ಬೆಂಗಳೂರು: ಏಪ್ರಿಲ್ 22 ರಿಂದ ಆರಂಭವಾಗಿ ಮೇ 18ರವರೆಗೆ ನಡೆದಿದ್ದಂತ ದ್ವಿತೀಯ ಪಿಯುಸಿ ಪರೀಕ್ಷೆಯ ( Karnataka Second PU Exam ) ಫಲಿತಾಂಶವನ್ನು ನಾಳೆ ಬೆಳಿಗ್ಗೆ 11 ಗಂಟೆಗೆ ಪ್ರಕಟಿಸಲಾಗುತ್ತಿದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಘೋಷಿಸಿದ್ದಾರೆ.
ಈ ಕುರಿತಂತೆ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ (ಜೂನ್.18) ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಶುಭಾಶಯಗಳು ಎಂಬುದಾಗಿ ತಿಳಿಸಿದ್ದಾರೆ.
ಅಂದಹಾಗೆ ದ್ವಿತೀಯ ಪಿಯುಸಿ 2021-22ನೇಸಾಲಿನ ಫಲಿತಾಂಶವನ್ನು ಜೂನ್ 25 ರೊಳಗೆ ಪ್ರಕಟಿಸೋದಾಗಿ ಹೇಳಿತ್ತು. ಇದೀಗ ಜೂನ್ 18ರ ನಾಳೆ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ. ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ www.karresult.nic.in ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.
2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ, ಏಪ್ರಿಲ್ 22 ರಿಂದ ಆರಂಭವಾಗಿ ಮೇ 18 ಕ್ಕೆ ಮುಕ್ತವಾಗಿದ್ದವು. ಈ ಬಾರಿ ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
