ಮಂಗಳೂರು: ಜೈ ಭಾರತಿ ತರುಣ ವೃಂದ (ರಿ.) ಉರ್ವ ಹೊಯಿಗೆ ಬೈಲು ಇದರ ಮಾಜಿ ಅಧ್ಯಕ್ಷರು ಹಾಗೂ ಮಾಜಿ ಕಾರ್ಯದರ್ಶಿಯೂ ಆಗಿದ್ದ ಸತೀಶ್ ಪೂಜಾರಿ ಅಶೋಕನಗರ ಇವರು ದ.ಕ.ಜಿಲ್ಲಾ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಇವರು ಬಿಲ್ಲವ ಸಂಘ (ರಿ.) ಉರ್ವ-ಅಶೋಕನಗರ ಇದರ ಮಾಜಿ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಕ್ರೀಡಾ ಕಾರ್ಯದರ್ಶಿಯಾಗಿದ್ದು ಸಾಮಾಜಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದರು.