Saturday, December 9, 2023

ಮಂಗಳೂರಿನಲ್ಲಿ ಮೂರು ದಿನ ನೀರು ಪೂರೈಕೆ ವ್ಯತ್ಯಯ

ಮಂಗಳೂರು: ಮಂಗಳೂರು ಮಹಾ ನಗರಪಾಲಿಕೆಯು ನೀರು ಸರಬರಾಜು ವ್ಯವಸ್ಥೆಯ ಕೊಳವೆಯನ್ನು ಬಲಪಡಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಡಿ. 6 ರ ಬುಧವಾರ ಬೆಳಗ್ಗೆ 6 ಗಂಟೆಯಿಂದ ಡಿ. 8 ರ...
More

  Latest Posts

  ಬಂಟ್ವಾಳ: ಗ್ಯಾಸ್ ಸೋರಿಕೆಯಿಂದ ಮನೆಗೆ ಬೆಂಕಿ

  ಬಂಟ್ವಾಳ : ಬಂಟ್ವಾಳ ತಾಲೂಕು ಪುದು ಗ್ರಾಮದ ಕಬೆಲ ನಿವಾಸಿ ಉಮೇಶ್ ಪೂಜಾರಿ ಯವರ ಬಾಡಿಗೆ ಮನೆಯಲ್ಲಿ ಬಾಡಿಗೆದಾರ ಹೊನ್ನಪ್ಪ ಗೌಡ ರವರ ಅಡುಗೆ ಅನಿಲ ಸೋರಿಕೆ ಯಾಗಿ ಗುರುವಾರ...

  ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೈದ್ಯರ ಘಟಕ ವತಿಯಿಂದ ಪೋಲಿಸ್‌ ಅಧೀಕ್ಷಕರಾದ ಡಾ. ಅರುಣ್‌ ರವರ ಭೇಟಿ

  ಇಂದು 08-12-2023 ರಂದು ಮಧ್ಯಾಹ್ನ ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೈದ್ಯರ ಘಟಕವು ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅದ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪುರವರ ನೇತ್ರತ್ವದಲ್ಲಿ ನೂರಾರು ವೈದ್ಯರುಗಳು...

  ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೈದ್ಯರ ಘಟಕ ವತಿಯಿಂದ ಜಿಲ್ಲಾಧಿಕಾರಿ ವಿಧ್ಯಾಕುಮಾರಿಯವರ ಭೇಟಿ

  ಇಂದು 08-12-2023 ರಂದು ಸಂಜೆ ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೈದ್ಯರ ಘಟಕವು ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅದ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪುರವರ ನೇತ್ರತ್ವದಲ್ಲಿ ನೂರಾರು ವೈದ್ಯರುಗಳು...

  ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೈದ್ಯರ ಘಟಕ ವತಿಯಿಂದ ನೂತನ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಐ.ಪಿ ಗಡಾದ್ ರವರ ಭೇಟಿ

  ಇಂದು 08-12-2023 ರಂದು ಬೆಳ್ಳಿಗೆ ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೈದ್ಯರ ಘಟಕವು ತುಳುನಾಡ ರಕ್ಷಣಾ ವೇದಿಕೆಯ ಕೇಂದ್ರೀಯ ಮಂಡಳಿ ಅದ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪುರವರ ನೇತ್ರತ್ವದಲ್ಲಿ ನೂರಾರು...

  ಅಕ್ಟೋಬರ್ ಭಾರತದಲ್ಲಿ 25ಕ್ಕೆ ಭಾಗಶಃ ʻಸೂರ್ಯಗ್ರಹಣʼ: ಇಲ್ಲಿದೆ ಬೆಂಗಳೂರು ಸೇರಿದಂತೆ ಗ್ರಹಗೋಚರ ಸ್ಥಳಗಳ ಬಗ್ಗೆ ಮಾಹಿತಿ

