ಮಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ದೇರಳಕಟ್ಟೆ ಸಮೀಪದ ಮಾಡೂರು ಗ್ರಾಮದ ಪವನ್ ಶೆಟ್ಟಿ(33) ಎಂದು ಗುರುತಿಸಲಾಗಿದೆ.ಆರೋಪಿಯು ಲೈಂಗಿಕ ಕಿರುಕುಳ ನೀಡಿದ ಕುರಿತು ಫೆ. 22ರಂದು ಪ್ರಕರಣ ದಾಖಲಾಗಿತ್ತು. ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಂಗ ಬಂಧನ ವಿಧಿಸಿದೆ.