ಮಂಗಳೂರು: 2010ರ ಮೇ 22ರಂದು ಬಜ್ಪೆ ವಿಮಾನ ದುರಂತದಲ್ಲಿ ಮಡಿದ ಪ್ರಯಾಣಿಕರು ಹಾಗೂ ಸಿಬ್ಬಂದಿಯ ಸ್ಮರಣಾರ್ಥ
ನಗರದ ಕೂಳೂರಿನ ತಣ್ಣೀರುಬಾವಿಯ ಬಳಿಯಿರುವ ಸ್ಮಾರಕಕ್ಕೆ ಇಂದು ಶ್ರದ್ಧಾಂಜಲಿ ಸಮರ್ಪಿಸಲಾಯಿತು.
ದ.ಕ.ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲು, ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಪೋಲಿಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ವಿಮಾನ ದುರಂತದಲ್ಲಿ ಮಡಿದವರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿ ಮೌನ ಪ್ರಾರ್ಥನೆ ಮಾಡಿದರು.
ಅಂದು ನಡೆದ ಮಂಗಳೂರು ವಿಮಾನ ಪತನದಲ್ಲಿ 158 ಮಂದಿ ಮಡಿದಿದ್ದರು. ಅದರಲ್ಲಿ 12 ಮಂದಿಯ ಮೃತದೇಹದ ಗುರುತು ಪತ್ತೆ ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಆ 12 ಮಂದಿಯ ಮೃತದೇಹವನ್ನು ತಣ್ಣಿರುಬಾವಿಯ ನದಿತೀರದಲ್ಲಿ ಅಂತ್ಯಸಂಸ್ಕಾರ ನಡೆಸಲಾಗಿತ್ತು. ಆ ಬಳಿಕ ಅಲ್ಲಿ ಸ್ಮಾರಕವೊಂದನ್ನು ನಿರ್ಮಿಸಲಾಗಿತ್ತು.

