ಉಳ್ಳಾಲ: ಇಂದು ನಾಟೆಕಲ್ ತಾಲೂಕು ಆಫೀಸ್ ಎದುರಗಡೆ ಇರುವ ಖದೀಜಾ ಕಾಂಪ್ಲೆಕ್ಸ್ ವಟಾರದಲ್ಲಿ ಅಸಂಘಟಿತ ಕಾರ್ಮಿಕರಿಗಾಗಿ ವಿಶೇಷ ಸ್ಮಾರ್ಟ್ ಕಾರ್ಡ್ ವಿತರಣೆ ಕಾರ್ಯಕ್ರಮ ಮತ್ತು ಬಾಲ ಪ್ರತಿಭೆ ಫಾತಿಮಾ ರಂಸೀನಾ ಅವರಿಗೆ ಸನ್ಮಾನ ಸಮಾರಂಭ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇಫ್ತಿಕಾರ್ ಫರೀದ್ ವಹಿಸಿದ್ದು, ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ವಿಭಾಗ-1 ರ ಕಾರ್ಮಿಕ ಅಧಿಕಾರಿ ಶ್ರೀ ಕುಮಾರ್ ಅವರು ಉದ್ಘಾಟಿಸಿದರು. ಅವರು ಅಸಂಘಟಿತ ಕಾರ್ಮಿಕರ ಕಾರ್ಡ್ ಹೇಗೆ ಮಾಡುವುದು ಮತ್ತು ಅದರ ಉಪಯೋಗಗಳ ಕುರಿತು ಮಾಹಿತಿ ನೀಡಿದರು.
ಜಿಲ್ಲಾ ಅಸಂಘಟಿತ ಕಾರ್ಮಿಕ ಘಟಕದ ಅಧ್ಯಕ್ಷ ಅಬ್ಬಾಸ್ ಅಲಿ ಅವರು ಅಧಿಕೃತವಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಸಂಘಟಿತ ಕಾರ್ಮಿಕ ಘಟಕ ಮತ್ತು ನೌಕರರ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ನಾಟೆಕಲ್ ಕಾರ್ಯಕ್ರಮದ ಸ್ವಾಗತ ಭಾಷಣ ನೀಡಿದರು.
ಕಾರ್ಯಕ್ರಮದಲ್ಲಿ ಮುಡಾ ಅಧ್ಯಕ್ಷರಾದ ಸದಾಶಿವ ಉಳ್ಳಾಲ್, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರ್, ತಾ.ಪಂ. ಮಾಜಿ ಅಧ್ಯಕ್ಷ ಮೊಹಮ್ಮದ್ ಮೋನು, ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಂಜುಳಾ ನಾಯಕ್, ಉಳ್ಳಾಲ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಚಂದ್ರಿಕಾ ರೈ, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಮಿತಾ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಎನ್.ಎಸ್. ಕರೀಮ್ (ಮಂಜನಾಡಿ), ಪಂಚಾಯತ್ ಅಧ್ಯಕ್ಷೆ ಸರೋಜಿನಿ, ಸದಸ್ಯರಾದ ಅಬ್ಬಾಸ್ ಬಶೀರ್ ಮತ್ತು ಸಿದ್ದಿಕ್ ಸಾಹೇಬ್ ಎಂ.ಎಚ್. ಬಾವು ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಕೊನೆಯಲ್ಲಿ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಕೋಡಿಜಾಲ್ ವಂದನಾರ್ಪಣೆ ಸಲ್ಲಿಸಿದರು ಮತ್ತು ಅವರು ಕಾರ್ಯಕ್ರಮ ನಿರೂಪಣೆಯನ್ನೂ ನೆರವೇರಿಸಿದರು.






