ಬೆಂಗಳೂರು: ಈಗಾಗಲೇ ಎಸ್ ಎಸ್ ಎಲ್ ಸಿ ಪರೀಕ್ಷೆಯ ( SSLC Exam ) ಸಂದರ್ಭದಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷೆಗೆ ತೆರಳೋದಕ್ಕೆ, ಬರೆದು ವಾಪಾಸ್ ಪರೋದಕ್ಕೆ ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ( KSRTC Bus ) ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿತ್ತು.
ಇದೀಗ ಏ.22ರಿಂದ ಆರಂಭಗೊಳ್ಳುತ್ತಿರುವಂತ ದ್ವಿತೀಯ ಪಿಯು ಪರೀಕ್ಷೆಗೆ ( Second PU Exam ) ವಿದ್ಯಾರ್ಥಿಗಳಿಗೂ ಇದೇ ಅವಕಾಶವನ್ನು ನೀಡಿದೆ.
ಈ ಕುರಿತು ಕೆ ಎಸ್ ಆರ್ ಟಿ ಸಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 22-04-2022ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಪರೀಕ್ಷೆಗಾಗಿ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳಿಗೆ ತೆರಳಬೇಕಾಗಿದೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಅವಧಿಯಲ್ಲಿ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳಿಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸುಲು ಅನುಮತಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಕೋರಿದ್ದಾರೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ ಕೋರಿಕೆಯ ಹಿನ್ನಲೆ ಹಾಗೂ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಕೆ ಎಸ್ ಆರ್ ಟಿ ಸಿ ಯು ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ ದಿನಾಂಕಗಳಂದು ಅಂದ್ರೇ ದಿನಾಂಕ 22-04-2022 ರಿಂದ 18-05-2022ರವರೆಗೆ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು, ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ, ಪರೀಕ್ಷೆ ಬರೆದು ಹಿಂದಿರುಗೋದಕ್ಕೆ ನಿಗಮದ ನಗರ, ಹೊವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿರೋದಾಗಿ ತಿಳಿಸಿದ್ದಾರೆ. ಇನ್ನೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು, ಕೆ ಎಸ್ ಆರ್ ಟಿ ಸಿ ಬಸ್ ಗಳಲ್ಲಿ ತೆರಳುವಾಗ ನಿರ್ವಾಹಕರಿಗೆ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಉಚಿತವಾಗಿ ಪರೀಕ್ಷೆಗೆ ತೆರಳು, ಆ ಬಳಿಕ ಮನೆಗೆ ವಾಪಾಸ್ ಆಗಬಹುದಾಗಿದೆ. ಅಲ್ಲದೇ ಬಸ್ಸು ತೆರಳುವ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ, ವಿದ್ಯಾರ್ಥಿಗಳು ಬಸ್ಸನ್ನು ಹತ್ತಲು, ಇಳಿಯಲು ಅನುಕೂಲವಾಗುವಂತೆ ಕೋರಿಕೆ ನಿಲುಗಡೆ ನೀಡಲು ಸೂಚಿಸಿದೆ.