ಮಂಗಳೂರು/ಪುತ್ತೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ದರ್ಶನ ಮುಗಿಸಿ ಮಂಗಳೂರಿಗೆ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿಯೊಬ್ಬರು ಬಳ್ಳಾರಿ ಬಸ್ ನಿಲ್ದಾಣದಲ್ಲಿ ಹೃದಯಾಘಾತಕ್ಕೊಳಗಾಗಿ ಅಕಾಲಿಕವಾಗಿ ನಿಧನರಾದ ಘಟನೆ ನಡೆದಿದೆ.
ಮೃತರನ್ನು ಪುತ್ತೂರಿನ ಬೆಳ್ಳಿಯೂರುಕಟ್ಟೆ ನಿವಾಸಿ ನಿವಾಸಿ ಪ್ರಸಾದ್ ಮಂಗಳೂರು (44) ಎಂದು ಗುರುತಿಸಲಾಗಿದೆ.
ಆಗಸ್ಟ್ 9ರಂದು ಮಂಗಳೂರಿನಿಂದ ಮಂತ್ರಾಲಯಕ್ಕೆ ತೆರಳಿದ್ದ ಅವರು, ದರ್ಶನ ಮುಗಿಸಿ ವಾಪಸಾಗುವ ವೇಳೆ ಆಗಸ್ಟ್ 10ರಂದು ರಾತ್ರಿ ಬಸ್ ಮೂಲಕ ಬಳ್ಳಾರಿಗೆ ಆಗಮಿಸಿದ್ದರು. ರಾತ್ರಿ ಸುಮಾರು 2.30ರ ವೇಳೆಗೆ ಬಸ್ನಿಂದ ಕೆಳಗಿಳಿದ ಅವರು, ಬಳ್ಳಾರಿ ಬಸ್ ನಿಲ್ದಾಣದ ಆಸನದಲ್ಲಿ ಕುಳಿತಿದ್ದರು.
ಈ ವೇಳೆ ಅವರಿಗೆ ಏಕಾಏಕಿ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ನಡೆದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ಗಮನಿಸಿದ ಸಹಪ್ರಯಾಣಿಕರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಮರಣವನ್ನು ದೃಢಪಡಿಸಿಕೊಂಡಿದ್ದಾರೆ.
ಬಳಿಕ ಮೃತರ ಪುತ್ರ, ಪಿಯುಸಿ ವಿದ್ಯಾರ್ಥಿ ದೀಪಕ್ ಅವರ ಮೊಬೈಲ್ಗೆ ಸಂದೇಶ ರವಾನಿಸಿದ್ದಾರೆ. ಕಾಲೇಜು ಅವಧಿಯಲ್ಲಿ ಫೋನ್ ಸೈಲೆಂಟ್ ಮೋಡ್ನಲ್ಲಿದ್ದ ಕಾರಣ ಮಧ್ಯಾಹ್ನದ ವೇಳೆಗೆ ಸಂದೇಶವನ್ನು ಗಮನಿಸಿದ ಕುಟುಂಬಸ್ಥರು ತಕ್ಷಣವೇ ಸ್ಥಳಕ್ಕೆ ತೆರಳಿದ್ದಾರೆ.
ಮೃತರು ಪತ್ನಿ ವಿದ್ಯಾ ಶೆಟ್ಟಿ, ಪುತ್ರ, ತಾಯಿ ಹಾಗೂ ಸಹೋದರರನ್ನು ಅಗಲಿದ್ದಾರೆ
Trending
- ಸೇವಾ ಸಂಕಲ್ಪ ಅಭಿಯಾನಕ್ಕೆ ಮಾದರಿ ಹೆಜ್ಜೆ ಕುಲಶೇಖರ ಕಲ್ಪನೆ ಪರಿಸರದಲ್ಲಿ ನವೀಕೃತ ಬಸ್ ನಿಲ್ದಾಣ ಉದ್ಘಾಟನೆ
- ಮಾಡೂರು ಶ್ರೀ ಶಿವ ದುರ್ಗಾಂಬಾ ಮಠದಲ್ಲಿ ಅ.15ರಿಂದ ನವರಾತ್ರಿ ಮಹೋತ್ಸವ ವಿಶೇಷ ಪೂಜೆ, ಗಣಹೋಮ, ಮಹಾ ಚಂಡಿಕಾಯಾಗ, ಅಖಂಡ ಭಜನೆ ಹಾಗೂ ಅನ್ನಸಂತರ್ಪಣೆ
- ಗಾಂಧಿ ಜಯಂತಿ ಅಂಗವಾಗಿ ಉಡುಪಿಯಲ್ಲಿ ತುಳುನಾಡ ರಕ್ಷಣಾ ವೇದಿಕೆಯಿಂದ ವಿಶೇಷ ಕಾರ್ಯಕ್ರಮ ಗಾಂಧೀಜಿ ತತ್ವಗಳನ್ನು ಸ್ಮರಿಸಿ ತಾಯಿ–ಮಕ್ಕಳ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ
- ಅ.5ರಂದು ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘದಿಂದ ಬೆಂಗಳೂರಿನಲ್ಲಿ ಶಾಂತಿಯುತ ಪ್ರತಿಭಟನೆ
- MRPL ಸ್ಫೋಟ ಪ್ರಕರಣ: ನಿರ್ಲಕ್ಷ್ಯದ ಆರೋಪದಡಿ FIR ಗಂಭೀರ ಗಾಯಗೊಂಡ ಕಾರ್ಮಿಕ ಮನೀಶ್ ಕರ್ಕಡ ಸಾವು; ಸುತ್ತಮುತ್ತ 54 ಮನೆಗಳಿಗೆ ಹಾನಿ
- ಎಂಆರ್ಪಿಎಲ್ ಸ್ಫೋಟ: ಸ್ಥಳೀಯರ ಸುರಕ್ಷತೆಯೊಂದಿಗೆ ಯಾವುದೇ ರಾಜಿ ಬೇಡ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ, ಗಾಯಾಳುಗಳಿಗೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡಲಿ ಕೈಗಾರಿಕೆ ಆರಂಭದ ವೇಳೆ ನೀಡಿದ ಭರವಸೆಗಳು ಅನುಷ್ಠಾನವಾಗಲಿ: ಯೋಗಿಶ್ ಶೆಟ್ಟಿ ಜಪ್ಪು
- ಎಂಆರ್ಪಿಎಲ್ನಲ್ಲಿ ಭಾರೀ ಸ್ಫೋಟ: ಎಂಟು ಮಂದಿ ಗಾಯ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಬೆಂಕಿ; ಓರ್ವನಿಗೆ ಶೇ.35ರಷ್ಟು ಸುಟ್ಟ ಗಾಯ
- ಎಂಆರ್ಪಿಎಲ್ ಘಟಕದಲ್ಲಿ ಭಾರೀ ಸ್ಫೋಟದ ಸದ್ದು: ಬೆಂಕಿ, ದಟ್ಟ ಹೊಗೆಯಿಂದ ಸ್ಥಳೀಯರಲ್ಲಿ ಆತಂಕ

