ಬೆಂಗಳೂರು : ಏಪ್ರಿಲ್ 22 ರಿಂದ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಏಪ್ರಿಲ್ 22 ರಿಂದ ಮೇ.18ರವರೆಗೆ ನಡೆಯಲಿದ್ದು, ಈ ಬಾರಿ ಒಟ್ಟು 6.84 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಈ ಬಾರಿ ಕೋವಿಡ್ ನಿಯಂತ್ರಣಕ್ಕೆ ಬಂದ ಹಿನ್ನೆಲೆಯಲ್ಲಿ ಮೊದಲಿನಂತೆ ಪರೀಕ್ಷೆ ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ.
ಈ ಬಾರಿಯ ಪರೀಕ್ಷೆಯಲ್ಲಿ ಯಾವುದೇ ಹೊಸ ಬದಲಾವಣೆಗಳು ಇರುವುದಿಲ್ಲ. ಕೋವಿಡ್ ಪೂರ್ವದ ಮಾದರಿಯಲ್ಲೇ ಪರೀಕ್ಷೆಗಳು ನಡೆಯಲಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಎಸ್‌ಎಸ್‌ಎಲ್ ಸಿ ಮಾದರಿಯಲ್ಲೇ ಈ ಪರೀಕ್ಷೆಯಲ್ಲೂ ಸುಲಭವಾಗಿ ಉತ್ತರಿಸಬಹುದಾದ ಪ್ರಶ್ನೆಗಳೊಂದಿಗೆ ಪ್ರಶ್ನೆ ಪತ್ರಿಕೆ ತಯಾರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ ಒಟ್ಟು 2 ಸಾವಿರಕ್ಕೂ ಹೆಚ್ಚು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
