ಮಂಗಳೂರು: ಹಿಜಾಬ್ ಮತ್ತು ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ಇಂದಿನಿಂದ ಫೆ 19ರ ಸಂಜೆ 6 ಗಂಟೆಯವರೆಗೆ ದ. ಕ. ಜಿಲ್ಲಾ ಪೊಲೀಸ್ ಇಲಾಖಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶಾಲಾ ಕಾಲೇಜುಗಳ ಸುತ್ತಮುತ್ತಲಿನ 200 ಮೀಟರ್ನೊಳಗೆ ಸೆಕ್ಷನ್ 144 ಜಾರಿಗೊಳಿಸಿ ದ. ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ. ಆದೇಶ ಹೊರಡಿಸಿದ್ದಾರೆ. ಕಾನೂನು ಭಂಗ ಮಾಡುವ ಉದ್ದೇಶದಿಂದ ಶಾಲಾ ಕಾಲೇಜಿನ 200 ಮೀಟರ್ ಸುತ್ತಮುತ್ತಲು 5ಕ್ಕಿಂತ ಹೆಚ್ಚು ಮಂದಿ ಗುಂಪು ಸೇರುವಂತಿಲ್ಲ, ಮೆರವಣಿಗೆ, ಸಭೆ ನಡೆಸುವಂತಿಲ್ಲ. ಯಾವುದೇ ಆಯುಧ, ಕುಡುಗೋಲು, ಖಡ್ಗ, ಭರ್ಜಿ, ಚೂರಿ, ದೊಣ್ಣೆ, ಲಾಠಿ ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಅಥವಾ ಅದಕ್ಕೆ ಪೂರಕವಾದ ಯಾವುದೇ ವಸ್ತುಗಳನ್ನು ಕೊಂಡೊಯ್ಯುವಂತಿಲ್ಲ.
©2021 Tulunada Surya | Developed by CuriousLabs