂತಪುರ: ಭೀಕರ ರಸ್ತೆ ಅಪಘಾತ – 6 ಮಂದಿ ಮಹಿಳೆಯರು ಸ್ಥಳದಲ್ಲೇ ಸಾವು

    ಅನಂತಪುರ: ಭೀಕರ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ 6 ಮಂದಿ ಮಹಿಳೆಯರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಅನಂತಪುರದಲ್ಲಿ ಶುಕ್ರವಾರ ನಡೆದಿದೆ.

    ಆಟೋ ರಿಕ್ಷಾವೊಂದು ಅನಂತಪುರದ ಬೆಂಗಳೂರು-ಹೈದರಾಬಾದ್‌‌ ರಾಷ್ಟ್ರೀಯ ಹೆದ್ದರಿಯ ಪಾಮಿಡಿ ಮಂಡಲದ ಬಳಿ ಕೃಷಿ ಕಾರ್ಮಿಕರನ್ನು ಹೊತ್ತು ಸಾಗುತ್ತಿತ್ತು. ಆಟೋದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರೇ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.

    ಈ ಸಂದರ್ಭ ಎದುರಿಗೆ ಬಂದ ಕಾರೊಂದು ಆಟೋಗೆ ಢಿಕ್ಕಿ ಹೊಡೆದಿದ್ದು, ಆರು ಮಂದಿ ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ. ಅಪಘಾತದಲ್ಲಿ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

    ಗಾಯಗೊಂಡಿರುವ 7 ಮಂದಿಯಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss