Sunday, September 15, 2024
spot_img
More

    Latest Posts

    ಪ್ರಯಾಣಿಕರು, ಫುಟ್ಬೋರ್ಡ್‌ನಲ್ಲಿ ನೇತಾಡಿದರೆ ವಾಹನಗಳ ಪರವಾನಿಗೆ ರದ್ದು’ -ಎಸ್ಪಿ ಋಷ್ಯಂತ್

    ಮಂಗಳೂರು: ಸರಕಾರಿ ಬಸ ಸೇರಿದಂತೆ, ಖಾಸಗಿ ಬಸ್ಸುಗಳ ಫುಟ್‌ಬೋರ್ಡ್‌ನಲ್ಲಿ ನೇತಾಡಿಕೊಂಡು ಪ್ರಯಾಣಿಸುವುದು, ಶಾಲಾ ವಾಹನಗಳು ಸೇರಿದಂತೆ ಖಾಸಗಿ ವಾಹನಗಳಲ್ಲಿ ಹೆಚ್ಚುವರಿ ಪ್ರಯಾಣಿಕರನ್ನು ತುಂಬಿಸಿ ಸಾಗಾಟ ಮಾಡುತ್ತಿದ್ದರೆ ಅಂತಹ ವಾಹನಗಳನ್ನು ವಶಕ್ಕೆ ಪಡೆದು, ಪರವಾನಿಗೆ ರದ್ದುಗೊಳಿಸಲಾಗುವುದು ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ಋಷ್ಯಂತ್ ಎಚ್ಚರಿಕೆ ನೀಡಿದ್ದಾರೆ.ಎಸ್‌ಸಿ/ಎಸ್‌ಟಿ ಕುಂದುಕೊರತೆ ಆಲಿಕೆ ಸಭೆಯಲ್ಲಿ ದಲಿತ ಮುಖಂಡರ ದೂರಿನ ಮೇರೆಗೆ ಈ ಪ್ರತಿಕ್ರಿಯೆ ನೀಡಿದ ಅವರು, ಪ್ರತಿ ಠಾಣಾ ವ್ಯಾಪ್ತಿಯಿಂದ ಈ ನಿಟ್ಟಿನಲ್ಲಿ ದಾಖಲಿಸಿದ ಪ್ರಕರಣಗಳ ವರದಿಯನ್ನು ಡಿ. 25ರೊಳಗೆ ನನಗೆ ಒದಗಿಸಬೇಕು ಎಂದುಪೊಲೀಸ್ ಅಧಿಕಾರಿಗಳಿಗೆನಿರ್ದೇಶನ ನೀಡಿದ್ದಾರೆ.ದಲಿತ ನಾಯಕಿ ಈಶ್ವರಿ ಅವರು ವಿಷಯ ಪ್ರಸ್ತಾಪಿಸಿ, ಬೆಳ್ತಂಗಡಿ ಭಾಗದಲ್ಲಿ ಸರಕಾರಿ ಬಸ್ಸಿನಲ್ಲಿ ಫುಟ್‌ಬೋರ್ಡ್‌ನಲ್ಲಿ ಅಪಾಯಕಾರಿಯಾಗಿ ನೇತಾಡಿಕೊಂಡು ಪ್ರಯಾಣಿಸುವ ಪರಿಸ್ಥಿತಿ ಇದೆ. ಹೆಚ್ಚುವರಿ ಬಸ್ಸಿನ ವ್ಯವಸ್ಥೆ ಆಗಬೇಕು. ಈ ಬಗ್ಗೆ ಸಂಬಂಧಪಟ್ಟವರಿಗೆ ಪೊಲೀಸ್ ಇಲಾಖೆಯಿಂದ ಶಿಫಾರಸು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss