ಕೊಲ್ಯ: ಶ್ರೀ ಶಾರದಾ ಸೇವಾ ಟ್ರಸ್ಟ್ ಕೊಲ್ಯ (ರಿ.)ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿ ಕೊಲ್ಯ, ಸೋಮೇಶ್ವರ ಇದರ 41 ನೇ ವರ್ಷದ ಶ್ರೀ ಶಾರದಾ ಮಹೋತ್ಸವದ ಪ್ರಯುಕ್ತ ಧಾರ್ಮಿಕ ಸಭಾ ಕಾರ್ಯಕ್ರಮ ಮಂಗಳವಾರ ಜರುಗಿತು.
ವೇದಿಕೆಯಲ್ಲಿ ಮಾಜಿ ರಾಜ್ಯಾಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ ನ ಧರ್ಮದರ್ಶಿ ಡಾ॥ ಹರಿಕೃಷ್ಣ ಪುನರೂರು ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು.
ಉಳ್ಳಾಲ ವಲಯ ಬಂಟರ ಸಂಘದ ಅಧ್ಯಕ್ಷರಾದ ಸುರೇಶ್ ಚೌಟ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.ಬೆಸೆಂಟ್ ಮಹಿಳಾ ಕಾಲೇಜಿನ ವಿಶ್ರಾಂತ ಪ್ರಾಧ್ಯಾಪಕರಾದ ಡಾ॥ ಮೀನಾಕ್ಷಿ ರಾಮಚಂದ್ರ ರವರು ಧಾರ್ಮಿಕ ಉಪನ್ಯಾಸ ನೀಡಿದರು.

ಈ ಸಂದರ್ಭದಲ್ಲಿ ಶ್ರೀ ಶಾರದೋತ್ಸವ ಕಟ್ಟಡ ಸಮಿತಿ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ
ಸತೀಶ್ ಕುಂಪಲ ರವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಶ್ರೀ ಸೀತಾರಾಮ ಶೆಟ್ಟಿ ನೆತ್ತಿಲಬಾಳಿಕೆ, ಎಂ ರವೀಂದ್ರ ಶೇಟ್, ಶಿವರಾಮ ಶೆಟ್ಟಿ, ಕಿಶೋರ್ ನಾಯಕ್, ಗೌರವಾಧ್ಯಕ್ಷರಾದ ಸೀತಾರಾಮ ಬಂಗೇರಾ, ಟ್ರಸ್ಟ್ ನ ಅಧ್ಯಕ್ಷರಾದ ಪ್ರಕಾಶ್ ಎಚ್, ಆದರ್ಶ ಮಿತ್ರ ಮಂಡಳಿ ಅಧ್ಯಕ್ಷರಾದ ಹೇಮಂತ್ ಕೊಲ್ಯ, ಮಹಿಳಾ ಮಂಡಳಿ ಅಧ್ಯಕ್ಷರಾದ ಮಂಜುಳಾ ಕೊಲ್ಯ ಹಾಗೂ ವಿವಿಧ ಕ್ಷೇತ್ರದ ಸಾಧಕರಾದ
ಡಾ॥ ಎಂ ಅಣ್ಣಯ್ಯ ಕುಲಾಲ್, ಡಾ॥ ದೇವದಾಸ್ ಕಾಪಿಕಾಡ್, ಡಾ॥ ಅರುಣ್ ಉಳ್ಳಾಲ್ ಹಾಗೂ ಶ್ರೀಮತಿ ಮುತ್ತಕ್ಕ ಶೆಟ್ಟಿ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.
ತೋನ್ಸೆ ಪುಷ್ಕಲ್ ಕುಮಾರ್ ರವರು ಕಾರ್ಯಕ್ರಮ ನಿರೂಪಣೆಗೈದರು.
ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಯಾದ ರಾಜೇಶ್ ಕೆ ಎಸ್ ವಂದನಾರ್ಪಣೆಗೈದರು.