  2022 ಅಕ್ಟೋಬರ್ 25ರಂದು ಭಾಗಶಃ ಸೂರ್ಯಗ್ರಹಣ ಸಂಭವಿಸಲಿದೆ(3 ಕಾರ್ತಿಕ, 1944 ಶಕ ಯುಗ). ಭಾರತದಲ್ಲಿ ಗ್ರಹಣವು ಮಧ್ಯಾಹ್ನದ ನಂತರ ಸೂರ್ಯಾಸ್ತದ ಮೊದಲು ಕಾಣಿಸಿಕೊಳ್ಳಲಿದ್ದು, ಇದು ಹೆಚ್ಚಿನ ಸ್ಥಳಗಳಲ್ಲಿ ಗೋಚರಿಸುತ್ತದೆ. ಆದಾಗ್ಯೂ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಈಶಾನ್ಯ ಭಾರತದ ಕೆಲವು ಭಾಗಗಳಲ್ಲಿ (ಐಜ್ವಾಲ್, ದಿಬ್ರುಗಢ್, ಇಂಫಾಲ್, ಇಟಾನಗರ, ಕೊಹಿಮಾ, ಸಿಬ್ಸಾಗರ್, ಸಿಲ್ಚಾರ್, ತಮೆಲಾಂಗ್ ಇತ್ಯಾದಿ) ಇದನ್ನು ನೋಡಲು ಸಾಧ್ಯವಿಲ್ಲ.

  ದೇಶದ ವಾಯವ್ಯ ಭಾಗಗಳಲ್ಲಿ ಗರಿಷ್ಠ ಗ್ರಹಣದ ಸಮಯದಲ್ಲಿ ಚಂದ್ರನು ಸೂರ್ಯನನ್ನು ಆವರಿಸಿದ ಪ್ರಮಾಣವು ಸರಿಸುಮಾರು ಶೇಕಡ 40 ಮತ್ತು 50ರ ನಡುವೆ ಇರುತ್ತದೆ. ದೇಶದ ಇತರ ಭಾಗಗಳಲ್ಲಿ, ಶೇಕಡಾವಾರು ವ್ಯಾಪ್ತಿಯು ಮೇಲಿನ ಮೌಲ್ಯಗಳಿಗಿಂತ ಕಡಿಮೆ ಇರುತ್ತದೆ.

  ದೆಹಲಿ ಮತ್ತು ಮುಂಬೈನಲ್ಲಿ, ಗ್ರಹಣದ ಪರ್ವ(ಉತ್ತುಂಗ) ಸಮಯದಲ್ಲಿ ಚಂದ್ರನು ಸೂರ್ಯನನ್ನು ಆವರಿಸಿಕೊಳ್ಳುವ ಶೇಕಡಾವಾರು ಪ್ರಮಾಣ ಕ್ರಮವಾಗಿ 44% ಮತ್ತು 24% ಇರುತ್ತದೆ. ಗ್ರಹಣ ಆರಂಭದಿಂದ ಸೂರ್ಯಾಸ್ತಮಾನದವರೆಗೆ ದೆಹಲಿ ಮತ್ತು ಮುಂಬೈನಲ್ಲಿ ಕ್ರಮವಾಗಿ 1 ಗಂಟೆ 13 ನಿಮಿಷ ಮತ್ತು 1 ಗಂಟೆ 19 ನಿಮಿಷ ಕಾಣಿಸಿಕೊಳ್ಳಲಿದೆ. ಚೆನ್ನೈ ಮತ್ತು ಕೋಲ್ಕತ್ತಾದಲ್ಲಿ ಸೂರ್ಯಾಸ್ತದಿಂದ ಸೂರ್ಯಾಸ್ತಮಾನದವರೆಗೆ ಗ್ರಹಣದ ಅವಧಿ ಕ್ರಮವಾಗಿ 31 ನಿಮಿಷ ಮತ್ತು 12 ನಿಮಿಷ ಇರುತ್ತದೆ.

  ಯುರೋಪ್, ಮಧ್ಯಪ್ರಾಚ್ಯ, ಆಫ್ರಿಕಾದ ಈಶಾನ್ಯ ಭಾಗಗಳು, ಪಶ್ಚಿಮ ಏಷ್ಯಾ, ಉತ್ತರ ಅಟ್ಲಾಂಟಿಕ್ ಸಾಗರ ಮತ್ತು ಉತ್ತರ ಹಿಂದೂ ಮಹಾಸಾಗರ ಪ್ರದೇಶದಲ್ಲಿ ಗ್ರಹಣ ಸ್ಪಷ್ಟವಾಗಿ ಗೋಚರಿಸುತ್ತದೆ. ಮುಂದಿನ ಸೂರ್ಯಗ್ರಹಣವು 2027 ಆಗಸ್ಟ್ 2ರಂದು ಭಾರತದಲ್ಲಿ ಗೋಚರಿಸಲಿದೆ. ಇದು ಪರಿಪೂರ್ಣ ಸೂರ್ಯಗ್ರಹಣವಾಗಿರಲಿದೆ. ಆದರೆ, ಇದು ಭಾರತದ ಎಲ್ಲಾ ಭಾಗಗಳಲ್ಲೂ ಭಾಗಶಃ ಸೂರ್ಯಗ್ರಹಣದಂತೆ ಗೋಚರಿಸುತ್ತದೆ.

