ಬೆಂಗಳೂರು : ವಿದ್ಯುತ್ ದರ ಏರಿಕೆ ಬೆನ್ನಲ್ಲೇ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಹಾಲಿನ ದರ ಏರಿಕೆಗೆ ಬಮೂಲ್ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ ಎಂದು ಹೇಳಲಾಗುತ್ತಿದೆ.
ಹಾಲಿನ ಪ್ರೋತ್ಸಾಹ ಧನ ಕಡಿತಗೊಳಿಸಲು ಮುಂದಾಗಿದ್ದ ಹಾಲು ಒಕ್ಕೂಟಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದ ಮೇರೆಗೆ ಹಾಲು ಒಕ್ಕೂಟ ತನ್ನ ನಿರ್ಧಾರ ಬದಲಾಯಿಸಿ ಹಾಲಿನ ಪ್ರೋತ್ಸಾಹ ಧನ ಮುಂದುವರೆಸಲು ಮುಂದಾಗಿದೆ.
ಆದರೆ ಈಗ ಹಾಲಿನ ದರ ಪರಿಷ್ಕರಿಸುವಂತೆ ಬಮೂಲ್ ಪಟ್ಟು ಹಿಡಿದಿದ್ದು, ಲೀಟರ್ ಹಾಲಿನ ಮಾರಾಟದ ದರದ ಮೇಲೆ 5ರೂ. ಏರಿಕೆಗೆ ಪ್ರಸ್ತಾವನೆ ಸಲ್ಲಿಸುವುದಾಗಿ ಹೇಳಿದೆ ಎನ್ನಲಾಗಿದೆ.
ನಂದಿನಿ ಹಾಲಿನ ದರ ಪರಿಷ್ಕರಿಸುವಂತೆ ಒಕ್ಕೂಟಗಳು ಪಟ್ಟು ಹಿಡಿದಿವೆ. ಲೀಟರ್ ಹಾಲಿನ ದರದ ಮೇಲೆ 5 ರೂಪಾಯಿ ಏರಿಕೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಪ್ರತಿದಿನ 15 ರಿಂದ 16 ಲಕ್ಷ ಪ್ರತಿನಿತ್ಯ ನಷ್ಟವಾಗುತ್ತಿದೆ. ಪ್ರತಿ ಲೀಟರ್ ಹಾಲಿಗೆ ಮಾರಾಟ ದರದ ಮೇಲೆ 5 ರೂ. ಹೆಚ್ಚಳ ಮಾಡಲು ಅವಕಾಶ ಕೊಡಬೇಕು ಎಂದು ಹಾಲು ಒಕ್ಕೂಟಗಳು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.