ಭಾರತ ಜಾತ್ಯಾತೀತ ರಾಷ್ಟ್ರ. ಭಾರತದಲ್ಲಿ ಎಲ್ಲ ಪ್ರಜೆಗಳಿಗೂ ಸಮಾನ ಹಕ್ಕಿದೆ. ಶಿಕ್ಷಣ, ಸಮಾನತೆ, ವಾಕ್ ಸ್ವಾತಂತ್ರ್ಯ ಹಕ್ಕುಗಳು, ಇಚ್ಛೆಯ ಧರ್ಮವನ್ನು ಸ್ವೀಕರಿಸುವ ಹಕ್ಕುಗಳು, ಎಲ್ಲಿ ಬೇಕಾದರೂ ಜೀವಿಸುವ ಹಕ್ಕುಗಳು, ಭಾರತದ ಪ್ರಜೆ ದೇಶದ ಯಾವುದೇ ಭಾಗದಲ್ಲಿ ಬೇಕಾದರೂ ಜೀವನ ರೂಪಿಸಿಕೊಳ್ಳಲು ಹಕ್ಕು ಹೀಗೆ ಇಷ್ಟೆಲ್ಲ ಸ್ವತಂತ್ರ ಹಕ್ಕುಗಳು ಎಲ್ಲರಿಗೂ ಇರುವುದು ಭಾರತದಲ್ಲಿ 1950 ರ ಜನವರಿ 26 ರಂದು ಜಾರಿಗೆ ಬಂದ ಬೃಹತ್ ಸಂವಿಧಾನದಿಂದ. ಆದ್ದರಿಂದ ಪ್ರತಿ ವರ್ಷವು ಸಹ ಈ ದಿನವನ್ನು ಭಾರತೀಯ ಪ್ರಜೆಗಳು ಎಲ್ಲೇ ಇದ್ದರೂ ಸಹ ನೆನೆಯಬೇಕಾಗಿದೆ. ಹಾಗೆಯೇ ಆಚರಣೆ ಮಾಡಬೇಕಿದೆ. ಕಾನೂನಾತ್ಮಕವಾಗಿ ಈ ದಿನವನ್ನು ರಾಷ್ಟ್ರದೆಲ್ಲೆಡೆ ರಕ್ಷಣಾ ಪಡೆಗಳು ಪರೇಡ್ ಮಾಡುವ ಮೂಲಕ, ಶಾಲೆಗಳು, ಸರ್ಕಾರಿ ಕಚೇರಿಗಳಲ್ಲಿ ಧ್ವಜಾರೋಹಣ ಮಾಡುವ ಮೂಲಕ ಸಂವಿಧಾನ ಜಾರಿಗೆ ಬಂದ ದಿನವನ್ನು ಗಣರಾಜ್ಯೋತ್ಸವದ ಆಚರಣೆ ನಡೆಯುತ್ತದೆ. ದೇಶದಾದ್ಯಂತ ಪ್ರತಿಯೊಬ್ಬ ರಿಗೂ ಮಹತ್ವದ ದಿನವಾಗಿದೆ ಎಂದು ತುಳುನಾಡ ರಕ್ಷಣಾ ವೇದಿಕೆ ಕೇಂದ್ರೀಯ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಭಟ್ ಕಡಬ ಅವರು ತುಳುನಾಡ ರಕ್ಷಣಾ ವೇದಿಕೆ ಕೇಂದ್ರ ಕಚೇರಿಯಲ್ಲಿ ಗಣರಾಜ್ಯೋತ್ಸವ ಆಚರಣೆ ಅಂಗವಾಗಿ ಡಾ .ಬಿ. ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ಅರ್ಚನೆ ಮಾಡಿ ಮಾತನಾಡಿದರು
Trending
- ಮಂಗಳೂರಿನಲ್ಲಿ ಸ್ಪೆಷಲ್ ಆಕ್ಷನ್ ಪೋರ್ಸ್ ಕಾರ್ಯಪಡೆ ಕಚೇರಿ ಉದ್ಘಾಟಿಸಿದ ಗೃಹ ಸಚಿವ ಡಾ. ಜಿ ಪರಮೇಶ್ವರ್
- ಸುರತ್ಕಲ್ ಪೊಲೀಸ್ ಠಾಣಾ ಪೊಲೀಸ್ ಇನ್ಸ್ಪೆಕ್ಟರ್ ರಾಗಿ ಅಧಿಕಾರ ಸ್ವೀಕರಿಸಿದ ದಕ್ಷ ಪೊಲೀಸ್ ಅಧಿಕಾರಿ ಪ್ರಮೋದ್ ಕುಮಾರ್
- ಪಶ್ಚಿಮ ವಲಯದ 4 ಜಿಲ್ಲೆಗಳ ಕಾನೂನು ಮತ್ತು ಸುವ್ಯವಸ್ಥೆ ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ
- ರಾಜ್ಯ ಸರಕಾರದ 2 ವರ್ಷಗಳ ಸಂಭ್ರಮ: ಮಾಹಿತಿ ಪ್ರದರ್ಶನ
- ಬಾಲಕಾರ್ಮಿಕ ಪದ್ಧತಿ ಹೋಗಲಾಡಿಸಲು ನಿರಂತರ ಶ್ರಮ ಅಗತ್ಯ
- ಪಿಲಿಕುಳ ಜೂನ್ 14 ರಿಂದ ಹಣ್ಣುಗಳ ಮೇಳ
- ಸರ್ಜರಿ ಇಲ್ಲದೆ ವಕ್ರಪಾದ ಸಮಸ್ಯೆ ನಿವಾರಣೆ – ಡಾ.ಕೆ.ಆರ್ ಕಾಮತ್
- ಹೋಟೆಲ್ಗಳಲ್ಲಿ ಗ್ರಾಹಕರಿಗೆ ಸುರಕ್ಷಿತ ಕುಡಿಯುವ ನೀರು: ಜಿ.ಪಂ ಸಿ.ಇ.ಒ ಸೂಚನೆ