  ಅಮಾವಾಸ್ಯೆಯ ದಿನದಂದು ಚಂದ್ರನು ಪೃಥ್ವಿ ಮತ್ತು ಸೂರ್ಯನ ನಡುವೆ ಬಂದಾಗ ಮತ್ತು ಈ ಎಲ್ಲಾ 3 ಗ್ರಹಗಳು ಜೋಡಣೆಯಾದಾಗ(ಸಾಲುಗೂಡಿದಾಗ) ಸೂರ್ಯಗ್ರಹಣ ಸಂಭವಿಸುತ್ತದೆ. ಚಂದ್ರ ಮುದ್ರಿಕೆಯು(ಡಿಸ್ಕ್) ಸೌರ ಮುದ್ರಿಕೆಯನ್ನು ಭಾಗಶಃ ಆವರಿಸಿದಾಗ ಭಾಗಶಃ ಸೂರ್ಯಗ್ರಹಣ ಸಂಭವಿಸುತ್ತದೆ.

  ಸೂರ್ಯಗ್ರಹಣವನ್ನು ಕ್ಷಣ ಮಾತ್ರಕ್ಕೂ ಬರಿಗಣ್ಣಿನಿಂದ ನೋಡಬಾರದು. ಚಂದ್ರನು ಸೂರ್ಯನ ಹೆಚ್ಚಿನ ಭಾಗವನ್ನು ಆವರಿಸಿದಾಗಲೂ ಇದು ಕಣ್ಣುಗಳಿಗೆ ಶಾಶ್ವತ ಹಾನಿ ಉಟುಮಾಡುತ್ತದೆ, ಕುರುಡುತನಕ್ಕೆ ಕಾರಣವಾಗುತ್ತದೆ. ಅಲ್ಯೂಮಿನೈಸ್ಡ್ ಮೈಲಾರ್, ಕಪ್ಪು ಪಾಲಿಮರ್, ಶೇಡ್ ಸಂಖ್ಯೆ 14ರ ವೆಲ್ಡಿಂಗ್ ಗ್ಲಾಸ್‌ನಂತಹ ಸಮರ್ಪಕ ಫಿಲ್ಟರ್ ಬಳಸಬೇಕು ಅಥವಾ ದೂರದರ್ಶಕದ ಮೂಲಕ ಬಿಳಿ ಹಲಗೆಯಲ್ಲಿ ಸೂರ್ಯನ ಚಿತ್ರ ಪ್ರಕ್ಷೇಪಿಸುವ ಮೂಲಕ ಸೂರ್ಯಗ್ರಹಣ ವೀಕ್ಷಿಸುವುದು ಸುರಕ್ಷಿತ ವಿಧಾನವಾಗಿದೆ.

  ಭಾಗಶಃ ಸೂರ್ಯಗ್ರಹಣ ಗೋಚರಿಸುವ ಭಾರತದ ಕೆಲವು ಪ್ರಮುಖ ನಗರಗಳು ಮತ್ತು ಪಟ್ಟಣಗಳೆಂದರೆ ನವದೆಹಲಿ, ಬೆಂಗಳೂರು, ಕೋಲ್ಕತ್ತಾ, ಚೆನ್ನೈ, ಉಜ್ಜಯಿನಿ, ವಾರಣಾಸಿ ಮತ್ತು ಮಥುರಾ. ಆಗಿದೆ

  25 ಅಕ್ಟೋಬರ್ 2022 ಭಾರತದ ವಿವಿಧ ನಗರಗಳಿಗೆ ಸೂರ್ಯಗ್ರಹಣದ ಪ್ರಾರಂಭ ಸಮಯ ಮತ್ತು ಅಂತಿಮ ಸಮಯದ ಬಗ್ಗೆ ಇಲ್ಲಿದೆ ಮಾಹಿತಿ

  ನವದೆಹಲಿ: 04:28 PM ರಿಂದ 05:42 PM

  ಜೈಪುರ, ರಾಜಸ್ಥಾನ: 04:31 PM ರಿಂದ 05:50 PM

  ಅಹಮದಾಬಾದ್, ಗುಜರಾತ್: 04:38 PM ರಿಂದ 06:06 PM

  ಪಾಟ್ನಾ, ಬಿಹಾರ: 04:42 PM ರಿಂದ 05:14 PM

  ಮುಂಬೈ, ಮಹಾರಾಷ್ಟ್ರ: 04:49 PM ರಿಂದ 06:09 PM

  ಬೆಂಗಳೂರು, ಕರ್ನಾಟಕ: 05:12 PM ರಿಂದ 05:56 PM

  ಭೋಪಾಲ್, ಮಧ್ಯಪ್ರದೇಶ: 04:42 PM ರಿಂದ 05:47 PM

  ರಾಯ್ಪುರ್, ಛತ್ತೀಸ್ಗಢ: 04:50 PM ರಿಂದ 05:32 PM

  ಹೈದರಾಬಾದ್, ತೆಲಂಗಾಣ: 04:58 PM ರಿಂದ 05:48 PM

  ಚೆನ್ನೈ, ತಮಿಳುನಾಡು: 05:13 PM ರಿಂದ 05:45 PM

  ಕೋಲ್ಕತ್ತಾ, ಪಶ್ಚಿಮ ಬಂಗಾಳ: 04:51 PM ರಿಂದ 05:04 PM

  ಲಕ್ನೋ, ಉತ್ತರ ಪ್ರದೇಶ: 04:36 PM ರಿಂದ 05:29 PM

  ಚಂಡೀಗಢ: 04:23 PM ರಿಂದ 05:41 PM

  ಭುವನೇಶ್ವರ್, ಒಡಿಶಾ: 04:56 PM ರಿಂದ 05:16 PM

  ಶಿಮ್ಲಾ, ಹಿಮಾಚಲ ಪ್ರದೇಶ: 04:23 PM ರಿಂದ 05:39 PM

  ಡೆಹ್ರಾಡೂನ್, ಉತ್ತರಾಖಂಡ: ಸಂಜೆ 04:25 ರಿಂದ 05:37 ರವರೆಗೆ

  ರಾಂಚಿ, ಜಾರ್ಖಂಡ್: 04:48 PM ರಿಂದ 05:15 PM

  ಪುಣೆ, ಮಹಾರಾಷ್ಟ್ರ: 04:51 PM ರಿಂದ 06:06 PM

  Latest Posts

  ಬಂಟ್ವಾಳ: ಗ್ಯಾಸ್ ಸೋರಿಕೆಯಿಂದ ಮನೆಗೆ ಬೆಂಕಿ

  ಬಂಟ್ವಾಳ : ಬಂಟ್ವಾಳ ತಾಲೂಕು ಪುದು ಗ್ರಾಮದ ಕಬೆಲ ನಿವಾಸಿ ಉಮೇಶ್ ಪೂಜಾರಿ ಯವರ ಬಾಡಿಗೆ ಮನೆಯಲ್ಲಿ ಬಾಡಿಗೆದಾರ ಹೊನ್ನಪ್ಪ ಗೌಡ ರವರ ಅಡುಗೆ ಅನಿಲ ಸೋರಿಕೆ ಯಾಗಿ ಗುರುವಾರ...

  ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೈದ್ಯರ ಘಟಕ ವತಿಯಿಂದ ಪೋಲಿಸ್‌ ಅಧೀಕ್ಷಕರಾದ ಡಾ. ಅರುಣ್‌ ರವರ ಭೇಟಿ

  ಇಂದು 08-12-2023 ರಂದು ಮಧ್ಯಾಹ್ನ ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೈದ್ಯರ ಘಟಕವು ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅದ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪುರವರ ನೇತ್ರತ್ವದಲ್ಲಿ ನೂರಾರು ವೈದ್ಯರುಗಳು...

  ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೈದ್ಯರ ಘಟಕ ವತಿಯಿಂದ ಜಿಲ್ಲಾಧಿಕಾರಿ ವಿಧ್ಯಾಕುಮಾರಿಯವರ ಭೇಟಿ

  ಇಂದು 08-12-2023 ರಂದು ಸಂಜೆ ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೈದ್ಯರ ಘಟಕವು ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅದ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪುರವರ ನೇತ್ರತ್ವದಲ್ಲಿ ನೂರಾರು ವೈದ್ಯರುಗಳು...

  ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೈದ್ಯರ ಘಟಕ ವತಿಯಿಂದ ನೂತನ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಐ.ಪಿ ಗಡಾದ್ ರವರ ಭೇಟಿ

  ಇಂದು 08-12-2023 ರಂದು ಬೆಳ್ಳಿಗೆ ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೈದ್ಯರ ಘಟಕವು ತುಳುನಾಡ ರಕ್ಷಣಾ ವೇದಿಕೆಯ ಕೇಂದ್ರೀಯ ಮಂಡಳಿ ಅದ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪುರವರ ನೇತ್ರತ್ವದಲ್ಲಿ ನೂರಾರು...

  Don't Miss

  ಹಾಗಲಕಾಯಿ ತಿನ್ನುವುದರಿಂದ ಸಿಗಲಿವೆ ಈ ಆರೋಗ್ಯ ಲಾಭಗಳು.!

  ಹಾಗಲಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಹಾಗಲಕಾಯಿಯಲ್ಲಿ ಸೋಡಿಯಂ, ಪೊಟ್ಯಾಸಿಯಮ್, ಕಬ್ಬಿಣ, ಫೈಬರ್ ಮತ್ತು ವಿಟಮಿನ್ ಸಿ ಸಮೃದ್ಧವಾಗಿದೆ. ಹಾಗಲಕಾಯಿ ಅನೇಕ ರೋಗಗಳಿಗೆ ಔಷಧಿಯಾಗಿ ಕಾರ್ಯನಿರ್ವಹಿಸುತ್ತದೆ (ಹಾಗಲಕಾಯಿಯ...

  ಉಡುಪಿ: ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ವಸ್ತುಗಳ ಕಳವು

  ಉಡುಪಿ: ಮನೆಯೊಳಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ವಸ್ತುಗಳನ್ನು ಕಳವು ಮಾಡಿದ್ದಾರೆ. ಸಂತೆಕಟ್ಟೆಯ ಸೋಲಾಂಗೆ ಸ್ಮಿತಾ ಲೂಯಿಸ್‌ ಅವರು ಮುಂಬಯಿಗೆ ತೆರಳಿದ್ದು, ನ. 29 ರಂದು...

  ಮಂಗಳೂರು: ಶಿಶುವನ್ನು ಹತ್ಯೆಗೈದು ಬಾಣಂತಿ ನೇಣಿಗೆ ಶರಣು..!

  ಮಂಗಳೂರು: ಬಾಣಂತಿಯೊಬ್ಬಳು ನಾಲ್ಕುವರೆ ತಿಂಗಳ ಗಂಡು ಶಿಶುವನ್ನು ಹತ್ಯೆ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಮಂಗಳೂರಿನ ಗುಜ್ಜರಕೆರೆ ಲೇಕ್ ವ್ಯೂ ಅಪಾರ್ಟ್ಮೆಂಟ್ ಫ್ಲ್ಯಾಟ್ ನಲ್ಲಿ ನಡೆದಿದೆ. ಫಾತಿಮಾ...

  ಬೆಂಗಳೂರು: ಮೇಲಾಧಿಕಾರಿಗಳ ಕಿರುಕುಳ-ವೈದ್ಯರು ಆತ್ಮಹತ್ಯೆ..!

  ಬೆಂಗಳೂರು: ಆರೋಗ್ಯ ಇಲಾಖೆ ಅಧಿಕಾರಿಯಾಗಿದ್ದ ವೈದ್ಯರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಬೆಂಗಳೂರು ನಗರದ ಮಹಾಲಕ್ಷ್ಮೀ ಲೇಔಟ್ ಠಾಣಾ ವ್ಯಾಪ್ತಿಯ ಮನೆಯಲ್ಲಿ ಡಾಕ್ಟರ್ ಮೃತದೇಹ ಪತ್ತೆಯಾಗಿದೆ. ಮೃತ...

  ಬೆಳ್ತಂಗಡಿ: ಶಾಲಾ ಬಾಲಕನಿಗೆ ಎಸ್‌ಡಿಎಂಸಿ ಅಧ್ಯಕ್ಷನಿಂದ ಹಲ್ಲೆ..!- ಪ್ರಕರಣ ದಾಖಲು

  ಬೆಳ್ತಂಗಡಿ: ಎಸ್‌ಡಿಎಂಸಿ ಅಧ್ಯಕ್ಷರಿಂದ ಶಾಲಾ ವಿದ್ಯಾರ್ಥಿಯ ಮೇಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿದ ಘಟನೆ ಬಳ್ಳಮಂಜ ಮಚ್ಚಿನ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿ ಎಸ್‌ಡಿಎಂಸಿ ಅಧ್ಯಕ್ಷ...