Monday, November 29, 2021

ಡಿ. 15ರಿಂದ ಅಂತಾರಾಷ್ಟ್ರೀಯ ವಿಮಾನ ಸಂಚಾರ ಆರಂಭ: 14 ದೇಶಗಳಿಗೆ ನಿರ್ಬಂಧ

ದೇಶದಲ್ಲಿ ಕೊರೋನಾ ವೇಳೆ ಹೇರಲಾಗಿದ್ದ ಲಾಕ್‌ಡೌನ್ ಅಲ್ಲಿ ಅಂತಾರಾಷ್ಟ್ರೀಯ ವಿಮಾನವನ್ನು ನಿಷೇಧ ಮಾಡಲಾಗಿತ್ತು. ಇದೀಗ ಎರಡು ವರ್ಷಗಳ ಬಳಿಕ ನಿಯಮವನ್ನು ಸಡಿಲಿಕೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಅದರಂತೆ ಮತ್ತೆ ಅಂತಾರಾಷ್ಟ್ರೀಯ...
More

  Latest Posts

  ದಕ್ಷಿಣ ಕನ್ನಡ ಗಡಿಗಳಲ್ಲಿ ತಪಾಸಣೆ ತೀವ್ರ: ಇಂದಿನಿಂದ ಆರ್ ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ

  ಕೋವಿಡ್ ಮೂರನೇ ಅಲೆಯ ಆತಂಕದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಗಡಿಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ. ಎಲ್ಲಾ ಗಡಿಗಳಲ್ಲೂ ತಪಾಸಣೆ ನಡೆಸಲಾಗುತ್ತಿದೆ. ಅಲ್ಲದೇ ಮೂರು ಪಾಳಿಯಲ್ಲಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇಂದಿನಿಂದ ಆರ್...

  ಆಸ್ಪತ್ರೆ ಸಿಬ್ಬಂದಿ ಎಡವಟ್ಟು : 15 ತಿಂಗಳು ಶವಗಾರದಲ್ಲೇ ಕೊಳೆತ ಕೋವಿಡ್ ಸೋಂಕಿತರ ಮೃತ ದೇಹಗಳು!

  ಬೆಂಗಳೂರು: ಆಸ್ಪತ್ರೆ ಸಿಬ್ಬಂದಿ ಎಡವಟ್ಟಿನಿಂದ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದ ಇಬ್ಬರ ಶವಗಳು ಸುಮಾರು 15 ತಿಂಗಳು ಶವಾಗಾರದಲ್ಲೇ ಕೊಳೆತ ವಿಚಾರ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ನಗರದ...

  ಮುಲ್ಕಿ: ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ಪರಾರಿ!

  ಮುಲ್ಕಿ: ಮುಲ್ಕಿ ಪೊಲೀಸ್ ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ನಿನ್ನೆ ಸಂಜೆ ಪರಾರಿಯಾಗಿದ್ದಾನೆ. ದಾವಣಗೆರೆ ನಿವಾಸಿಯಾದ ವಿಚಾರಣಾಧೀನ ಕೈದಿಯನ್ನು ಕಳ್ಳತನದ ಆರೋಪದ ಮೇಲೆ ಮುಲ್ಕಿ ಪೊಲೀಸರು...

  ಸಾರ್ವಜನಿಕ ಬಸ್ಸು ತಂಗುದಾಣವನ್ನು ಅಡುಗೆ ಮನೆ ಮಾಡಿದ ಕೂಲಿ ಕಾರ್ಮಿಕರು……! ಕಣ್ಣು ಮುಚ್ಚಿ ಕುಳಿತ ಆಡಳಿತ ಅಧಿಕಾರಿಗಳು

  ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಂಗಲ್ಪಾಡಿ ದೇವಸ್ಥಾನದ ಎದುರುಗಡೆ ಇರುವ ಬಸ್ ತಂಗುದಾಣದಲ್ಲಿ ಕೆಲ ದಿನಗಳಿಂದ ಯಾವುದೊ ಕೂಲಿ ಕಾರ್ಮಿಕರು ಮನೆಯಂತೆ ಸಾರ್ವಜನಿಕ ಬಸ್ಸು ತಂಗುದಾಣದಲ್ಲಿ ಅಡುಗೆ ಮಾಡಿ ವಾಸಿಸುತ್ತಿದ್ದಾರೆ.

  ಕೇರಳ ಶಾಲೆಯಲ್ಲಿ ಒಂದೇ ವಿನ್ಯಾಸದ ಸಮವಸ್ತ್ರ!

  ತಿರುವನಂತಪುರಂ: ಕೇರಳದ ಶಾಲೆಯೊಂದು ಎಲ್ಲ ಮಕ್ಕಳಿಗೂ ಲಿಂಗ ತಾರತಮ್ಯವಿಲ್ಲದೇ ಒಂದೇ ರೀತಿಯ ಸಮವಸ್ತ್ರ ನೀಡಿ ಮಾದರಿಯಾಗಿದೆ.

  ಕೊಚ್ಚಿಯ ವಲಯಂಚಿರಂಗರ ಸರ್ಕಾರಿ ಪ್ರಾಥಮಿಕ ಶಾಲೆಯು ತನ್ನ ಎಲ್ಲ ವಿದ್ಯಾರ್ಥಿಗಳಿಗೆ ಸಾಮಾನ್ಯವಾದ ಲಿಂಗ-ತಟಸ್ಥ ಸಮವಸ್ತ್ರವನ್ನು ಅಳವಡಿಸಿಕೊಂಡಿದೆ. ಶಾಲೆಯ ಆಗಿನ ಮುಖ್ಯೋಪಾಧ್ಯಾಯಿನಿ 2018 ರಲ್ಲಿ ಪರಿಚಯಿಸಿದ ಲಿಂಗ-ತಟಸ್ಥ ಸಮವಸ್ತ್ರ ನೀತಿಯ ಪ್ರಕಾರ ವಿದ್ಯಾರ್ಥಿಗಳು ಶರ್ಟ್ ಮತ್ತು ತ್ರೀ-ಫೋರ್ತ್ ಪ್ಯಾಂಟ್ ಧರಿಸಬೇಕು. ಈ ಸಮವಸ್ತ್ರವನ್ನು ಹುಡುಗಿಯರೂ ಸಹ ಧರಿಸಬೇಕು ಎಂದು ಸೂಚನೆಯನ್ನು ನೀಡಲಾಗಿತ್ತು. ಈ ಸೂಚನೆಯನ್ನು ಇಂದಿಗೂ ಶಾಲೆ ಪಾಲಿಸುತ್ತಿದೆ.

  2018ರಲ್ಲಿ ಈ ಸಮವಸ್ತ್ರವನ್ನು ಪರಿಚಯಿಸಿದ ಮಾಜಿ ಮುಖ್ಯೋಪಾಧ್ಯಾಯಿನಿ ಸಿ ರಾಜಿ ಈ ಕುರಿತು ಮಾತನಾಡಿದ್ದು, ಇದು ಉತ್ತಮ ದೃಷ್ಟಿ ಹೊಂದಿರುವ ಶಾಲೆಯಾಗಿದೆ. ನಾವು ಶಾಲೆಯಲ್ಲಿ ಹೊಸ ರೀತಿ ಕ್ರಮ ಜಾರಿಗೆ ತರಲು ಮಾತನಾಡುತ್ತಿರುವಾಗ ಲಿಂಗ ಸಮಾನತೆ ಮುಖ್ಯ ವಿಷಯವಾಗಿತ್ತು. ಆದ್ದರಿಂದ ಸಮವಸ್ತ್ರವನ್ನು ಒಂದೇ ರೀತಿ ಮಾಡಬೇಕು ಎಂದು ನಾವು ನಿರ್ಧರಿಸಿದ್ದೆವು.

  ಅದಕ್ಕೇನು ಮಾಡೋದು ಅಂತ ಯೋಚಿಸ್ತಾ ಇದ್ದಾಗ, ವಿದ್ಯಾರ್ಥಿನಿಯರಿಗೆ ಸ್ಕರ್ಟ್ ವಿಚಾರದಲ್ಲಿ ತುಂಬಾ ಸಮಸ್ಯೆಗಳನ್ನ ಎದುರಿಸುತ್ತಿರುವುದು ನಮ್ಮ ಗಮನಕ್ಕೆ ಬಂತು. ಈ ಕುರಿತು ನಾವು ಎಲ್ಲರೊಂದಿಗೆ ಚರ್ಚಿಸಿದೆವು. 90% ರಷ್ಟು ಪೋಷಕರು ಲಿಂಗ-ತಟಸ್ಥ ಸಮವಸ್ತ್ರವನ್ನು ಬೆಂಬಲಿಸಿದರು. ಮಕ್ಕಳು ಸಹ ಖುಷಿಯಾದರು. ಈ ಬಗ್ಗೆ ಈಗ ಚರ್ಚೆಯಾಗುತ್ತಿರುವುದಕ್ಕೆ ನನಗೆ ತುಂಬ ಸಂತೋಷ ಮತ್ತು ಹೆಮ್ಮೆ ಅನಿಸುತ್ತಿದೆ ಎಂದು ಸಂತೋಷ ವ್ಯಕ್ತಪಡಿಸಿದರು.

  ಲಿಂಗ ಸಮಾನತೆ ವಿದ್ಯಾರ್ಥಿಗಳು ಮತ್ತು ಪೋಷಕರ ಮನಸ್ಸಿನಲ್ಲಿರಬೇಕು. ಸ್ಕರ್ಟ್ ಧರಿಸುವಾಗ ಹುಡುಗಿಯರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಾರೆ. ಶೌಚಾಲಯಕ್ಕೆ ಹೋಗುವಾಗ ಮತ್ತು ಆಟವಾಡುವಾಗ ತೊಂದರೆಗಳು ಉಂಟಾಗುತ್ತವೆ. ಅದೂ ಒಂದು ಅಂಶ. ಈ ಉಡುಪನ್ನು ಲಿಂಗ-ತಟಸ್ಥ ಸಮವಸ್ತ್ರದ ಪರಿಕಲ್ಪನೆಯಿಂದ ಪಡೆಯಲಾಗಿದೆ. ಇದು 105 ವರ್ಷಗಳಷ್ಟು ಹಳೆಯದಾದ ಶಾಲೆ. ಆದ್ದರಿಂದ, ಯಾರಿಂದಲೂ ಇದಕ್ಕೆ ವಿರೋಧ ವ್ಯಕ್ತವಾಗಲಿಲ್ಲ. ಶೈಕ್ಷಣಿಕ ಸಮಿತಿಯ ನಿರ್ಧಾರವನ್ನು ಎಲ್ಲರೂ ಒಪ್ಪಿಕೊಂಡರು. ನಾವು ಅಂದುಕೊಂಡಿದ್ದಕ್ಕಿಂತ ಹೆಚ್ಚಿನ ಮನ್ನಣೆ ಸಿಕ್ಕಿತ್ತು ಎಂದು ಶಾಲಾ ಆಡಳಿತ ಸಮಿತಿ ಮಾಜಿ ಅಧ್ಯಕ್ಷ ಎನ್.ಪಿ.ಅಜಯಕುಮಾರ್ ಹೇಳಿದರು.

  ಈಗಿನ ಮುಖ್ಯೋಪಾಧ್ಯಾಯಿನಿ ಸುಮಾ ಕೆ.ಪಿ. ಈ ಕುರಿತು ಪ್ರತಿಕ್ರಿಯಿಸಿದ್ದು, ಈ ನಿರ್ಧಾರವನ್ನು 2018 ರಲ್ಲಿ ಜಾರಿಗೆ ತರಲಾಗಿದ್ದರೂ, ಈ ಸಮವಸ್ತ್ರವು ಮಕ್ಕಳಿಗೆ ತುಂಬಾ ಆತ್ಮವಿಶ್ವಾಸವನ್ನು ನೀಡಿತು. ವಿಶೇಷವಾಗಿ ಹೆಣ್ಣು ಮಕ್ಕಳಿಗೆ ಏನು ಬೇಕಾದರೂ ಮಾಡಲು ಈ ಸಮವಸ್ತ್ರ ತುಂಬಾ ಸಹಕಾರಿ. ಈ ನಿರ್ಧಾರದಿಂದ ಅವರು ಮತ್ತು ಅವರ ಪೋಷಕರು ತುಂಬಾ ಸಂತೋಷಪಟ್ಟಿದ್ದಾರೆ. ಗಂಡು-ಹೆಣ್ಣು ಮಕ್ಕಳಿಗೆ ಸಮಾನ ಸ್ವಾತಂತ್ರ್ಯ, ನೆಮ್ಮದಿ ಸಿಗಬೇಕು ಎಂಬ ಚಿಂತನೆಯೇ ಈ ನಿರ್ಧಾರಕ್ಕೆ ಕಾರಣ ಎನ್ನುತ್ತಾರೆ.

