ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ಹೊನ್ನಕಟ್ಟೆ ಜಂಕ್ಷನ್ ಬಳಿ ಸರಣಿ ಅಪಘಾತ ನಡೆದಿದ್ದು ಮೂವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಂಗಳೂರಿನಿಂದ ಸುರತ್ಕಲ್ ಕಡೆಗೆ ಹೋಗುತ್ತಿದ್ದ ಕಂಟೇನರ್ ರಾಷ್ಟ್ರೀಯ ಹೆದ್ದಾರಿ ಹೊನ್ನಕಟ್ಟೆ ಜಂಕ್ಷನ್ ಬಳಿ ನಿಂತಿದ್ದ ಸ್ಕೂಟರ್ ಗೆ ಡಿಕ್ಕಿ ಹೊಡೆದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ಸುರತ್ಕಲ್ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಸ್ಕೂಟರ್ ಗೆ ಡಿಕ್ಕಿ ಹೊಡೆದಿದ್ದು ಸರಣಿ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಮೂರು ದ್ವಿಚಕ್ರ ವಾಹನಗಳಿಗೆ ಹಾನಿಯಾಗಿದ್ದು ಮೂವರು ಸವಾರರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಗಾಯಾಳು ಸವಾರರನ್ನು ಸ್ಥಳೀಯ ನಿವಾಸಿಗಳಾದ ರಮೇಶ್ ಆಚಾರ್ಯ ಶಿವಕುಮಾರ್, ನಾಗೇಶ್, ಎಂದು ಗುರುತಿಸಲಾಗಿದೆ. ಅಪಘಾತದಿಂದ ಕೆಲವು ಹೊತ್ತು ಹೆದ್ದಾರಿ ಸಂಚಾರ ವ್ಯತ್ಯಯಗೊಂಡಿದ್ದು ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
