Thursday, September 21, 2023

ಪ್ರವಾಸಿಗರಿಗೆ ಮಲ್ಪೆ ಬೀಚ್‌ ಗೆ ಪ್ರವೇಶ ನಿರ್ಬಂಧ..!

ಉಡುಪಿ: ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡಿರುವ ಹಿನ್ನಲೆಯಲ್ಲಿ ಮಲ್ಪೆ ಬೀಚ್‌ ನಲ್ಲಿ ಪ್ರವಾಸಿಗರು, ಸಾರ್ವಜನಿಕರಿಗೆ ಸೆ. 25 ರವರೆಗೆ ಪ್ರವೇಶ ನಿಷೇಧಿಸಲಾಗಿದೆ. ಮೆ. 16ರಿಂದ ಸೆ.15ರವರೆಗೆ ಈ...
More

    Latest Posts

    ಉದ್ಯೋಗ ಮಾಹಿತಿ: ಕರ್ನಾಟಕ ಅರಣ್ಯ ಇಲಾಖೆಯಲ್ಲಿ 310 ಅರಣ್ಯ ವೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು...

    ಕೆನಡಾ ನಂಟು ಹೊಂದಿರುವ 43 ಕುಖ್ಯಾತ ಭಯೋತ್ಪಾದಕರ ಪಟ್ಟಿ ಬಿಡುಗಡೆ ಮಾಡಿದ NIA

    ನವದೆಹಲಿ:ಭಯೋತ್ಪಾದನಾ ವಿರೋಧಿ ತನಿಖಾ ಸಂಸ್ಥೆಯು(NIA) 43 ಕುಖ್ಯಾತ ಶಂಕಿತ ಭಯೋತ್ಪಾದಕರ ಚಿತ್ರಗಳನ್ನು ಸಾರ್ವಜನಿಕಗೊಳಿಸಿದೆ, ಅವರಲ್ಲಿ ಕೆಲವರು ಕೆನಡಾದಲ್ಲಿ ನೆಲೆಸಿದ್ದಾರೆ. ವಿವಿಧ ಕ್ರಿಮಿನಲ್ ಅಪರಾಧಗಳಲ್ಲಿ ತೊಡಗಿರುವ ಆರೋಪ...

    ಖ್ಯಾತ ಯಕ್ಷಗಾನ ಭಾಗವತ ರಾಮಚಂದ್ರ ನಾಯ್ಕ ಹೆಮ್ಮನ ಬೈಲ್ ಹೃದಯಾಘಾತದಿಂದ ನಿಧನ

    ಸಿದ್ದಾಪುರ: ಖ್ಯಾತ ಯಕ್ಷಗಾನ ಭಾಗವತ ರಾಮಚಂದ್ರ ನಾಯ್ಕ ಹೆಮ್ಮನ ಬೈಲ್ (57) ಬುಧವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಯಕ್ಷಗಾನ ಭಾಗವರಲ್ಲದೆ ಕೃತಿ ರಚನಾಕಾರರೂ ಆಗಿದ್ದ ಅವರು...

    ದಕ್ಷಿಣ ಕನ್ನಡ ಮೀನು ಮಾರಾಟ ಫೆಡರೇಶನ್ನಿಗೆ ವಂಚನೆ ಪ್ರಕರಣ- ಮಂಜುನಾಥ ಖಾರ್ವಿಗೆ ಜೈಲು ಶಿಕ್ಷೆ

    ಮಂಗಳೂರು : ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್‌ ಲಿ.ಗೆ ಮಂಜುನಾಥ ಖಾರ್ವಿ ಅವರು ನೀಡಿದ ಮೂರು ಚೆಕ್‌ಗಳು ಬೌನ್ಸ್‌ ಆದ ಹಿನ್ನೆಲೆಯಲ್ಲಿ ಒಟ್ಟು 88...

    ಸಪ್ತಋಷಿವಾಣಿ: ಗ್ರಹಬಲಕ್ಕಾಗಿ ಈ ಮಂತ್ರಗಳನ್ನು ಪಠಿಸುವುದರಿಂದ ಉತ್ತಮ ಫಲ

    ನವಗ್ರಹ ಮಂತ್ರವನ್ನು ಅದರ ಭಾವಾರ್ಥ ಸಹಿತ ವಿವರಿಸಲಾಗಿದೆ ಸನ್ಮಾನ್ಯಆಸ್ತಿಕ ಶ್ರದ್ಧಾವಂತರು ಮನುಷ್ಯಪ್ರಯತ್ನದ ಜೊತೆ ಗ್ರಹಬಲಕ್ಕಾಗಿ ಈ ಮಂತ್ರಗಳನ್ನು ಪಠಿಸುವುದರಿಂದ ಉತ್ತಮ ಫಲ ಕಂಡುಕೊಳ್ಳಬಹುದಾಗಿದೆ

    ಸೂರ್ಯ ಗ್ರಹ ಮಂತ್ರ

    ಓಂ ಜಪಾಕುಸುಮ ಸಂಕಾಶಂ । ಕಾಶ್ಯಪೇಯಂ ಮಹಾದ್ಯುತಿಂ ।
    ತಮೋsರಿಮ್ ಸರ್ವಪಾಪಘ್ನಮ್ । ಪ್ರಣತೋsಸ್ಮಿ ದಿವಾಕರಂ

    ಭಾವಾರ್ಥ : ದಾಸವಾಳ ಹೂಗಳಂತೆ ಕಂಗೊಳಿಸುವ, ಕಶ್ಯಪನ ಮಗನಾದ, ಶತ್ರುವೋ ಎಂಬಂತೆ ಕತ್ತಲನ್ನು ಅಟ್ಟುವ, ಸಕಲ ಪಾಪಗಳನ್ನು ಪರಿಹರಿಸುವ ದಿವಾಕರನಿಗೆ ನಮಸ್ಕರಿಸುತ್ತೇನೆ.

    ಚಂದ್ರ ಗ್ರಹ ಮಂತ್ರ

    ಓಂ ದಧಿಶಂಖತುಷಾರಾಭಂ । ಕ್ಷೀರೋದಾರ್ಣವಸಂಭವಮ್।
    ನಮಾಮಿ ಶಶಿನಂ ಸೋಮಂ । ಶಂಬೋರ್ಮುಕುಟ ಭೂಷಣಂ ।।

    ಭಾವಾರ್ಥ : ಮೊಸರು, ಶ೦ಖ, ಹಿಮದ೦ತೆ ಹೊಳೆಯುವ; ಕ್ಷೀರಸಾಗರದಿಂದ ಹೊರಹೊಮ್ಮಿದ, ಕಾಂತಿಯುಕ್ತನಾದ, ಮಹಾದೇವನ ಶಿರಸ್ಸನ್ನು ಅಲಂಕರಿಸಿರುವ ಚಂದ್ರದೇವನಿಗೆ ನಮಸ್ಕರಿಸುತ್ತೇನೆ.

    ಕುಜ ಗ್ರಹ ಮಂತ್ರ

    ಓಂ ಧರಣೀಗರ್ಭ ಸಂಭೂತಂ । ವಿದ್ಯುತ್ ಕಾಂತಿ ಸಮಪ್ರಭಮ್ ।
    ಕುಮಾರಂ ಶಕ್ತಿ ಹಸ್ತಾಂಚ । ಮಂಗಳಂ ಪ್ರಣಮಾಮ್ಯಹಮ್ ।।

    ಭಾವಾರ್ಥ : ಧರಣೀದೇವಿಯ ಗರ್ಭದಲ್ಲಿ ಜನಿಸಿದ, ವಿದ್ಯುತ್ ಕಾಂತಿಗೆ ಸಮನಾದ ಪ್ರಭಾವಳಿಯುಳ್ಳ, ಶಕ್ತ್ಯಾಯುಧದಿಂದ ಶೋಭಿಸುವ, ತರುಣನಾದ ಮಂಗಳನಿಗೆ (ಕುಜ / ಅಂಗಾರಕ) ನಮಸ್ಕರಿಸುತ್ತೇನೆ.

    ಬುಧ ಗ್ರಹ ಮಂತ್ರ

    ಓಂ ಪ್ರಿಯಂಗುಕಾಲಿಕ ಶ್ಯಾಮಂ । ರೂಪೇಣಾಮ್ ಪ್ರತಿಮಂ ಬುಧಮ್ ।
    ಸೌಮ್ಯಮ್ ಸೌಮ್ಯ ಗುಣೋಪೇತಂ । ತಮ್ ಬುಧಮ್ ಪ್ರಣಮಾಮ್ಯಹಮ್ ।।

    ಭಾವಾರ್ಥ : ಪ್ರಿಯ೦ಗು ಲತೆಯ ಚಿಗುರಿನ೦ತೆ ಶ್ಯಾಮವರ್ಣದವನೂ ಸುಂದರನೂ ಸೌಮ್ಯಗುಣಸಂಪನ್ನನೂ ಆದ ಬುಧ ದೇವನನ್ನು ನಮಸ್ಕರಿಸುತ್ತೇನೆ.

    ಗುರು ಗ್ರಹ ಮಂತ್ರ

    ಓಂ ದೇವಾನಾಮ್ ಚ ಋಷಿಣಾಮ್ ಚ । ಗುರುಮ್ ಕಾಂಚನ ಸನ್ನಿಭಮ್ ।
    ಬುದ್ಧಿ ಭೂತಂ ತ್ರಿಲೋಕೇಶಂ । ತಮ್ ನಮಾಮಿ ಬೃಹಸ್ಪತಿಮ್ ।।

    ಭಾವಾರ್ಥ : ದೇವತೆಗಳಿಗೂ ಋಷಿಗಳಿಗೂ ಪ್ರಿಯನಾದ, ಚಿನ್ನದ೦ತೆ ಹೊಳೆಯುವ, ಮೂರುಲೋಕಗಳಲ್ಲೂ ಸಾಟಿಯಿಲ್ಲದಷ್ಟು ಬುದ್ಧಿಮತ್ತೆ ಹೊಂದಿರುವ ಬೃಹಸ್ಪತಿಗೆ ನಮಸ್ಕರಿಸುತ್ತೇನೆ.

    ಶುಕ್ರ ಗ್ರಹ ಮಂತ್ರ

    ಓಂ ಹಿಮಕುಂದ ಮೃಣಾಲಾಭಂ
    । ದೈತ್ಯಾನಾಮ್ ಪರಮಮ್ ಗುರುಮ್ ।
    ಸರ್ವಶಾಸ್ತ್ರ ಪ್ರವಕ್ತಾರಮ್ । ಭಾರ್ಗವಂ ಪ್ರಣಮಾಮ್ಯಹಮ್ ।।

    ಭಾವಾರ್ಥ : ಹಿಮದ ಹಾಗೆ ಹಾಗೂ ಕು೦ದ ಪುಷ್ಪ ಮೃಣಾಲದ ಹಾಗೆ ಶೋಭಿಸುವ, ದೈತ್ಯರ ಪರಮಗುರುವಾದ, ಸಕಲ ಶಾಸ್ತ್ರ ಪರಿಣತನಾದ, ಭೃಗು ಮಹರ್ಷಿಯ ಕುಲದವನಾದ ಶುಕ್ರನಿಗೆ ನಮಸ್ಕರಿಸುತ್ತೇನೆ.

    ಶನಿ ಗ್ರಹ ಮಂತ್ರ

    ಓಂ ನೀಲಾಂಜನ್ ಸಮಾಭಾಸಂ । ರವಿಪುತ್ರಂ ಯಮಾಗ್ರಜಮ್ ।
    ಛಾಯಮಾರ್ತಾಂಡ ಸಮಭೂತಂ । ತಮ್ ನಮಾಮಿ ಶನೈಶ್ಚರಮ್ ।।

    ಭಾವಾರ್ಥ : ನೀಲವರ್ಣದಿಂದ ಶೋಭಿಸುವ, ಸೂರ್ಯದೇವನ ಮಗನೂ ಯಮನ ಹಿರಿಯ ಸಹೋದರನೂ ಆದ ಛಾಯಾಪುತ್ರ ಶನಿದೇವನಿಗೆ ನಮಸ್ಕರಿಸುತ್ತೇನೆ.

    ರಾಹು ಗ್ರಹ ಮಂತ್ರ

    ಓಂ ಅರ್ಧಕಾಯಂ ಮಹಾವೀರ್ಯಮ್ । ಚಂದ್ರಾದಿತ್ಯ ವಿಮರ್ದನಂ ।
    ಸಿಂಹಿಕಾಗರ್ಭಸಂಭೂತಂ । ತಮ್ ರಾಹುಮ್ ಪ್ರಣಮಾಮ್ಯಹಮ್ ।।

    ಭಾವಾರ್ಥ : ಅರ್ಧ ದೇಹವನ್ನು ಹೊಂದಿದ್ದರೂ ವೀರನಾದ, ಸೂರ್ಯ ಚಂದ್ರರನ್ನು ಗ್ರಹಣದ ಮೂಲಕ ಪೀಡಿಸುವ, ಸಿಂಹಿಕೆಯ ಮಗನಾದ ರಾಹುವಿಗೆ ನಮಸ್ಕರಿಸುತ್ತೇನೆ.

    ಕೇತು ಗ್ರಹ ಮಂತ್ರ


    • ಓಂ ಪಲಾಶಪುಷ್ಪ ಸಂಕಾಶಂ । ತಾರಕಾಗ್ರಹ ಮಸ್ತಕಂ ।
      ರೌದ್ರಂ ರೌದ್ರಾತ್ಮಕಂ ಘೋರಂ । ತಮ್ ಕೇತುಂ ಪ್ರಣಮಾಮ್ಯಹಮ್ ।।

    ಭಾವಾರ್ಥ : ಪಲಾಶ ಹೂವಿನ೦ತೆ ಕೆ೦ಪಾದ, ನಕ್ಷತ್ರ ಹಾಗೂ ಗ್ರಹಗಳ ನೆತ್ತಿಯಲ್ಲಿ ಶೋಭಿಸುವ, ಅತ್ಯ೦ತ ರೌದ್ರನಾದ ಹಾಗೂ ಘೋರನಾದ ಕೇತುವಿಗೆ ನನ್ನ ಪ್ರಣಾಮಗಳು

    ನಮಃ ಸೂರ್ಯಾಯ ಸೋಮಾಯ ಮ೦ಗಲಾಯ ಬುಧಾಯ ಚ|
    ಗುರು ಶುಕ್ರ ಶನಿಭ್ಯಶ್ಚ ರಾಹವೇ ಕೇತವೇ ನಮಃ ||

    ಇತಿ ವ್ಯಾಸಮುಖೋದ್ಗೀತಂ ಯಃ ಪಠೇತ್ ಸುಸಮಾಹಿತಃ|
    ದಿವಾ ವಾ ಯದಿ ವಾ ರಾತ್ರೌ ವಿಘ್ನಶಾಂತಿರ್ಭವಿಷ್ಯತಿ ||

    ವೇದವ್ಯಾಸರು ಹೇಳಿದ ಈ ನವಗ್ರಹಸ್ತೋತ್ರವನ್ನು ಹಗಲು ಅಥವಾ ರಾತ್ರಿ ವೇಳೆ ಏಕಾಗ್ರತೆಯಿಂದ ಪಠಿಸಿದರೆ ಉತ್ತಮ ಫಲಗಳು ದೊರೆಯುವವು

    ಧಾರ್ಮಿಕ ಮಾರ್ಗದರ್ಶಕ
    ಸಂತೋಷ ಆಚಾರ್ಯ ಉಡುಪಿ

    ಸಪ್ತಋಷಿ (ಧಾರ್ಮಿಕ ಸಂಗ್ರಹ)

    Latest Posts

    ಉದ್ಯೋಗ ಮಾಹಿತಿ: ಕರ್ನಾಟಕ ಅರಣ್ಯ ಇಲಾಖೆಯಲ್ಲಿ 310 ಅರಣ್ಯ ವೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು...

    ಕೆನಡಾ ನಂಟು ಹೊಂದಿರುವ 43 ಕುಖ್ಯಾತ ಭಯೋತ್ಪಾದಕರ ಪಟ್ಟಿ ಬಿಡುಗಡೆ ಮಾಡಿದ NIA

    ನವದೆಹಲಿ:ಭಯೋತ್ಪಾದನಾ ವಿರೋಧಿ ತನಿಖಾ ಸಂಸ್ಥೆಯು(NIA) 43 ಕುಖ್ಯಾತ ಶಂಕಿತ ಭಯೋತ್ಪಾದಕರ ಚಿತ್ರಗಳನ್ನು ಸಾರ್ವಜನಿಕಗೊಳಿಸಿದೆ, ಅವರಲ್ಲಿ ಕೆಲವರು ಕೆನಡಾದಲ್ಲಿ ನೆಲೆಸಿದ್ದಾರೆ. ವಿವಿಧ ಕ್ರಿಮಿನಲ್ ಅಪರಾಧಗಳಲ್ಲಿ ತೊಡಗಿರುವ ಆರೋಪ...

    ಖ್ಯಾತ ಯಕ್ಷಗಾನ ಭಾಗವತ ರಾಮಚಂದ್ರ ನಾಯ್ಕ ಹೆಮ್ಮನ ಬೈಲ್ ಹೃದಯಾಘಾತದಿಂದ ನಿಧನ

    ಸಿದ್ದಾಪುರ: ಖ್ಯಾತ ಯಕ್ಷಗಾನ ಭಾಗವತ ರಾಮಚಂದ್ರ ನಾಯ್ಕ ಹೆಮ್ಮನ ಬೈಲ್ (57) ಬುಧವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಯಕ್ಷಗಾನ ಭಾಗವರಲ್ಲದೆ ಕೃತಿ ರಚನಾಕಾರರೂ ಆಗಿದ್ದ ಅವರು...

    ದಕ್ಷಿಣ ಕನ್ನಡ ಮೀನು ಮಾರಾಟ ಫೆಡರೇಶನ್ನಿಗೆ ವಂಚನೆ ಪ್ರಕರಣ- ಮಂಜುನಾಥ ಖಾರ್ವಿಗೆ ಜೈಲು ಶಿಕ್ಷೆ

    ಮಂಗಳೂರು : ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್‌ ಲಿ.ಗೆ ಮಂಜುನಾಥ ಖಾರ್ವಿ ಅವರು ನೀಡಿದ ಮೂರು ಚೆಕ್‌ಗಳು ಬೌನ್ಸ್‌ ಆದ ಹಿನ್ನೆಲೆಯಲ್ಲಿ ಒಟ್ಟು 88...

    Don't Miss

    ಬಂಟ್ವಾಳ: ಬಸ್ ಗಾಗಿ ಕಾಯುತ್ತಿದ್ದ ಶಿಕ್ಷಕಿ ಹಾಗೂ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ

    ಬಂಟ್ವಾಳ: ನಿಲ್ಲಿಸಿದ್ದ ಲಾರಿಯೊಂದು ಮುಂದೆ ಹೋಗಿ ಕಾರಿಗೆ ಡಿಕ್ಕಿಯಾಗಿದ್ದಲ್ಲದೆ ಬಸ್ ಕಾಯುತ್ತಿದ್ದ ವಿದ್ಯಾರ್ಥಿನಿ ಮತ್ತು ಶಿಕ್ಷಕಿಯೋರ್ವರಿಗೆ ಡಿಕ್ಕಿ ಹೊಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೆಲ್ಕಾರ್ ಎಂಬಲ್ಲಿ ನಡೆದಿದೆ.

    ಕಾರು-ಬೈಕ್‌ ಭೀಕರ ಅಪಘಾತ: ಯುವತಿ ಮೃತ್ಯು

    ಮುಲ್ಕಿ: ಬೈಕ್‌ಗೆ ಕಾರು ಢಿಕ್ಕಿಯಾಗಿ ಸಹ ಸವಾರೆ ಮೃತಪಟ್ಟು ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ  ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ವಿಜಯ ಸನ್ನಿಧಿ ಜಂಕ್ಷನ್ ಬಳಿ ಶುಕ್ರವಾರ...

    ಪ್ರೇಮಿಗಳ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ – ಇಬ್ಬರ ಬಂಧನ

    ಬೆಂಗಳೂರು : ಪ್ರೇಮಿಗಳ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದವರು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ನಯನಾ ಹಾಗೂ ಕಿರಣ್ ಎಂದು ಗುರುತಿಸಲಾಗಿದೆ.

    ಕಾರ್ಕಳ: ಸ್ಕೂಟಿಗೆ ಬೈಕ್‌ ಡಿಕ್ಕಿ – ಭೀಕರ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆ

    ಕಾರ್ಕಳ : ಕಾರ್ಕಳ ನಗರದ ಸರ್ವಜ್ಞ ವೃತ್ತ ಬಳಿ, ಹೊಟೇಲ್‌ ಜೈನ್‌ ಮುಂಭಾಗ ಸ್ಕೂಟಿಗೆ ಬೈಕ್‌ ಡಿಕ್ಕಿ ಹೊಡೆದಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಮಂಗಳೂರು: ಪರಿಸರ ಸ್ನೇಹಿ ಚೌತಿ ಹಬ್ಬ ಆಚರಿಸಿ- ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

    ಮಂಗಳೂರು : ದ.ಕ. ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಗಣೇಶೋತ್ಸವ ಶಾಂತಿಯುತ ವಾಗಿ ಹಾಗೂ ಪರಿಸರ ಸ್ನೇಹಿಯಾಗಿ ಆಚರಿಸುವ ನಿಟ್ಟಿನಲ್ಲಿ ಸಕಲ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸಂಬಂಧಪಟ್ಟ ಅಧಿಕಾರಿಗಳು...