ಮಂಗಳೂರು : ನಗರದ ಜಪ್ಪು ಕಿಂಗ್ಸ್ ಗಾರ್ಡನ್ ಬಳಿಯ ಜಪ್ಪು ಮಜಿಲ ರಸ್ತೆಯಲ್ಲಿ ಎಂಡಿಎಂಎ ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ಬಿಕಾಂ ವಿದ್ಯಾರ್ಥಿ ಸೇರಿದಂತೆ ಮೂವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಡ್ರೈವರ್ ಆಗಿ ವೃತ್ತಿ ನಿರ್ವಹಿಸುತ್ತಿರುವ ತಲಪಾಡಿ ನಿವಾಸಿ ಅಬ್ದುಲ್ ರವೂಫ್(30) ಕೇರಳ ರಾಜ್ಯದ ಕಣ್ಣೂರು ನಿವಾಸಿ, ಕೂಳೂರು ಯೇನೆಪೋಯಾ ಕಾಲೇಜಿನ ಬಿ.ಕಾಂ ವಿದ್ಯಾರ್ಥಿ ಉಬೈದ್ ಕುಲುಮಾನ್(21) ಹಾಗೂ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ನಿವಾಸಿ, ಚಿಕನ್ ಶಾಪ್ ಉದ್ಯೋಗಿ ಮೊಹಮ್ಮದ್ ಇರ್ಷಾದ್(21) ಬಂಧಿತ ಆರೋಪಿಗಳು. ಆಗಸ್ಟ್ 18 ರಂದು ಮಂಗಳೂರು ದಕ್ಷಿಣ ಪೊಲೀಸರು ಕಾರ್ಯಾಚರಣೆ ನಡೆಸಿ ಮಂಗಳೂರು ನಗರದ ಜೆಪ್ಪು ಕಿಂಗ್ಸ್ ಗಾರ್ಡನ್ ಬಳಿ ಜೆಪ್ಪು ಮಜಿಲ ರಸ್ತೆ ಬದಿಯಲ್ಲಿ ಎಂಡಿಎಂಎ ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 13,750 ರೂ. ಮೌಲ್ಯದ ಒಟ್ಟು 5.071 ಗ್ರಾಂ ಎಂದಿಎಂಎ ಮಾದಕದ್ರವ್ಯ, 1500 ರೂ. ನಗದು ಹಣ, ತೂಕ ಮಾಪನ, ಮೊಬೈಲ್ ಫೋನ್ ಹಾಗೂ 2 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
©2021 Tulunada Surya | Developed by CuriousLabs