Wednesday, February 21, 2024
spot_img
More

  Latest Posts

  ಮಂಗಳೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಪ್ರಕರಣ-ಆರೋಪಿಗೆ 25 ಲಕ್ಷ ರೂ. ದಂಡ

  ಮಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿಯನ್ನು ಹೊಂದಿರುವ ಪ್ರಕರಣದಲ್ಲಿ ಪಿಡಬ್ಲ್ಯುಡಿ ಎಇಗೆ ಎನ್.ನರಸಿಂಹರಾಜು ಮೇಲಿನ ಆರೋಪ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಆತನಿಗೆ 3 ವರ್ಷ 6ತಿಂಗಳು ಸಾದಾ ಸಜೆ ಹಾಗೂ 25 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದೆ.

  ಬೆಂಗಳೂರು ದೇವನಹಳ್ಳಿ ಮದ್ದಯ್ಯ ರಸ್ತೆ ನಿವಾಸಿ ಎನ್‌. ನರಸಿಂಹರಾಜು ವಿರುದ್ಧ 2010ರ ಮಾ. 24ರಂದು ಆದಾಯಕ್ಕಿಂತ ಹೆಚ್ಚಿನ ಆಸ್ತಿಯನ್ನು ಹೊಂದಿರುವ ಹಿನ್ನಲೆಯಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಸದಾನಂದ ಎಂ. ವರ್ಣೇಕರ್ ದೂರು ನೀಡಿದ್ದು, ಪೊಲೀಸ್ ಉಪಾಧೀಕ್ಷಕ ವಿಠಲ್ ದಾಸ್ ಪೈ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

  ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ.ಜಕಾತಿಯವರು ಆರೋಪಿತ ಎನ್.ನರಸಿಂಹರಾಜು ಮೇಲಿನ ಆರೋಪ ಸಾಬೀತಾಗಿರುವ ಹಿನ್ನಲೆಯಲ್ಲಿ 3 ವರ್ಷ 6ತಿಂಗಳು ಸಾದಾ ಸಜೆ ಹಾಗೂ 25 ಲಕ್ಷ ರೂ. ದಂಡ ವಿಧಿಸಿದ್ದಾರೆ. ದಂಡ ತೆರಲು ತಪ್ಪಿದ್ದಲ್ಲಿ ಮತ್ತೆ ಆರು ತಿಂಗಳುಗಳ ಸಾದಾ ಸಜೆ ಅನುಭವಿಸಬೇಕೆಂದು ಆದೇಶಿಸಿದ್ದಾರೆ. ಆರೋಪಿಯ ಮೇಲೆ ಟ್ರ್ಯಾಪ್ ಪ್ರಕರಣವೂ ದಾಖಲಾಗಿದ್ದು, ಸದ್ಯ ಈ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ.

  ಲೋಕಾಯುಕ್ತ ಮಂಗಳೂರಿನ ವಿಶೇಷ ಅಭಿಯೋಜಕ ರವೀಂದ್ರ ಮುನ್ನಿಪಾಡಿ ಸರಕಾರದ ಪರ ವಾದಿಸಿದ್ದಾರೆ.

  spot_img
  spot_img

  Latest Posts

  spot_imgspot_img
  spot_imgspot_img
  spot_img

  Don't Miss