  ಪಾಲಕರು ಮತ್ತು ಶಿಕ್ಷಕರ ಸಂಘದ ಅಧ್ಯಕ್ಷ ವಿ ವಿವೇಕ್, ನನ್ನ ಮಕ್ಕಳು 2018ರಲ್ಲಿ ಈ ಶಾಲೆಗೆ ಸೇರಿದ್ದಾರೆ. ಹುಡುಗರು ಮತ್ತು ಹುಡುಗಿಯರಿಗೆ ಸಮಾನತೆ ಬೇಕು. ಇದು ಈ ಸಮವಸ್ತ್ರ ಹಿಂದಿನ ಆಲೋಚನೆಯಾಗಿದೆ. ಈ ಸಮವಸ್ತ್ರದಲ್ಲಿ ವಿದ್ಯಾರ್ಥಿಗಳು ಯಾವುದೇ ಚಟುವಟಿಕೆಯನ್ನು ಮಾಡಬಹುದು ಎಂದು ಹೇಳಿದರು.

  Latest Posts

  ದಕ್ಷಿಣ ಕನ್ನಡ ಗಡಿಗಳಲ್ಲಿ ತಪಾಸಣೆ ತೀವ್ರ: ಇಂದಿನಿಂದ ಆರ್ ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ

  ಕೋವಿಡ್ ಮೂರನೇ ಅಲೆಯ ಆತಂಕದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಗಡಿಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ. ಎಲ್ಲಾ ಗಡಿಗಳಲ್ಲೂ ತಪಾಸಣೆ ನಡೆಸಲಾಗುತ್ತಿದೆ. ಅಲ್ಲದೇ ಮೂರು ಪಾಳಿಯಲ್ಲಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇಂದಿನಿಂದ ಆರ್...

  ಆಸ್ಪತ್ರೆ ಸಿಬ್ಬಂದಿ ಎಡವಟ್ಟು : 15 ತಿಂಗಳು ಶವಗಾರದಲ್ಲೇ ಕೊಳೆತ ಕೋವಿಡ್ ಸೋಂಕಿತರ ಮೃತ ದೇಹಗಳು!

  ಬೆಂಗಳೂರು: ಆಸ್ಪತ್ರೆ ಸಿಬ್ಬಂದಿ ಎಡವಟ್ಟಿನಿಂದ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದ ಇಬ್ಬರ ಶವಗಳು ಸುಮಾರು 15 ತಿಂಗಳು ಶವಾಗಾರದಲ್ಲೇ ಕೊಳೆತ ವಿಚಾರ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ನಗರದ...

  ಮುಲ್ಕಿ: ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ಪರಾರಿ!

  ಮುಲ್ಕಿ: ಮುಲ್ಕಿ ಪೊಲೀಸ್ ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ನಿನ್ನೆ ಸಂಜೆ ಪರಾರಿಯಾಗಿದ್ದಾನೆ. ದಾವಣಗೆರೆ ನಿವಾಸಿಯಾದ ವಿಚಾರಣಾಧೀನ ಕೈದಿಯನ್ನು ಕಳ್ಳತನದ ಆರೋಪದ ಮೇಲೆ ಮುಲ್ಕಿ ಪೊಲೀಸರು...

  ಸಾರ್ವಜನಿಕ ಬಸ್ಸು ತಂಗುದಾಣವನ್ನು ಅಡುಗೆ ಮನೆ ಮಾಡಿದ ಕೂಲಿ ಕಾರ್ಮಿಕರು……! ಕಣ್ಣು ಮುಚ್ಚಿ ಕುಳಿತ ಆಡಳಿತ ಅಧಿಕಾರಿಗಳು

  ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಂಗಲ್ಪಾಡಿ ದೇವಸ್ಥಾನದ ಎದುರುಗಡೆ ಇರುವ ಬಸ್ ತಂಗುದಾಣದಲ್ಲಿ ಕೆಲ ದಿನಗಳಿಂದ ಯಾವುದೊ ಕೂಲಿ ಕಾರ್ಮಿಕರು ಮನೆಯಂತೆ ಸಾರ್ವಜನಿಕ ಬಸ್ಸು ತಂಗುದಾಣದಲ್ಲಿ ಅಡುಗೆ ಮಾಡಿ ವಾಸಿಸುತ್ತಿದ್ದಾರೆ.

  Don't Miss

  ಮಂಗಳೂರು: ವೈದ್ಯನೊಬ್ಬನ ರಾಸಲೀಲೆ ಪ್ರಕರಣ- ವೈದ್ಯಕೀಯ ಅಧೀಕ್ಷಕರ ಸ್ಪಷ್ಟನೆ

  ಮಂಗಳೂರು: ಮಂಗಳೂರು ನಗರದಲ್ಲಿ ವೈದ್ಯನೊಬ್ಬನ ರಾಸಲೀಲೆ ಇಂದು ಬಯಲಾಗಿದೆ. ಮಂಗಳೂರಿನ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯನೊಬ್ಬ ಹಾಡಹಗಲೇ ಕಚೇರಿಯಲ್ಲಿ ಬಹಿರಂಗವಾಗಿ ಮಹಿಳಾ ಸಿಬ್ಬಂದಿ ಜೊತೆಗೆ ಚೆಲ್ಲಾಟ ಆಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ...

  ರಷ್ಯಾದಲ್ಲಿ ಕಲ್ಲಿದ್ದಲು ಗಣಿ ದುರಂತ: 52 ಮಂದಿ ದಾರುಣ ಸಾವು

  ಮಾಸ್ಕೊ: ರಷ್ಯಾದ ಕೆಮೆರೊವೊ ಎಂಬಲ್ಲಿ ಸಂಭವಿಸಿದ ಕಲ್ಲಿದ್ದಲು ಗಣಿ ದುರಂತದಲ್ಲಿ 52 ಗಣಿಕಾರ್ಮಿಕರು ಸಾವನ್ನಪ್ಪಿದ್ದಾರೆ. ದೇಶದಲ್ಲಿ ಈ ಐದು ವರ್ಷಗಳಲ್ಲಿ ನಡೆದ ಅತಿ ದೊಡ್ಡ ಗಣಿ...

  SSLC ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಶೇ. 20 ರಷ್ಟು ಪಠ್ಯ ಕಡಿತಕ್ಕೆ ಮುಂದಾದ ಶಿಕ್ಷಣ ಇಲಾಖೆ

  ಬೆಂಗಳೂರು (ನ. 26): ಎಸ್‌ಎಸ್‌ಎಲ್‌ಸಿ (SSLC Students ) ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್! ಶೇ. 20 ರಷ್ಟು ಪಠ್ಯ ಕಡಿತಕ್ಕೆ ಶಿಕ್ಷಣ ಇಲಾಖೆ ಮುಂದಾಗಿದೆ.  ಕೊರೋನಾದಿಂದ ಪ್ರಸಕ್ತ...

  BIG BREAKING: ದಕ್ಷಿಣ ಕನ್ನಡ ಸರಕಾರಿ ವೈದ್ಯನ ರಾಸಲೀಲೆ; ಕಚೇರಿಯಲ್ಲಿ ಮಹಿಳಾ ಸಿಬ್ಬಂದಿಗಳ ಜೊತೆ ರಂಗಿನಾಟ!

  ಮಂಗಳೂರು: ಗುತ್ತಿಗೆ ಆಧಾರದಲ್ಲಿರುವ ಯುವತಿಯರ ಜೊತೆ ಸರಸ ಸಲ್ಲಾಪವಾಡುತ್ತಿದ್ದ ಮಂಗಳೂರಿನ ಪ್ರತಿಷ್ಠಿತ ವೆನ್ಲಾಕ್ ಆಸ್ಪತ್ರೆಯಲ್ಲಿ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ ಆಗಿರುವ ಡಾ.ರತ್ನಾಕರ್ ಅವರ ಕಾಮಪುರಾಣ ಬಯಲಾಗಿದೆ. ಈ ದೃಶ್ಯಗಳು ಸಾಮಾಜಿಕ...

  ಮಂಗಳೂರು: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ; ಆರೋಪಿಗಳು 4 ದಿನ ಪೊಲೀಸ್ ಕಸ್ಟಡಿಗೆ

  ಮಂಗಳೂರು: ವಾಮಂಜೂರು ಉಳಾಯಿಬೆಟ್ಟು ಪರಾರಿಯ ಟೈಲ್ಸ್ ಫ್ಯಾಕ್ಟರಿಯಲ್ಲಿ 8 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ ಪ್ರಕರಣದ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯ...