Saturday, October 12, 2024
spot_img
More

    Latest Posts

    ಸಂಸತ್ತಿನಲ್ಲಿ ಭದ್ರತಾ ಲೋಪ – ಲೋಕಸಭಾ ಕಲಾಪದ ವೇಳೆ ಮೇಲಿನಿಂದ ಜಿಗಿದ ಇಬ್ಬರು ವ್ಯಕ್ತಿಗಳು

    ನವದೆಹಲಿ : ಸಂಸತ್ತಿನ ಮೇಲೆ ಟೆರರ್ ಅಟ್ಯಾಕ್ ನಡೆದು 22 ವರ್ಷ ಕಳೆದ ದಿನವೇ ಇಂದು ಮತ್ತೆ ಲೋಕಸಭೆಯಲ್ಲಿ ಭಾರೀ ಭದ್ರತೆ ಲೋಪವಾಗುವ ಘಟನೆ ನಡೆದಿದೆ. ಸಂಸತ್ ಕಲಾಪ ನಡೆಯುತ್ತಿದ್ದ ವೇಳೆ ಇಬ್ಬರು ಒಳನುಸುಳಿ ಸಂದರ್ಶಕರ ಗ್ಯಾಲರಿಯಿಂದ ಜಿಗಿದು ಸದನದ ಸುತ್ತಲೂ ಓಡಾಡಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ.ಪಶ್ಚಿಮ ಬಂಗಾಳದ ಬಿಜೆಪಿ ಸಂಸದ ಖಗೇನ್ ಮುರ್ಮು ಅವರು ಲೋಕಸಭೆಯಲ್ಲಿ ಮಾತನಾಡುತ್ತಿದ್ದಾಗ ಇಬ್ಬರು ಅಪರಿಚಿತ ವ್ಯಕ್ತಿಗಳು ಸದನದ ಒಳನುಗ್ಗಿದ್ದಾರೆ. ಇದನ್ನು ಅಲ್ಲಿದ್ದವರು ಗಮನಿಸಿದ್ದಾರೆ. ಸುಮಾರು 20 ವರ್ಷ ವಯಸ್ಸಿನ ಇಬ್ಬರು ವ್ಯಕ್ತಿಗಳು ಸದನದ ಒಳಗೆ ನುಗ್ಗಿದ್ದಾರೆ. ಬಂಧಿತರ ಬಳಿ ಹಳದಿ ಬಣ್ಣ ಟಿಯರ್​ ಗ್ಯಾಸ್​​ ಇರುವುದು ಬೆಳಕಿಗೆ ಬಂದಿದೆ. ಇನ್ನು ಅಪರಿಚಿತ ಸದನದೊಳಗೆ ನುಗ್ಗಿದ ಪರಿಣಾಮ ಮಧ್ಯಾಹ್ನ 2 ಗಂಟೆಯವರೆಗೆ ಕಲಾಪವನ್ನು ಸ್ಥಗಿತಗೊಳಿಸಲಾಗಿದೆ. ಅಶ್ರುವಾಯು ಡಬ್ಬಿಗಳನ್ನು ಹೊತ್ತು ನುಸುಳಿದ್ದರು ಎಂದು ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ. ಕೂಡಲೇ ಸದನವನ್ನು ಮುಂದೂಡಲಾಯಿತು. ಶೂನ್ಯ ವೇಳೆಯಲ್ಲಿ ಒಬ್ಬರು ಅಶ್ರುವಾಯು ಎರಚುತ್ತಾ ಸಾರ್ವಜನಿಕ ಗ್ಯಾಲರಿಯಿಂದ ತೂಗಾಡುತ್ತಿರುವಂತೆ ಮತ್ತೊಬ್ಬ ಲೋಕಸಭೆಯ ಬೆಂಚುಗಳ ಮೇಲೆ ಹಾರುತ್ತಿರುವುದು ಕಂಡುಬಂದಿದೆ ಎಂದು ಚೌಧರಿ ಹೇಳಿದರು.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss