Tuesday, March 19, 2024
spot_img
More

    Latest Posts

    ಕುಂದಾಪುರ: ಸರಣಿ ರಸ್ತೆ ಅಪಘಾತ – ಓರ್ವ ಸಾವು

    ಕುಂದಾಪುರ: ಇಲ್ಲಿನ ಕುಂಭಾಶಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸರಣಿ ರಸ್ತೆ ಅಪಘಾತ ಸಂಭವಿಸಿದ್ದು ಓರ್ವ ಸಾವಿಗೀಡಾಗಿ ಮತ್ತೋರ್ವ ಗಾಯಗೊಂಡ ಘಟನೆ ಸಂಭವಿಸಿದೆ. ಕುಂಭಾಶಿಯ ಪಾಕಶಾಲಾ ಹೊಟೇಲ್ ಸಮೀಪ ಹೋಂಡಾ ಡಿಯೋ ದ್ವಿಚಕ್ರ ವಾಹನ, ಮತ್ತು ಹ್ಯುಂಡೈ ಐ10 ಕಾರು ಹಾಗೂ ಬಸ್‌ನ ನಡುವೆ ಸರಣಿ ಅಪಘಾತ ಸಂಭವಿಸಿತು. ಅಪಘಾತದಲ್ಲಿ ದ್ವಿಚಕ್ರ ವಾಹನದಲ್ಲಿದ್ದ ಓರ್ವ ಸಾವಿಗೀಡಾಗಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ದ್ವಿಚಕ್ರ ವಾಹನದಲ್ಲಿದ್ದ ಕೊರವಡಿ ಮಾಣಿಮನೆ ಬೆಟ್ಟು ನಿವಾಸಿ ಪ್ರಶಾಂತ್ ಪೂಜಾರಿ (28) ಹಾಗೂ ವಿಶ್ಲೇಶ್ ಪೂಜಾರಿ (27) ಅವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕೂಡಲೇ ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಪ್ರಶಾಂತ್ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss