Sunday, July 21, 2024
spot_img
More

    Latest Posts

    ರಾಜ್ಯದ ಮಹಿಳೆಯರಿಗೆ ನೆಮ್ಮದಿ ಸುದ್ದಿ : ‘ಶಕ್ತಿ ಯೋಜನೆ’ ಸ್ಥಗಿತವಿಲ್ಲ-KSRTC ಸ್ಪಷ್ಟನೆ

    ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯನ್ನು ಶೀಘ್ರವೇ ಸ್ಥಗಿತಗೊಳಿಸಲಾಗುತ್ತದೆ. ಮಹಿಳೆಯರ ಸಾರಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಬ್ರೇಕ್ ಬೀಳಲಿದೆ ಎಂಬುದಾಗಿ ಹೇಳಲಾಗುತ್ತಿತ್ತು. ಆದ್ರೇ ರಾಜ್ಯದ ಮಹಿಳೆಯರಿಗೆ ನೆಮ್ಮದಿಯ ಸುದ್ದಿ ಎನ್ನುವಂತೆ ಶಕ್ತಿ ಯೋಜನೆ ಸ್ಥಗಿತವಿಲ್ಲ.

    ಎಂದಿನಂತೆ ಮುಂದುವರೆಯಲಿದೆ ಎಂಬುದಾಗಿ KSRTC ಸ್ಪಷ್ಟ ಪಡಿಸಿದೆ.

    ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು, ಸಾಮಾಜಿಕ‌ ಜಾಲತಾಣಗಳಲ್ಲಿ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಶಕ್ತಿ ಯೋಜನೆ ಕೊನೆಗೊಳ್ಳಲಿದ್ದು, ಮಹಿಳೆಯರಿಗೆ ಒದಗಿಸುತ್ತಿರುವ ಉಚಿತ ಪ್ರಯಾಣ ಶೀಘ್ರದಲ್ಲಿಯೇ ಸ್ಥಗಿತಗೊಳ್ಳಲಿದೆ ಎಂಬುದಾಗಿ ಸುದ್ದಿಯನ್ನು ಪ್ರಕಟಿಸುತ್ತಿರುವುದು ಸತ್ಯಕ್ಕೆ ದೂರವಾದ ವಿಷಯವಾಗಿರುತ್ತದೆ ಎಂದು ಹೇಳಿದೆ.

    ಈ ರೀತಿಯ ಯಾವುದೇ ಗೊಂದಲದ ಸಂದೇಶಗಳನ್ನು ಸಾರ್ವಜನಿಕ ಪ್ರಯಾಣಿಕರು ನಂಬಬಾರದು. ಈ ಬಗ್ಗೆ ನಾವು ಸಾರ್ವಜನಿಕರಿಗೆ ಕಾಲಕಾಲಕ್ಕೆ ಸಮರ್ಪಕವಾದ ಮಾಹಿತಿಯನ್ನು ಒದಗಿಸುತ್ತೇವೆ ಎಂದು ತಿಳಿಸಿದೆ.

    ಮಹಿಳೆಯರ ಉಚಿತ‌ ಪ್ರಯಾಣದ ಶಕ್ತಿ ಯೋಜನೆಯು ಎಂದಿನಂತೆ ಮುಂದುವರೆಯಲಿದೆ ಎಂಬುದನ್ನು ಸ್ಪಷ್ಟಪಡಿಸಿದೆ. ಈ ಮೂಲಕ ಶಕ್ತಿ ಯೋಜನೆ ಸ್ಥಗಿತಗೊಳ್ಳುವ ಸುಳ್ಳು ಸುದ್ದಿಯ ಆತಂಕದಲ್ಲಿದ್ದಂತ ಮಹಿಳೆಯರಿಗೆ ಗುಡ್ ನ್ಯೂಸ್ ಅನ್ನು ಕೆ ಎಸ್ ಆರ್ ಟಿ ಸಿ ನೀಡಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss