ಬೆಂಗಳೂರು : ದ್ವಿತೀಯ ಪಿಯುಸಿ, ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆ 2024 ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ.
2024 ಮಾರ್ಚ್ 02ರಿಂದ ಮಾರ್ಚ್ 22ರವರೆಗೆ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದ್ದು, ಮಾರ್ಚ್ 25 ರಿಂದ ಏಪ್ರಿಲ್ 06 ರವರೆಗೆ ಎಸ್‌ಎಸ್‌ಎಲ್ ಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿ ಶೀಘ್ರದಲ್ಲೇ ಅಪ್ ಡೇಟ್ ಆಗಲಿದೆ.
ಪರೀಕ್ಷೆಗಿನ್ನು ಮೂರು ತಿಂಗಳು ಬಾಕಿಯಿದ್ದು, ವಿದ್ಯಾರ್ಥಿಗಳಿಗೆ ಅಭ್ಯಾಸಕ್ಕೆ ಅನುಕೂಲವಾಗಲೆಂದು ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದೆ.