Saturday, April 20, 2024
spot_img
More

  Latest Posts

  ಕಾಪು: ಬಸ್‌ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಪಾದಚಾರಿ ಸಾವು..!

  ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಮೂಳೂರಿನ ಸಿಎಸ್‌ಐ ಚರ್ಚ್‌ ಎದುರು ಜುಲೈ 26ರಂದು ರಾತ್ರಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಪಾದಚಾರಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಚಂದ್ರಶೇಖರ್ (52) ಎಂದು ಗುರುತಿಸಲಾಗಿದ್ದು, ಅವರು ಮೂಳೂರು ಮೂಲದವರಾಗಿದ್ದು, ಪ್ರಸ್ತುತ ಸುರತ್ಕಲ್‌ನಲ್ಲಿ ನೆಲೆಸಿದ್ದರು. ಮಾರಿ ಪೂಜೆಯಲ್ಲಿ ಪಾಲ್ಗೊಳ್ಳಲು ಮೂಳೂರಿಗೆ ಬಂದಿದ್ದರು. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಚಂದ್ರಶೇಖರ್ ಅವರ ಸಹೋದರ ಏಳು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಈ ಸಂಬಂಧ ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

  spot_img
  spot_img

  Latest Posts

  spot_imgspot_img
  spot_imgspot_img
  spot_img

  Don't Miss