ಮಂಗಳೂರು : ಮಂಗಳೂರು ನಗರ ಸೇರಿದಂತೆ ಜಿಲ್ಲೆಯಲ್ಲಿ ಬೆಳಗ್ಗೆಯಿಂದ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ. ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಭಾರೀ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ ಮತ್ತು ಪ್ರಮುಖ ರಸ್ತೆಗಳಲ್ಲೇ ನೀರು ನಿಂತಿದ್ದು, ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದು, ಮಂಗಳೂರು ನಗರದ ಪಡಿಲ್ ಬಳಿ ರಸ್ತೆ ಎಲ್ಲಾ ನೀರು ತುಂಬಿದ್ದು, ಕೊಟ್ಟಾರ ಜಲವೃತವಾಗಿದೆ. ಇದ್ದರಿಂದ ವಾಹನ ಸವಾರರು ಪರದಾಡುವಂತಾಗಿದೆ. ಇನ್ನು ಸ್ಮಾರ್ಟ್ ಸಿಟಿ ಯೋಜನೆಯ ಅವೈಜ್ಞಾನಿಕ ಕಾಮಗಾರಿಯಿಂದಾಗಿ ನಗರದ ಹಲವು ಕಡೆಗಳಲ್ಲೂ ಇಂತಹ ದೃಶ್ಯ ಕಂಡು ಬಂದಿವೆ ಎಂದು ಸ್ಥಳೀಯರು ದೂರಿದ್ದಾರೆ.
ಭಾರೀ ಮಳೆಯ ಹಿನ್ನೆಲೆಯಲ್ಲಿ ಶಾಲೆಗ ಬರಲು ಅನಾನುಕೂಲವಾದ ಪ್ರದೇಶದಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ ಎರಡು ದಿನ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಜ್ಪೆ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯ ಮರವೂರು ಸೇತುವೆಯ ಸನಿಹದ ರಸ್ತೆ ಬದಿಯಲ್ಲಿ ಬಿರುಕು ಕಂಡುಬಂದಿದೆ.