ಉಡುಪಿ: ಸಾಫ್ಟ್‌ವೇರ್ ಕೆಲಸ ಬಿಟ್ಟು ಸುಮಾರು 18000ಕ್ಕೂ ಅಧಿಕ ಕಿ.ಮೀ. ಪ್ರಯಾಣವನ್ನು ತನ್ನ ಬೈಕಿನಲ್ಲಿಯೇ ಏಕಾಂಗಿಯಾಗಿ ಮುಗಿಸಿದ ಉಡುಪಿಯ ಸಿದ್ವೀನ್ ಶೆಟ್ಟಿ(28), ತುಳುನಾಡಿನ ಧ್ವಜವನ್ನು ವಿಶ್ವದ ಅತಿ ಎತ್ತರದ ಉಮ್ಲಿಂಗ್ ಲಾ ಮತ್ತು ಮೌಂಟ್ ಎವರೆಸ್ಟ್ ಬೇಸ್ ಕ್ಯಾಂಪ್‌ನ ಮೇಲೆ ಹಾರಿಸುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾರೆ. ಉಡುಪಿಯ ಸುರೇಶ್ ಕೃಷ್ಣ ಶೆಟ್ಟಿ ಮತ್ತು ಸುಜಯ ಎಸ್ ಶೆಟ್ಟಿ ದಂಪತಿ ಪುತ್ರ ಸಿದ್ವೀನ್ ಶೆಟ್ಟಿ ಮೇ 6ರಂದು ಉಡುಪಿಯಿಂದ ತನ್ನ ಹಿಮಾಲಯನ್ ಬೈಕ್‌ನಲ್ಲಿ ಪ್ರಯಾಣ ಆರಂಭಿಸಿ ಭಾರತ, ನೇಪಾಳ ಮತ್ತು ಭೂತಾನ್ ದೇಶವನ್ನು ಸುತ್ತಿದ್ದು, ಭಾರತದ 21 ರಾಜ್ಯಗಳು, 5 ಕೇಂದ್ರಾಡಳಿತ ಪ್ರದೇಶಗಳನ್ನು ತಿರುಗಾಡಿ ಜುಲೈ 19ರಂದು ಉಡುಪಿಗೆ ವಾಪಾಸಾಗಿದ್ದಾರೆ. ಇದರೊಂದಿಗೆ ವಿಶ್ವದ ಅತೀ ಎತ್ತರ(19,024ಅಡಿ)ದ ಪ್ರದೇಶವಾದ ಉಮ್ಲಿಂಗ್ ಲಾ, ಮೌಂಟ್ ಎವರೆಸ್ಟ್ ಬೇಸ್ ಕ್ಯಾಂಪ್(17598 ಅಡಿ) ಮತ್ತು ವಿಶ್ವದ ಅತೀ ಎತ್ತರದ ಶಿವ ದೇವಾಲಯ ತುಂಗನಾಥ್ ಅನ್ನು ಕೂಡ ಸ್ಪರ್ಶಿಸಿ ಬಂದಿದ್ದಾರೆ.
©2021 Tulunada Surya | Developed by CuriousLabs