ಉಡುಪಿ, ಜೂನ್ 2: ಕನ್ನಡ ನಾಡು, ನುಡಿ, ನೆಲ-ಜಲ, ಸಂಸ್ಕೃತಿ ಹಾಗೂ ಕನ್ನಡಿಗರ ಹಕ್ಕುಗಳ ರಕ್ಷಣೆಯ ಧ್ಯೇಯದೊಂದಿಗೆ “ನಮ್ಮ ಕರ್ನಾಟಕ ಸೇನೆ” ಸಂಘಟನೆಯು ಉಡುಪಿ ಜಿಲ್ಲೆಯಲ್ಲಿ ತನ್ನ ಚಟುವಟಿಕೆಗಳಿಗೆ ಚಾಲನೆ ನೀಡಿದೆ.

ಸಂಘಟನೆಯ ಉಡುಪಿ ಜಿಲ್ಲಾಧ್ಯಕ್ಷರಾಗಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿಯಾಗಿ ಸುಜಯ್ ಪೂಜಾರಿ, ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಜಯಪ್ರಕಾಶ್ ಶೆಟ್ಟಿ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಸುಜಯ್ ಪೂಜಾರಿ ಮಾತನಾಡಿ, ಕನ್ನಡ ಭಾಷೆ, ಸಂಸ್ಕೃತಿ, ರೈತರು, ಕಾರ್ಮಿಕರು, ವಿದ್ಯಾರ್ಥಿಗಳು, ಯುವಜನರು ಹಾಗೂ ಮಹಿಳೆಯರ ಹಿತಾಸಕ್ತಿಗಾಗಿ ರಾಜಕೀಯ ರಹಿತವಾಗಿ ಹೋರಾಟ ನಡೆಸುವುದಾಗಿ ತಿಳಿಸಿದರು.
ನೂತನ ಪದಾಧಿಕಾರಿಗಳ ನೇಮಕದಿಂದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಂಘಟನೆ ಮತ್ತಷ್ಟು ಬಲಗೊಳ್ಳಲಿದ್ದು, ಕನ್ನಡಪರ ಹೋರಾಟಗಳಿಗೆ ಹೊಸ ವೇದಿಕೆ ಸಿಗುವ ನಿರೀಕ್ಷೆ ವ್ಯಕ್ತವಾಗಿದೆ. ಸುಜಯ್ ಪೂಜಾರಿ ಅವರ ನೇತೃತ್ವದಲ್ಲಿ ಸಂಘಟನೆ ಯಾವ ರೀತಿಯಲ್ಲಿ ಬೆಳೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.





