Thursday, March 28, 2024
spot_img
More

    Latest Posts

    ದಕ್ಷಿಣ ಕನ್ನಡ ಗಡಿಗಳಲ್ಲಿ ತಪಾಸಣೆ ತೀವ್ರ: ಇಂದಿನಿಂದ ಆರ್ ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ

    ಕೋವಿಡ್ ಮೂರನೇ ಅಲೆಯ ಆತಂಕದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಗಡಿಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ. ಎಲ್ಲಾ ಗಡಿಗಳಲ್ಲೂ ತಪಾಸಣೆ ನಡೆಸಲಾಗುತ್ತಿದೆ. ಅಲ್ಲದೇ ಮೂರು ಪಾಳಿಯಲ್ಲಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇಂದಿನಿಂದ ಆರ್ ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ. ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ತಲಪಾಡಿ ಸೇರಿದಂತೆ ಎಲ್ಲಾ ಗಡಿಗಳಲ್ಲಿ ತಪಾಸಣೆ ಆರಂಭಗೊಂಡಿದೆ. ಇಂದಿನಿಂದ ಇತರ ಇಲಾಖೆಗಳ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಇಂದಿನಿಂದ ಆಗಮಿಸುವವರು ಆರ್ ಟಿಪಿಸಿಆರ್ ವರದಿ ಹೊಂದಿರಬೇಕು. ನಿತ್ಯ ಪ್ರಯಾಣಿಕರಿಗೆ ತೊಂದರೆಯಾಗದಂತೆ ಕ್ರಮಕೈಗೊಳ್ಳಲಾಗಿದೆ. ದ. ಕ. ಜಿಲ್ಲಾಡಳಿತದ ವತಿಯಿಂದ ನಿತ್ಯಪ್ರಯಾಣಿಕರಿಗೆ ಆರ್ ಟಿಪಿಸಿಆರ್ ಪರೀಕ್ಷೆಗೂ ಅವಕಾಶ ಕಲ್ಪಿಸಲಾಗಿದೆ ಎಂದರು.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss