Sunday, November 3, 2024
spot_img
More

    Latest Posts

    ಉಪ್ಪಿನಂಗಡಿ : ಕಾರುಗಳ ನಡುವೆ ಸರಣಿ ಅಪಘಾತ

    ಉಪ್ಪಿನಂಗಡಿ : ಕಾರುಗಳ ನಡುವೆ ಸರಣಿ ಅಪಘಾತವಾದ ಘಟನೆ ಉಪ್ಪಿನಂಗಡಿ ಬಳಿಯ ನೇತ್ರಾವತಿ ಸೇತುವೆಯಲ್ಲಿ ನಡೆದಿದ್ದು ಉಪ್ಪಿನಂಗಡಿಯಲ್ಲಿ ತೀವ್ರ ಟ್ರಾಫಿಕ್ ಜಾಮ್ ಉಂಟಾಗಿತ್ತು.

    ಗುರುವಾಯನಕೆರೆ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಾರೊಂದು ಹಠಾತ್ ಬ್ರೇಕ್‌ ಹಾಕಿದ್ದು, ಈ ವೇಳೆ ಒಂದರ ಹಿಂದೆ ಒಂದರಂತೆ ಒಟ್ಟು ನಾಲ್ಕು ಕಾರುಗಳು ಡಿಕ್ಕಿ ಹೊಡೆದಿವೆ. ಅಪಘಾತದಿಂದ ಕಾರುಗಳಿಗೆ ಹಾನಿಯಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಸಕಾಲದಲ್ಲಿ ಆಗಮಿಸಿದ ಉಪ್ಪಿನಂಗಡಿ ಪೊಲೀಸರು ಟ್ರಾಫಿಕ್ ನಿಯಂತ್ರಿಸಿ, ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss