Monday, May 23, 2022

ಮಂಗಳೂರು:ಕಬಡ್ಡಿಯಲ್ಲಿ ಏಕಲವ್ಯ ಪ್ರಶಸ್ತಿ ಪಡೆದ ಉದಯ ಚೌಟ ಇನ್ನಿಲ್ಲ

ಬಂಟ್ವಾಳ: ಅಂತಾರಾಷ್ಟ್ರೀಯ ಮಟ್ಟದ ಕಬಡ್ಡಿ ಆಟಗಾರ, ಬ್ಯಾಂಕ್ ಉದ್ಯೋಗಿ ಮಾಣಿ ಬದಿಗುಡ್ಡೆ ನಿವಾಸಿ ಉದಯ ಚೌಟ ಅವರು ಮೇ 21ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ...
More

  Latest Posts

  ಭಾರಿ ವೈರಲ್‌ ಆಗುತ್ತಿದೆ ಈ ಬಾಳೆಹಣ್ಣಿನ ಮೇಲಿರುವ ಬರಹ ; ಏನೆಂದು ಬರೆಯಲಾಗಿದೆ ಗೊತ್ತಾ?

  ತುಮಕೂರು: ಈ ಹಿಂದೆ ಹಲವು ಬಾರಿ ರಥೋತ್ಸವದ ಸಂದರ್ಭದಲ್ಲಿ, ಕೊರೋನಾ ರೋಗ ಓಡಿಸಪ್ಪ.. ಪೊಲೀಸರಿಗೆ ಔರಾದ್ಕಾರ್ ವರದಿ ಜಾರಿಗೊಳಿಸಿ, ಸಂಬಳ ಜಾಸ್ತಿ ಮಾಡಪ್ಪ ಸೇರಿದಂತೆ ವಿವಿಧ ಬಾಳೆಹಣ್ಣಿನ ಹರಕೆಯ ಪೋಟೋಗಳು...

  ಉಡುಪಿ : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಅಧಿಕಾರ ಸ್ವೀಕಾರ

  ಉಡುಪಿ : ಜಿಲ್ಲೆಯ ನೂತನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಇಂದು ಅಧಿಕಾರ ಸ್ವೀಕರಿಸಿದರು. ಅವರು ತುಮಕೂರು ಜಿಲ್ಲೆಯ ಕುಟುಂಬ ನ್ಯಾಯಾಲಯದ ಪ್ರಧಾನ...

  ಭಾರತೀಯ ಆಶಾ ಕಾರ್ಯಕರ್ತೆಯರಿಗೆ ಜಾಗತಿಕ ಆರೋಗ್ಯ ನಾಯಕರ ಪ್ರಶಸ್ತಿ

  ವಿಶ್ವಸಂಸ್ಥೆ- ಮಹಾಮಾರಿ ಕೋವಿಡ್-19 ಸೋಂಕನ್ನು ನಿಯಂತ್ರಿಸಲು ಅವಿರತ ಶ್ರಮಿಸಿ ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿಯೊಬ್ಬರಿಗೂ ಆರೋಗ್ಯ ಸೌಲಭ್ಯ ತಲುಪುವಂತೆ ಮಾಡಿದ ಭಾರತದ ಒಂದು ಮಿಲಿಯನ್ (10 ಲಕ್ಷ) ಆಶಾ ಕಾರ್ಯಕರ್ತೆಯರನ್ನು ವಿಶ್ವ...

  ಉಡುಪಿ: ಆಸ್ತಿಗಾಗಿ ಗಂಡನ ಕೊಲೆಗೆ ಯತ್ನಿಸಿದ ಹೆಂಡತಿ : ಕುಕೃತ್ಯಕ್ಕೆ ಮಗ, ಗೆಳೆಯನ ಸಾಥ್!

  ಉಡುಪಿ: ಆಸ್ತಿಗಾಗಿ ಮಹಿಳೆಯೊಬ್ಬಳು ಮಗ ಹಾಗೂ ಗೆಳೆಯನೊಂದಿಗೆ ಸೇರಿಕೊಂಡು ಪತಿಯ ಹತ್ಯೆ ನಡೆಸಲು ಯತ್ನಿಸಿರುವ ಘಟನೆ ಉಡುಪಿ ಜಿಲ್ಲೆ ಹೆಬ್ರಿಯ ಮುದ್ರಾಡಿ ಗ್ರಾಮದ ಸುಬ್ಬಣ್ಣ ಕಟ್ಟೆ ಎಂಬಲ್ಲಿ ನಡೆದಿದೆ. ಜಯಾನಂದ...

  ಸುಳ್ಳು ಆರೋಪ, ಅಪಪ್ರಚಾರ ಸೋಮನಾಥ್ ನಾಯಕ್ ಗೆ ಜೈಲು ಶಿಕ್ಷೆ ಖಾಯಂಗೊಳಿಸಿ ಹೈಕೋರ್ಟ್ ಆದೇಶ

  ಬೆಳ್ತಂಗಡಿ: ಬೆಳ್ತಂಗಡಿಯ ಸಿವಿಲ್ ನ್ಯಾಯಾಲಯದ ಪ್ರತಿಬಂಧಕಾಜ್ಞೆಯನ್ನು ಉಲ್ಲಂಘಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗು ಅಲ್ಲಿಯ ಧರ್ಮಾಧಿಕಾರಿಗಳ ವಿರುದ್ಧ ಅಪಪ್ರಚಾರ ಮಾಡುತ್ತಿದ್ದ ಗುರುವಾಯನಕೆರೆಯ ನಾಗರಿಕ ಸೇವಾ ಟ್ರಸ್ಟ್ ನ ಅಧ್ಯಕ್ಷ ಕೆ.ಸೋಮನಾಥ ನಾಯಕ್ ಬೆಳ್ತಂಗಡಿ ನ್ಯಾಯಾಲಯ ವಿಧಿಸಿದ ಜೈಲು ಶಿಕ್ಷೆ, ಆಸ್ತಿ ಮುಟ್ಟುಗೋಲು ಹಾಗೂ ದಂಡನೆಯನ್ನು ರದ್ದುಗೊಳಿಸುವಂತೆ ಸಲ್ಲಿಸಿದ್ದ ರಿಟ್ ಅರ್ಜಿ ಕರ್ನಾಟಕ ಉಚ್ಚ ನ್ಯಾಯಾಲಯಕ್ಕೆ ವಜಗೊಂಡಿದೆ. ಎರಡೂ ಕಡೆಯ ವಾದ ಆಲಿಸಿದ ಉಚ್ಚ ನ್ಯಾಯಾಲಯವು ಮೇ. 5 ರಂದು ತನ್ನ 128 ಪುಟಗಳ ಸುಧೀರ್ಘ ತೀರ್ಪು ಪ್ರಕಟಿಸಿ ಬೆಳ್ತಂಗಡಿ ಸಿವಿಲ್ ನ್ಯಾಯಾಲಯಗಳ ಆದೇಶವನ್ನು ಎತ್ತಿ ಹಿಡಿದು ಸೋಮನಾಥ ನಾಯಕ್‌ರ ರಿಟ್ ಅರ್ಜಿಯನ್ನು

  ವಜಾಗೊಳಿಸಿದೆ. ತನ್ನ ತೀರ್ಪಿನಲ್ಲಿ ಉಚ್ಚ ನ್ಯಾಯಾಲಯ ಹೇಳಿದ್ದೇನು..?
  1.ಸೋಮನಾಥ ನಾಯಕ್‌ರು ಹೆಗ್ಗಡೆಯವರ ವಿರುದ್ಧ ನ್ಯಾಯಾಲಯದ ಪ್ರತಿಬಂಧಕಾಜ್ಞೆಯನ್ನು ಸಹ ಉಲ್ಲಂಘಿಸಿ ಸುಳ್ಳು ಆರೋಪ ಮಾಡಿರುವುದು ಸಾಬೀತಾಗಿದೆ.
  2.ಹೆಗ್ಗಡೆಯವರು ಮಿತಿಗಿಂತ ಜಾಸ್ತಿ ಸ್ಥಿರಾಸ್ತಿ ಹೊಂದಿರುತ್ತಾರೆ ಎಂಬುವುದಾಗಿ ಮಾಡುತ್ತಿರುವ ಆರೋಪಗಳು ಸುಳ್ಳು.
  3.ಈ ಪ್ರಕರಣದ ದಾಖಲೆಗಳನ್ನು ಪರಾಮರ್ಶಿಸುವಾಗ ಹೆಗ್ಗಡೆಯವರು ಮತ್ತವರ ಕುಟುಂಬದವರು ತಮ್ಮ ಬಹಳಷ್ಟು ಆಸ್ತಿಗಳನ್ನು ಸಾಗುವಳಿದಾರರಿಗೆ ಬಿಟ್ಟುಕೊಟ್ಟಿರುವುದು ಕಂಡುಬರುತ್ತದೆ.
  4.ರಾಜ್ಯದೆಲ್ಲೆಡೆ ತುಳಿತಕ್ಕೊಳಗಾದವರ ಏಳಿಗೆಗಾಗಿ, ಮಹಿಳಾ ಸಬಲೀಕರಣಕ್ಕಾಗಿ, ಇನ್ನೂ ಹಲವಾರು ಸಮಾಜಮುಖಿ ಕೈಂಕರ್ಯಗಳನ್ನು ಹೆಗ್ಗಡೆಯವರು ಮಾಡುತ್ತಿರುವುದು ಕಂಡುಬರುತ್ತದೆ.
  5.ಹೆಗ್ಗಡೆಯವರಿಗೆ ಅವರ ಸಮಾಜಮುಖಿ ಸೇವೆಗಳನ್ನು ಪರಿಗಣಿಸಿ ನಮ್ಮ ದೇಶದ ಸರಕಾರಗಳು ಪದ್ಮವಿಭೂಷಣ ಸಹಿತ ಹಲವಾರು ಉನ್ನತ ಪ್ರಶಸ್ತಿಗಳನ್ನು ನೀಡಿ ಗೌರವಿಸಿರುವುದು ಕಂಡುಬರುತ್ತದೆ.
  6.ನಮ್ಮ ದೇಶದ ಜನತೆಯು ಹೆಗ್ಗಡೆಯವರನ್ನು ಧರ್ಮಾಧಿಕಾರಿಯೆಂದು ಗೌರವ ಭಾವನೆಯಿಂದ ಕಾಣುತ್ತಿದ್ದಾರೆ.
  7.ಹೆಗ್ಗಡೆಯವರ ಸಚ್ಚಾರಿತ್ರ್ಯಕ್ಕೆ ಹಾಗೂ ಕ್ಷೇತ್ರದ ಘನತೆಗೆ ದಕ್ಕೆ ತರುವ ದುರುದ್ದೇಶದಿಂದ ಸೋಮನಾಥ ನಾಯಕ್‌ರವರು ಎಗ್ಗಿಲ್ಲದೆ ನ್ಯಾಯಾಲಯದ ಪ್ರತಿಬಂಧಕಾಜ್ಞೆಯನ್ನೂ ಸಹ ಉಲ್ಲಂಘಿಸಿ ಸುಳ್ಳು ಆರೋಪಗಳನ್ನು ಸಾರ್ವಜನಿಕ ಮಾಧ್ಯಮ ಹಾಗು ಜಾಲತಾಣಗಳಲ್ಲಿ ಮಾಡುತ್ತಿರುವುದು ಕ್ಷಮಾರ್ಹವಲ್ಲ.
  8.ಹೆಗ್ಗಡೆಯವರು ಹಾಗೂ ಅವರ ಕುಟುಂಬದವರ ವಿರುದ್ಧ ಆರೋಪ ಮಾಡುವುದರ ಹೊರತು ಸಮಾಜಕ್ಕೆ ತನ್ನ ಕೊಡುಗೆ ಏನು ಎಂಬುವುದನ್ನು ನ್ಯಾಯಾಲಯಕ್ಕೆ ತಿಳಿಸುವಲ್ಲಿ ಸಹ ಸೋಮನಾಥ ನಾಯಕ್ ವಿಫಲವಾಗಿದ್ದಾರೆ.
  9.ನ್ಯಾಯಾಲಯದ ಮುಂದಿರುವ ದಾಖಲೆಗಳಲ್ಲಿ ಕ್ಷೇತ್ರ ಹಾಗೂ ಶ್ರೀ ಹೆಗ್ಗಡೆಯವರಿಂದ ನಡೆಯುತ್ತಿರುವ ಸಮಾಜಮುಖಿ ಕಾರ್ಯಗಳು ಎದ್ದು ಕಾಣುತ್ತಿವೆ.
  10.ನ್ಯಾಯಾಲಯದ ಮುಂದೆ ಸೋಮನಾಥ ನಾಯಕ್ ಕೊನೆಯ ಕ್ಷಣದಲ್ಲಿ, ತಾನು ಎಸಗಿರುವ ಅಪರಾಧವು ಸಾಬೀತಾಗುವ ಎಲ್ಲಾ ಲಕ್ಷಣಗಳು ಕಂಡುಬಂದಾಗ ತನ್ನ ಕೃತ್ಯಗಳ ಬಗ್ಗೆ ಕ್ಷಮೆಯಾಚಿಸುತ್ತೇನೆ ಎಂದು ಹೇಳಿರುವುದು ಆತನ ಧಾಷ್ಟತನವಲ್ಲದೆ ನ್ಯಾಯಾಲಯದ ಘನತೆಯ ಬಗ್ಗೆ ಆತನಿಗಿರುವ ಕೇವಲ ಭಾವವನ್ನು ಬಿಂಬಿಸುತ್ತದೆ.
  11.ಈ ಪ್ರಕರಣದಲ್ಲಿ ನ್ಯಾಯಾಲಯದ ಮೇಲೆ ಸಾರ್ವಜನಿಕರು ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳುವುದಕ್ಕಾಗಿ ಮತ್ತು ನ್ಯಾಯಾಲಯದ ಘನತೆಯನ್ನು ರಕ್ಷಿಸುವ ಸಲುವಾಗಿ ಹಾಗೂ ಸೋಮನಾಥ ನಾಯಕ್‌ರನ್ನು ಶಿಕ್ಷಿಸದಿದ್ದಲ್ಲಿ ಸಮಾಜಕ್ಕೆ ತಪ್ಪು ಸಂದೇಶ ನೀಡಿದಂತಾಗುತ್ತದೆ ಎಂದು ಕಾನೂನಿನ ಉದ್ದೇಶ ಹಾಗು ಸಾಮರ್ಥ್ಯವನ್ನು ಸಾರುತ್ತಾ ಆದೇಶವನ್ನು ನೀಡಿದೆ.
  12.ಪ್ರಕರಣದ ಎಲ್ಲ ಸಾಕ್ಷ್ಯಗಳನ್ನು ಹಾಗೂ ವಾಸ್ತವಾಂಶಗಳನ್ನು ತನಿಖಾ ಹಾಗು ಅಪಾರ ನ್ಯಾಯಾಲಯ ಕೂಲಂಕುಷವಾಗಿ ವಿರ್ಮಶಿಸಿದ ನಂತರ ಸದ್ರಿ ನ್ಯಾಯಾಲಯಗಳು ಸೋಮನಾಥ್ ನಾಯಕ್ ಎಸಗಿರುವ ಅಪರಾಧದ ತೀವ್ರತೆಯನ್ನು ಮನಗಂಡು ನೀಡಿರುವ ಶಿಕ್ಷೆ ನ್ಯಾಯಾಲಯದ ಘನತೆ ಹಾಗೂ ಹೆಗ್ಗಡೆಯವರ ಸಚ್ಚಾರಿತ್ಯಗಳ ರಕ್ಷಣೆ ನಿಟ್ಟಿನಲ್ಲಿ ಮಾಡಿರುವ ಕಾನೂನುರಿತ್ಯಾ ಪ್ರಬುದ್ಧವಾಗಿರುವ ಆದೇಶಗಳಾಗಿರುವುದಾಗಿ ಉದ್ಘೋಷಿಸಿದೆ.

  ಬೆಳ್ತಂಗಡಿ ನ್ಯಾಯಾಲಯ ಈಗಾಗಲೇ ಸೋಮನಾಥ ನಾಯಕ್‌ರ ವಿರುದ್ಧ ಬಂಧನದ ವಾರೆಂಟ್ ಹೊರಡಿಸಿದೆ. ನ್ಯಾಯಾಲಯದಲ್ಲಿ ನ್ಯಾಯವಾದಿಗಳಾದ ಕೆ. ಚಂದ್ರನಾಥ ಆರಿಗ ಬೆಂಗಳೂರು ಹಾಗೂ ರತ್ನವರ್ಮ ಬುಣ್ಣು ಬೆಳ್ತಂಗಡಿ ಅವರು ಕ್ಷೇತ್ರದ ಪರವಾಗಿ ವಾದಿಸಿದ್ದರು.

  Latest Posts

  ಭಾರಿ ವೈರಲ್‌ ಆಗುತ್ತಿದೆ ಈ ಬಾಳೆಹಣ್ಣಿನ ಮೇಲಿರುವ ಬರಹ ; ಏನೆಂದು ಬರೆಯಲಾಗಿದೆ ಗೊತ್ತಾ?

  ತುಮಕೂರು: ಈ ಹಿಂದೆ ಹಲವು ಬಾರಿ ರಥೋತ್ಸವದ ಸಂದರ್ಭದಲ್ಲಿ, ಕೊರೋನಾ ರೋಗ ಓಡಿಸಪ್ಪ.. ಪೊಲೀಸರಿಗೆ ಔರಾದ್ಕಾರ್ ವರದಿ ಜಾರಿಗೊಳಿಸಿ, ಸಂಬಳ ಜಾಸ್ತಿ ಮಾಡಪ್ಪ ಸೇರಿದಂತೆ ವಿವಿಧ ಬಾಳೆಹಣ್ಣಿನ ಹರಕೆಯ ಪೋಟೋಗಳು...

  ಉಡುಪಿ : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಅಧಿಕಾರ ಸ್ವೀಕಾರ

  ಉಡುಪಿ : ಜಿಲ್ಲೆಯ ನೂತನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಇಂದು ಅಧಿಕಾರ ಸ್ವೀಕರಿಸಿದರು. ಅವರು ತುಮಕೂರು ಜಿಲ್ಲೆಯ ಕುಟುಂಬ ನ್ಯಾಯಾಲಯದ ಪ್ರಧಾನ...

  ಭಾರತೀಯ ಆಶಾ ಕಾರ್ಯಕರ್ತೆಯರಿಗೆ ಜಾಗತಿಕ ಆರೋಗ್ಯ ನಾಯಕರ ಪ್ರಶಸ್ತಿ

  ವಿಶ್ವಸಂಸ್ಥೆ- ಮಹಾಮಾರಿ ಕೋವಿಡ್-19 ಸೋಂಕನ್ನು ನಿಯಂತ್ರಿಸಲು ಅವಿರತ ಶ್ರಮಿಸಿ ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿಯೊಬ್ಬರಿಗೂ ಆರೋಗ್ಯ ಸೌಲಭ್ಯ ತಲುಪುವಂತೆ ಮಾಡಿದ ಭಾರತದ ಒಂದು ಮಿಲಿಯನ್ (10 ಲಕ್ಷ) ಆಶಾ ಕಾರ್ಯಕರ್ತೆಯರನ್ನು ವಿಶ್ವ...

  ಉಡುಪಿ: ಆಸ್ತಿಗಾಗಿ ಗಂಡನ ಕೊಲೆಗೆ ಯತ್ನಿಸಿದ ಹೆಂಡತಿ : ಕುಕೃತ್ಯಕ್ಕೆ ಮಗ, ಗೆಳೆಯನ ಸಾಥ್!

  ಉಡುಪಿ: ಆಸ್ತಿಗಾಗಿ ಮಹಿಳೆಯೊಬ್ಬಳು ಮಗ ಹಾಗೂ ಗೆಳೆಯನೊಂದಿಗೆ ಸೇರಿಕೊಂಡು ಪತಿಯ ಹತ್ಯೆ ನಡೆಸಲು ಯತ್ನಿಸಿರುವ ಘಟನೆ ಉಡುಪಿ ಜಿಲ್ಲೆ ಹೆಬ್ರಿಯ ಮುದ್ರಾಡಿ ಗ್ರಾಮದ ಸುಬ್ಬಣ್ಣ ಕಟ್ಟೆ ಎಂಬಲ್ಲಿ ನಡೆದಿದೆ. ಜಯಾನಂದ...

  Don't Miss

  ಮಂಗಳೂರು: ಬಿ. ಕೆ. ಹರಿಪ್ರಸಾದ್ ಮತ್ತು ಯು. ಟಿ. ಖಾದರ್‌ರಿಗೆ ಅಭಿನಂದನಾ ಸಮಾರಂಭ

  ಮಂಗಳೂರು: ಮಂಗಳೂರಿನ ಪುರಭವನದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಬಿ. ಕೆ. ಹರಿಪ್ರಸಾದ್ ಮತ್ತು ಕರ್ನಾಟಕ ರಾಜ್ಯ ವಿಧಾನ ಸಭೆಯ ವಿಪಕ್ಷ ಉಪನಾಯಕರಾಗಿ ಆಯ್ಕೆಯಾಗಿರುವ ಮಾಜೀ ಮಂತ್ರಿ...

  ಮಲ್ಪೆ: ಚಲಿಸುತ್ತಿದ್ದ ಸ್ಕೂಟರ್ ನಲ್ಲೇ ಹೃದಯಾಘಾತ – ಸಾವು

  ಮಲ್ಪೆ: ಮೀನುಗಾರಿಕೆ ಮುಗಿಸಿಕೊಂಡು ಸ್ಕೂಟರ್ ನಲ್ಲಿ ಹಿಂಬದಿ ಸವಾರನಾಗಿ ಮನೆಗೆ ತೆರಳುತ್ತಿದ್ದ ಸಂದರ್ಭ ಹೃದಯಾಘಾತದಿಂದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮಲ್ಪೆ ಕಂಬಳತೋಟ ಎಂಬಲ್ಲಿ ಮೇ.18ರಂದು ನಡೆದಿದೆ.

  ಉಡುಪಿ ಜಿಲ್ಲೆಯಲ್ಲಿ ಡೆಂಗ್ಯೂ ಹೆಚ್ಚಳ – ಜಡ್ಕಲ್, ಮುದೂರಲ್ಲಿ ಶಾಲೆಗೆ 10 ದಿನ ರಜೆ

  ಉಡುಪಿ: 136 ಡೆಂಗ್ಯೂ ಪ್ರಕರಣ ಜಿಲ್ಲೆಯಲ್ಲಿ ದಾಖಲಾಗಿದ್ದು, ಬೈಂದೂರು ತಾಲೂಕು ವ್ಯಾಪ್ತಿಯ ಜಡ್ಕಲ್ ಮುದೂರು ಗ್ರಾಮದಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲೆಗೆ 10 ದಿನ ರಜೆ ಘೋಷಿಸಲಾಗಿದೆ ಎಂದು ತಿಳಿದು ಬಂದಿದೆ. ಜಡ್ಕಲ್...

  ಪೋಷಕರಿಂದ ಪ್ರತ್ಯೇಕವಾಗಿ ವಾಸಿಸಲು ಪತಿಗೆ ಒತ್ತಾಯಿಸುವುದು ಕ್ರೌರ್ಯ: ಛತ್ತೀಸ್‌ಗಢ ಹೈಕೋರ್ಟ್

  ಪೋಷಕರಿಂದ ಪ್ರತ್ಯೇಕವಾಗಿ ವಾಸಿಸಲು ಪತಿಗೆ ಒತ್ತಾಯಿಸಿದರೆ ಸುಳ್ಳು ವರದಕ್ಷಿಣೆ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಕೆ ಹಾಕಿದರೆ ಅದು ಮಾನಸಿಕ ಕ್ರೌರ್ಯಕ್ಕೆ ಸಮ ಎಂದು ಮಹತ್ವದ ತೀರ್ಪೊಂದರಲ್ಲಿ ಛತ್ತೀಸ್‌ಗಢ ಹೈಕೋರ್ಟ್ ತಿಳಿಸಿದೆ 

  11 ಕೋಟಿ ರೂ. ಸಂಪತ್ತು ದಾನ: 11 ವರ್ಷದ ಪುತ್ರ, ಪತ್ನಿ ಜೊತೆ ಸನ್ಯಾಸತ್ವ ಸ್ವೀಕರಿಸಿದ ‘ಕುಬೇರ’!

  ಜೈಪುರ: ಬಾಲಾಘಾಟ್‌ನ ಬುಲಿಯನ್ ವ್ಯಾಪಾರಿ ರಾಕೇಶ್ ಸುರಾನಾ, ಸುಮಾರು 11 ಕೋಟಿ ಮೌಲ್ಯದ ಆಸ್ತಿಯನ್ನು ಬಿಟ್ಟು, ಅವರ ಪತ್ನಿ ಮತ್ತು ಮಗನೊಂದಿಗೆ ಮೇ 22 ರಂದು ಜೈಪುರದಲ್ಲಿ ವಿಧಿವತ್ತಾಗಿ ದೀಕ್ಷೆ ಪಡೆಯಲಿದ್ದಾರೆ....